ಉಡುಪಿ | ಕಿನ್ನಿಮೂಲ್ಕಿಯಲ್ಲಿ ಮಾನಸಿಕ ಅಸ್ವಸ್ಥ ಯುವಕನಿಂದ ತಡರಾತ್ರಿ ದಾಂಧಲೆ: ಸ್ಥಳೀಯರಲ್ಲಿ ಆತಂಕ

Date:

ಮಾನಸಿಕ ಅಸ್ವಸ್ಥ ಯುವಕನೊಬ್ಬ ತಡರಾತ್ರಿ ಉಗ್ರವಾಗಿ ವರ್ತಿಸಿ ದಾಂಧಲೆ ನಡೆಸಿದ ಪರಿಣಾಮ ಗಾಢ ನಿದ್ದೆಯಲ್ಲಿದ್ದ ಪರಿಸರದ ನಿವಾಸಿಗಳು ಆತಂಕಗೊಂಡ ಘಟನೆ ಕಿನ್ನಿಮೂಲ್ಕಿ ರಾಷ್ಟ್ರೀಯ ಹೆದ್ದಾರಿಯ ಬಲಾಯಿಪಾದೆ ಬಳಿ ಸೋಮವಾರ ತಡರಾತ್ರಿ ನಡೆದಿದೆ.

- Advertisement -

ನಸುಕಿನ ಜಾವ ಸುಮಾರು 3 ಗಂಟೆಯ ವೇಳೆಗೆ ಚಂದ್ರಶೇಖರ ಮಾಲಿಕತ್ವದ ಟಯರ್ ರೀಸೋಲ್ ಅಂಗಡಿಯ ಬಳಿ ಬಂದ ಯುವಕ ದಾಂಧಲೆ ನಡೆಸಲಾರಂಭಿಸಿದ್ದಾನೆ. ಇದರಿಂದ ಪರಿಸರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಸ್ಥಳಕ್ಕೆ ಧಾವಿಸಿದ 112 ತುರ್ತು ಸಹಾಯವಾಹಿನಿಯ ಪೊಲೀಸರು ಹಾಗೂ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರನ್ನು ಸ್ಥಳಕ್ಕೆ ಕರೆಸಿಕೊಂಡರು. ಬಳಿಕ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ನಿತ್ಯಾನಂದ ಒಳಕಾಡು ಅವರಿಗೆ ಹಸ್ತಾಂತರಿಸಿದರು.

ನಂತರ ಒಳಕಾಡು ಅವರು ಯುವಕನನ್ನು ಆಂಬುಲೆನ್ಸ್ ಮೂಲಕ ದೊಡ್ಡಣಗುಡ್ಡೆಯ ಡಾ. ಎ.ವಿ. ಬಾಳಿಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ವ್ಯವಸ್ಥೆ ಕಲ್ಪಿಸಿದರು. ಈ ಕಾರ್ಯಾಚರಣೆಯಲ್ಲಿ ನಗರ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಪ್ರಸನ್ನ ಹಾಗೂ ಲೋಕೇಶ್ ಸಹಕರಿಸಿದರು.

ಯುವಕ ಕೇರಳ ಮೂಲದವನೆಂದು ತಿಳಿದುಬಂದಿದ್ದು, ಈ ಕುರಿತು ಆತನ ಕುಟುಂಬದವರಿಗೆ ಮಾಹಿತಿ ನೀಡಲಾಗಿತ್ತು. ತಕ್ಷಣವೇ ಹೆತ್ತವರು ಉಡುಪಿಗೆ ಬಂದಿದ್ದು, ಬಳಿಕ ಮಗನನ್ನು ಹೆತ್ತವರ ಮಡಿಲಿಗೆ ಒಪ್ಪಿಸಲಾಯಿತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

ದಕ್ಷಿಣ ಕನ್ನಡ | ಆರೋಗ್ಯ ಸಚಿವರ ತಾಲ್ಲೂಕಿನಲ್ಲೇ ಆಸ್ಪತ್ರೆ ಇಲ್ಲ

ಆರೋಗ್ಯ ಸಚಿವರ ತಾಲ್ಲೂಕಿನಲ್ಲೇ ತಾಲ್ಲೂಕು ಮಟ್ಟದ ಆಸ್ಪತ್ರೆ ಇಲ್ಲದಿರುವುದು ಜಿಲ್ಲೆಯ ಆರೋಗ್ಯ...