ಉಡುಪಿ | ಕೊರಗರ ಭೂಮಿ ಸಮಸ್ಯೆ ಪರಿಹಾರಕ್ಕೆ ಆಗ್ರಹ: ಆದಿವಾಸಿ ಭವನ ದುರಸ್ತಿಗೂ ಒತ್ತಾಯ

Date:

ಉಡುಪಿಯ ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಮಟ್ಟದ ಕೊರಗ ಸಮುದಾಯದ ಕುಂದುಕೊರತೆಗಳ ಸಭೆಯಲ್ಲಿ ಸಮುದಾಯದ ವಿವಿಧ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಮುಖಂಡರು ಒತ್ತಾಯಿಸಿದರು.

- Advertisement -

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೊರಗ ಸಮುದಾಯದ ಭೂಮಿ ಸಮಸ್ಯೆ, ಆದಿವಾಸಿ ಭವನದ ದುರಸ್ತಿ, ಆರೋಗ್ಯ ಕಾರ್ಡ್ ವಿತರಣೆ, ಕುಡಿಯುವ ನೀರು ಹಾಗೂ ನಿರುದ್ಯೋಗಿ ಯುವಕರಿಗೆ ಉದ್ಯೋಗ ಒದಗಿಸುವ ಕುರಿತು ಚರ್ಚೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಸಭೆಯಲ್ಲಿ ಮಾತನಾಡಿದ ಕೊರಗ ಸಂಘಟನೆಗಳ ಮುಖಂಡ ಪುತ್ರನ್ ಹೆಬ್ರಿ, ಕೊರಗ ಸಮುದಾಯದ ಭೂಮಿ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ಯಾವುದೇ ಸ್ಪಂದನೆ ನೀಡುತ್ತಿಲ್ಲ. ಈ ಹಿಂದೆ ಬ್ರಹ್ಮಾವರದಲ್ಲಿ ಸಭೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಲವು ವರ್ಷಗಳಿಂದ ಸಮಸ್ಯೆ ಮುಂದುವರಿದಿದ್ದರೂ ಪರಿಹಾರ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೆಲವು ಕಡೆ ಕೊರಗ ಸಮುದಾಯದ ಭೂಮಿಯನ್ನು ಅತಿಕ್ರಮಣ ಮಾಡಲಾಗಿದ್ದು, ಅದನ್ನು ತೆರವುಗೊಳಿಸಿ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಬ್ರಹ್ಮಾವರ ತಹಶೀಲ್ದಾರ್ ಎ.ಎನ್. ಭಟ್, ಸಮಸ್ಯೆಯನ್ನು ಪರಿಶೀಲಿಸಿ ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳುವುದಾಗಿ ಭರವಸೆ ನೀಡಿದರು.

ಆದಿವಾಸಿ ಭವನ ದುರಸ್ತಿಗೆ 76 ಲಕ್ಷ ರೂ. ಪ್ರಸ್ತಾವನೆ

ಉಡುಪಿ ಪುತ್ತೂರಿನಲ್ಲಿ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಆದಿವಾಸಿ ಭವನದಲ್ಲಿ ಹಲವು ಸಮಸ್ಯೆಗಳಿದ್ದು, ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಸಮುದಾಯದ ಮುಖಂಡರು ಒತ್ತಾಯಿಸಿದರು.

ಐಟಿಡಿಪಿ ಯೋಜನಾಧಿಕಾರಿ ನಾರಾಯಣಸ್ವಾಮಿ ಮಾತನಾಡಿ, ಭವನದ ದುರಸ್ತಿಗಾಗಿ 76 ಲಕ್ಷ ರೂ. ಅನುದಾನ ಕೋರಿ ಕೇಂದ್ರ ಕಚೇರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ ಮಾತನಾಡಿ, ಭವನದ ಆವರಣವನ್ನು ಸಮತಟ್ಟುಗೊಳಿಸಲಾಗಿದ್ದು, ಪುರಭವನದ ಮಾದರಿಯಲ್ಲಿ ಬಾಡಿಗೆಗೆ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿಸಿದರು.

ಆರೋಗ್ಯ ಕಾರ್ಡ್, ಕುಡಿಯುವ ನೀರಿನ ಸಮಸ್ಯೆ

ನಗರಸಭೆಯಿಂದ ವಿತರಿಸಲಾಗುವ ಮುಖ್ಯಮಂತ್ರಿ ಆರೋಗ್ಯ ಕಾರ್ಡ್ ಕೊರಗ ಸಮುದಾಯದ ಎಲ್ಲ ಅರ್ಹ ಫಲಾನುಭವಿಗಳಿಗೆ ದೊರೆಯುತ್ತಿಲ್ಲ ಎಂದು ಗಣೇಶ್ ಕುಂದಾಪುರ, ಗೌರಿ ಹಾಗೂ ಪುತ್ರನ್ ಹೆಬ್ರಿ ದೂರಿದರು. ಗ್ರಾಮೀಣ ಪ್ರದೇಶದ ಕೊರಗರಿಗೂ ಐಟಿಡಿಪಿ ಇಲಾಖೆಯ ಆರೋಗ್ಯ ಯೋಜನೆಗಳ ಸೌಲಭ್ಯ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನಿಟ್ಟೂರಿನ ಕೊರಗ ಕಾಲೋನಿಯ ಸಮೀಪದ ಬಾವಿಯ ನೀರು ಕಲುಷಿತಗೊಂಡಿದ್ದು, ಕುಡಿಯಲು ಯೋಗ್ಯವಲ್ಲದ ನೀರನ್ನು ಬಳಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಭೆಯಲ್ಲಿ ಗಮನ ಸೆಳೆಯಲಾಯಿತು. ಬಾವಿಯ ನೀರನ್ನು ತಕ್ಷಣ ಪರೀಕ್ಷಿಸಿ, ನೀರು ಕಲುಷಿತಗೊಳ್ಳಲು ಕಾರಣವಾಗಿರುವ ಸಮೀಪದ ವಸತಿ ಸಮುಚ್ಚಯದ ಪಿಟ್‌ನ್ನು ಸ್ಥಳಾಂತರಿಸುವಂತೆ ಶಾಸಕ ಯಶ್‌ಪಾಲ್ ಸುವರ್ಣ ಪೌರಾಯುಕ್ತರಿಗೆ ಸೂಚಿಸಿದರು.

ಸರಕಾರಿ ಉದ್ಯೋಗಕ್ಕೆ ನೇರ ನೇಮಕಾತಿಗೆ ಆಗ್ರಹ

ಕೊರಗ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಕಲ್ಪಿಸಬೇಕು ಎಂದು ಮುಖಂಡರು ಆಗ್ರಹಿಸಿದರು.

ಯುವಕರಿಗೆ ತರಬೇತಿ ನೀಡುವ ಪ್ರಸ್ತಾಪಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗಣೇಶ್ ಕುಂದಾಪುರ, ಸಮುದಾಯದ ಯುವಕರಿಗೆ ತರಬೇತಿಯ ಬದಲು ಉದ್ಯೋಗದಲ್ಲಿ ನೇರ ನೇಮಕಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಯಶ್‌ಪಾಲ್ ಸುವರ್ಣ, ಕೊರಗ ಸಮುದಾಯದ ವಿದ್ಯಾವಂತ ಯುವಕರ ಅಂಕಿಅಂಶ ಸಂಗ್ರಹಿಸಿ ವಿವಿಧ ಕಂಪೆನಿಗಳ ಸಹಯೋಗದಲ್ಲಿ ಉದ್ಯೋಗ ಮೇಳ ಆಯೋಜಿಸಬೇಕು. ಸಹಕಾರಿ ಸಂಸ್ಥೆಗಳಲ್ಲಿಯೂ ಉದ್ಯೋಗಾವಕಾಶ ಕಲ್ಪಿಸಲು ಅಧಿಕಾರಿಗಳು ಪ್ರಯತ್ನಿಸಬೇಕು ಎಂದರು.

ಸಭೆಯಲ್ಲಿ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯಾ, ರಾಮದಾಸ್ ಹಾಗೂ ಕೊರಗ ಸಂಘಟನೆಗಳ ವಿವಿಧ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೊರಬ | ನವೆಂಬರ್ 25ರಿಂದ ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಹೋರಾಟ

ಅಕ್ಷರದಾಸೋಹ ಯೋಜನೆಯಡಿ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಿ ಬಡಿಸುತ್ತಿರುವ ಅಡುಗೆ ನೌಕರರ...

ನ.26ರಂದು ಕಂದಗಲ್‌ ಹನುಮಂತರಾಯ ರಂಗಮಂದಿರದಲ್ಲಿ ಸಂವಿಧಾನ ದಿನಾಚರಣೆ

ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ ಪಾಠ!

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ...

ರಾಯಚೂರು | ನಗರದ ಅಭಿವೃದ್ಧಿ, ಸಿಎ ನಿವೇಶನಗಳ ಅತಿಕ್ರಮಣ ತೆರವಿಗೆ ಆದ್ಯತೆ: ರುದ್ರಪ್ಪ ಅಂಗಡಿ

ನಗರದ ಅಭಿವೃದ್ಧಿಗೆ ಅಗತ್ಯವಿರುವ ಮೂಲಸೌಕರ್ಯ ಕಲ್ಪಿಸುವುದರ ಜತೆಗೆ, ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ...