ಉಡುಪಿ | ಸಾಮಾಜಿಕ ಸಂಘಟನೆಗಳ ಹೆಸರಿನಲ್ಲಿ ಹಣ ಉಸುಲಿ ಯತ್ನ: ನಾಲ್ವರ ವಿರುದ್ಧ ಪ್ರಕರಣ ದಾಖಲು

Date:

ಯುವ ಉದ್ಯಮಿ ಹಾಗೂ ರಾಜ್ಯ ಯುವ ಕಾಂಗ್ರೆಸ್ ಮುಖಂಡರ ಹೆಸರನ್ನು ಗುರಿಯಾಗಿಸಿಕೊಂಡು, ದಲಿತ ಸಂಘಟನೆಗಳು ಮತ್ತು ಅಧಿಕಾರಿಗಳ ಹೆಸರನ್ನು ದುರುಪಯೋಗಪಡಿಸಿಕೊಂಡು ಹಣ ಉಸುಲಿ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಪೊಲೀಸ್ ಠಾಣೆಯಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

ಕೊತ್ತಾಡಿ ವಿಜಯಕುಮಾರ್ ಶೆಟ್ಟಿ, ಬನ್ನಾಡಿ ಅಶೋಕ್ ಶೆಟ್ಟಿ, ತೆಂಕನಡಿಯೂರು ರಮೇಶ್ ಕೋಟ್ಯನ್ ಸೇರಿದಂತೆ ಇತರರ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಬನ್ನಾಡಿ ಅಂಚೆ ವಡ್ಡರ್ಸೆ ಗ್ರಾಮದ ಅಜಿತ್ ಕುಮಾರ್ ಶೆಟ್ಟಿ (32) ಅವರು ನೀಡಿದ ದೂರಿನ ಪ್ರಕಾರ, ಅವರು ತಮ್ಮ ಪಟ್ಟಾ ಜಾಗದ 78 ಸೆಂಟ್ಸ್ ಪ್ರದೇಶದಲ್ಲಿ ಗಣಿ ಇಲಾಖೆಯಿಂದ ಪರವಾನಿಗೆ ಪಡೆದು, ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅನುಮತಿ (NOC) ಪಡೆದುಕೊಂಡು ಟಿಪ್ಪರ್‌ಗಳ ಮೂಲಕ ಕುಂದಾಪುರ ಭಾಗದ ಹಂಚಿನ ಕಾರ್ಖಾನೆಗಳಿಗೆ ಮಣ್ಣು ಸರಬರಾಜು ಮಾಡುತ್ತಿದ್ದರು. ಏಪ್ರಿಲ್ 10ರಂದು ಬೆಳಿಗ್ಗೆ 10:45ರ ಸುಮಾರಿಗೆ ಮೊದಲ ಆರೋಪಿ ತಾನು ರಮೇಶ್ ತೆಂಕನಡಿಯೂರು ಎಂದು ಹೇಳಿಕೊಂಡು, ಉಡುಪಿ ತಹಶೀಲ್ದಾರ್ ಕಚೇರಿಗೆ ಹಾಜರಾಗುವಂತೆ ತಿಳಿಸಿದ್ದಾನೆ. ಅಲ್ಲದೆ ವಿವಿಧ ಅಧಿಕಾರಿಗಳಿಗೆ ಹಣ ನೀಡಬೇಕಿದ್ದು, ಒಂದು ತಿಂಗಳ ವ್ಯವಹಾರ ನಡೆಸಲು ಅವಕಾಶ ನೀಡುವುದಾಗಿ ಹೇಳಿ ₹2.25 ಲಕ್ಷ ಹಣ ನೀಡುವಂತೆ ಒತ್ತಾಯಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಇದಾದ ನಂತರ ಸುಮಾರು ಒಂದು ಗಂಟೆಯೊಳಗೆ ಎರಡನೇ ಆರೋಪಿ ‘ನ್ಯೂಸ್ ನೆಕ್ಸ್ಟ್’ ವೆಬ್ ಚಾನೆಲ್‌ನಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ನಡೆಯುತ್ತಿದೆ ಎಂಬ ಸುದ್ದಿ ಪ್ರಸಾರ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನು, ದೂರುದಾರರು ತಮ್ಮ ಮನೆಗೆ ತೆರಳುವ ವೇಳೆ ಬನ್ನಾಡಿ ಗರಡಿ ರಸ್ತೆಯಲ್ಲಿ ಮೂರನೇ ಆರೋಪಿ ಅಶೋಕ್ ಶೆಟ್ಟಿ ಹಾಗೂ ನಾಲ್ಕನೇ ಆರೋಪಿ ವಿಜಯ ಶೆಟ್ಟಿ ಕಾರನ್ನು ಅಡ್ಡಗಟ್ಟಿ, “ನ್ಯೂಸ್ ಹಾಗೂ ವಾಟ್ಸಪ್ ಗುಂಪುಗಳಲ್ಲಿ ನಿನ್ನ ಬಗ್ಗೆ ಮಾಹಿತಿ ಹರಡಿದ್ದೇವೆ. ವಿಷಯ ಮುಚ್ಚಿಹಾಕಲು ₹2 ಲಕ್ಷ ಹಣ ನೀಡಬೇಕು” ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಅದೇ ವೇಳೆ, ಮೂರನೇ ಆರೋಪಿಯು ಸಾರ್ವಜನಿಕರ ನಕಲಿ ಸಹಿಗಳನ್ನು ಬಳಸಿ ತಪ್ಪು ಅರ್ಜಿಗಳನ್ನು ಸಲ್ಲಿಸಿರುವುದಾಗಿ ಸಹ ಆರೋಪಿಸಲಾಗಿದೆ.

ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 62/2026 ಅಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 126(2), 308(2)ರಂತೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆ ಹಾಗೂ ಹೆಚ್ಚಿನ ತನಿಖೆ ಮುಂದುವರಿದಿದೆ.

1010433065

ಈ ಕುರಿತು ಈದಿನ.ಕಾಮ್‌ ಜೊತೆ ಮಾತನಾಡಿದ ದೂರುದಾರ ಹಾಗೂ ಗುತ್ತಿಗೆದಾರ ಅಜಿತ್‌ ಶೆಟ್ಟಿ ಅವರು, ಉಡುಪಿ ತಾಲೂಕಿನ ಬೆಳ್ಳಂಪಳ್ಳಿ ಗ್ರಾಮದಲ್ಲಿ ಸುಮಾರು 78 ಸೆಂಟ್ಸ್ ಜಾಗವನ್ನು ಸುಧಾಕರ್ ಶೆಟ್ಟಿಯವರಿಂದ ಖರೀದಿಸಿ, ಗಣೀ ಇಲಾಖೆಯಿಂದ ಕಾನೂನುಬದ್ದವಾಗಿ ಲೀಸ್ ಪಡೆದು ಆಮೆ ಮಣ್ಣಿನ ಸಾಗಾಟವನ್ನು ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಈ ವ್ಯವಹಾರವನ್ನು ನಡೆಸುತ್ತಿದ್ದು, ಕರಾವಳಿ ಪ್ರದೇಶದ ಪ್ರಸಿದ್ಧ ಕುಂದಾಪುರ ಹಂಚು ದೇಶದ ವಿವಿಧ ಭಾಗಗಳಿಗೆ ಸರಬರಾಜಾಗುತ್ತದೆ. ಬಡವರು ಮನೆ ನಿರ್ಮಾಣಕ್ಕೆ ಬಳಸುವ ಈ ಹಂಚಿಗೆ ಆಮೆ (ಕಜೆ) ಮಣ್ಣು ಅತ್ಯವಶ್ಯಕವಾಗಿದ್ದು, ಈ ಉದ್ಯಮದ ಮೇಲೆ ಸುಮಾರು ನಾಲ್ಕು ಸಾವಿರ ಕಾರ್ಮಿಕರ ಜೀವನ ಅವಲಂಬಿತವಾಗಿದೆ ಎಂದು ಅವರು ಹೇಳಿದ್ದಾರೆ.

ತಾವು ಸರ್ಕಾರಕ್ಕೆ ರಾಯಲ್ಟಿ ಪಾವತಿಸಿ ಕಾನೂನುಬದ್ದವಾಗಿ ವ್ಯವಹಾರ ನಡೆಸುತ್ತಿದ್ದರೂ, ತಮ್ಮ ವಿರುದ್ಧ ಸುಳ್ಳು ಮಾಹಿತಿಯನ್ನು ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ಆರೋಪಿಸಿ, ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ಸಾಮಾಜಿಕ ಸಂಘಟನೆಗಳ ಹೆಸರನ್ನು ದುರುಪಯೋಗಪಡಿಸಿಕೊಂಡು ಇಂತಹ ಕೃತ್ಯಗಳಲ್ಲಿ ತೊಡಗುವುದು ಖಂಡನೀಯವಾಗಿದ್ದು, ತಪ್ಪಿತಸ್ಥರಿಗೆ ಕಾನೂನು ಕ್ರಮದ ಮೂಲಕ ತಕ್ಕ ಶಿಕ್ಷೆ ನೀಡಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...