ಉಡುಪಿ | ಖಿದ್ಮಾ ಫೌಂಡೇಶನ್ ವತಿಯಿಂದ “ನಮ್ಮ ಭೂಮಿ”ಯಲ್ಲಿ ಈದ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Date:

ಖಿದ್ಮಾ ಫೌಂಡೇಶನ್ ವತಿಯಿಂದ ಸದ್ಭಾವನಾ ವೇದಿಕೆ ಸಹಯೋಗದೊಂದಿಗೆ ಕುಂದಾಪುರ ತಾಲೂಕಿನ ಕನ್ಯಾನ ಗ್ರಾಮದ ಹಟ್ಟಿಯಂಗಡಿಯ ರಾಜ್ಯ ಸಂಪನ್ಮೂಲ ಕೇಂದ್ರ “ನಮ್ಮ ಭೂಮಿ”ಯಲ್ಲಿ ಈದ್ ಸ್ನೇಹ ಸಮ್ಮಿಲನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಮೌಲಾನಾ ಝಮೀರ್ ಅಹ್ಮದ್ ರಶಾದಿ ಅವರು, ಪವಿತ್ರ ರಮಝಾನ್ ತಿಂಗಳು ತ್ಯಾಗ, ಬಲಿದಾನ, ಕ್ಷಮೆ ಮತ್ತು ಸಹಾನುಭೂತಿ ಮೌಲ್ಯಗಳನ್ನು ಬೆಳೆಸುವುದರೊಂದಿಗೆ, ಸಮಾಜದ ಬಡ ಹಾಗೂ ಸಂಕಷ್ಟದಲ್ಲಿರುವ ಜನರ ನೆರವಿಗೆ ಮುಂದಾಗುವ ಪ್ರೇರಣೆಯನ್ನು ನೀಡುತ್ತದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಯಾಕೂಬ್ ಖಾದರ್ ಗುಲ್ವಾಡಿ ಅವರು ಸೌಹಾರ್ದ ಸಂದೇಶ ನೀಡಿ, ಪರಸ್ಪರ ಪ್ರೀತಿ, ಗೌರವ ಮತ್ತು ಸಹಕಾರದಿಂದ ಒಟ್ಟಾಗಿ ಬದುಕುವುದೇ ಸೌಹಾರ್ದತೆಯ ಮೂಲವಾಗಿದ್ದು, ಭಿನ್ನ ಧರ್ಮ, ಭಾಷೆ ಮತ್ತು ಸಂಸ್ಕೃತಿಗಳ ನಡುವೆಯೂ ಪರಸ್ಪರ ಅರ್ಥಮಾಡಿಕೊಂಡು ಸಹಾನುಭೂತಿಯಿಂದ ನಡೆದುಕೊಳ್ಳುವುದು ಅತ್ಯಂತ ಅಗತ್ಯ ಎಂದು ಅಭಿಪ್ರಾಯಪಟ್ಟರು.

ಖ್ಯಾತ ವಕೀಲ ಟಿ.ಬಿ. ಶೆಟ್ಟಿ ಅವರು ಮಾತನಾಡಿ, ಸತ್ಯ ಮತ್ತು ನ್ಯಾಯದ ಪರ ಸದಾ ದೃಢವಾಗಿ ನಿಲ್ಲಬೇಕು. ಟೀಕೆ ಮತ್ತು ವಿರೋಧಗಳ ನಡುವೆಯೂ ಸತ್ಯದ ದಾರಿ ತೊರೆಯಬಾರದು. ಸತ್ಯದ ಮೇಲೆ ನಿಂತಿರುವ ವ್ಯಕ್ತಿಯ ಧೈರ್ಯ ಇತರರಿಗೆ ಪ್ರೇರಣೆಯಾಗಿದ್ದು, ಅದು ಸಮಾಜದಲ್ಲಿ ನ್ಯಾಯ ಮತ್ತು ಸಮಾನತೆಯನ್ನು ಸ್ಥಾಪಿಸುವ ಶಕ್ತಿಯಾಗುತ್ತದೆ ಎಂದು ಹೇಳಿದರು. ಜೊತೆಗೆ, ಭಿನ್ನಾಭಿಪ್ರಾಯಗಳನ್ನು ಶಾಂತಿಯುತವಾಗಿ ಪರಿಹರಿಸುವುದು ಹಾಗೂ ಸಂಕಷ್ಟದ ಸಮಯದಲ್ಲಿ ಪರಸ್ಪರ ಸಹಾಯ ಮಾಡುವುದು ಸೌಹಾರ್ದತೆಯ ಮುಖ್ಯ ಲಕ್ಷಣಗಳಾಗಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶ್ರೀಮತಿ ಜುಡಿತ್ ಮೆಂಡೊನ್ಸಾ, ಉದಯ ಗಾಂವ್ಕರ್ ಹಾಗೂ ವಾಸುದೇವ ಗಂಗೇರ ಸಂದರ್ಭೋಚಿತವಾಗಿ ಮಾತನಾಡಿದರು. ವಿದ್ಯಾರ್ಥಿಗಳ ಸದ್ಭಾವನಾ ಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. “ನಮ್ಮ ಭೂಮಿ” ನಿರ್ದೇಶಕ ಶ್ರೀನಿವಾಸ ಗಾಣಿಗ ಸ್ವಾಗತಿಸಿದರು. ಖಿದ್ಮಾ ಫೌಂಡೇಶನ್ ಅಧ್ಯಕ್ಷ ಶೇಖ್ ಅಬು ಮುಹಮ್ಮದ್ ಅಧ್ಯಕ್ಷತೆ ವಹಿಸಿದರು. ಶ್ರೀಮತಿ ಕೃಪಾ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರಫೀಕ್ ವಂಡ್ಸೆ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ಖಿದ್ಮಾ ಫೌಂಡೇಶನ್ ಪದಾಧಿಕಾರಿಗಳು, ಸದಸ್ಯರು, ಸದ್ಭಾವನಾ ವೇದಿಕೆಯ ಸದಸ್ಯರು, “ನಮ್ಮ ಭೂಮಿ”ಯ ಹೊಣಿಗಾರರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...