ಉಡುಪಿ | ಕೋಟ ಜಾಮಿಯಾ ಮಸ್ಜಿದ್ ಸಾಮಾಜಿಕ ಕಾರ್ಯ ಸೌಹಾರ್ದತೆಗೆ ಸಾಕ್ಷಿ‌ : ಇದ್ರಿಸ್ ಹೂಡೆ

Date:

ರಂಜಾನ್ ಮಾಸ ಪವಿತ್ರವಾದ ಮಾಸದ ಜೊತೆಗೆ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಪಸರಿಸಿಕೊಂಡಿದೆ ಎಂದು ಹೂಡೆ ಐಡಿಯಲ್ ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥ ಇದ್ರಿಸ್ ಹೂಡೆ ಹೇಳಿದರು.

- Advertisement -

ಶುಕ್ರವಾರ ರಂಜಾನ್ ಹಬ್ಬದ ಪ್ರಯುಕ್ತ ಕೋಟ ಜಾಮಿಯಾ ಮಸ್ಜಿದ್ ಇಲ್ಲಿ ರಮದಾನ್ ಈದ್ ಸಂದೇಶ 2026 ಅರ್ಹರಿಗೆ ಸಹಾಯಧನ ವಿತರಣಾ ಕಾರ್ಯಕ್ರಮದಲ್ಲಿ ಸಹಾಯಧನ ಚೆಕ್ ವಿತರಿಸಿ ಮಾತನಾಡಿ ಕುರಾನ್ ಉದ್ದೇಶ ಜಗತ್ತದಲ್ಲಿ ಸೌಹಾರ್ದತೆ,ಶಾಂತಿ,ನೆಮ್ಮದಿಯ ವಾತಾವರಣದ ಜೊತೆಗೆ ಬೆರೆತು ಜೀವಿಸುವುದಾಗಿದೆ, ಈ ದಿಸೆಯಲ್ಲಿ ರಂಜಾನ್ ಮಾಸದ ಉಪವಾಸ ಅರ್ಥಪೂರ್ಣ ಭಕ್ತಿಯೊಂದಿಗೆ ಸಾಮರಸ್ಯದ ಬದುಕಿಗೆ ಮುನ್ನುಡಿ ಬರೆದಿದೆ ಇದಕ್ಕೆ ಕೋಟದ ಈ ಕಾರ್ಯಕ್ರಮವೇ ಸಾಕ್ಷಿಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...
1010111840

ಇದೇ ವೇಳೆ ಆಯ್ದ ಹಿಂದೂ ಅಶಕ್ತ, ಅನಾರೋಗ್ಯ ಪೀಡಿತರಿಗೆ ನೆರವನ್ನು ಗಣ್ಯರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.
ಕೋಟತಟ್ಟುವಿನ ಎಂಟು ಕೊರಗ ಕುಟುಂಬಗಳಿಗೆ ಚೇರ್ ಅನ್ನು ಹಸ್ತಾಂತರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಕೋಟ ಜಾಮಿಯಾ ಮಸ್ಜಿದ್ ಅಧ್ಯಕ್ಷ ಪ್ಲೆಸೆಂಟ್ ಇಬ್ರಾಹಿಂ ಸಾಹೇಬ್ ಕೋಟ ವಹಿಸಿ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕೋಟ ಜಾಮಿಯಾ ಮಸ್ಜಿದ್ ಧರ್ಮಗುರು ಮೌಲಾನಾ ಸಮೀರ‍್ರಾಹಮನ್ ರಂಜಾನ್ ಸಂದೇಶ ನೀಡಿದರು.

Untitled design 20260315 161436 0000
ಜಾಹಿರಾತು

ಮುಖ್ಯ ಅತಿಥಿಗಳಾಗಿ ಕೋಟತಟ್ಟು ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ ಸತೀಶ್ ಕುಂದರ್, ಕೋಟ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ ಶೆಟ್ಟಿ, ಕೋಟತಟ್ಟು ಪಂಚಾಯತ್ ಪಿಡಿಒ ರವೀಂದ್ರ ರಾವ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಮಸ್ಜಿದ್ ಸಮಿತಿ ಕಾರ್ಯದರ್ಶಿ ಬಷೀರ್ ಸಾಹೇಬ್ ನಿರೂಪಿಸಿದರು. ಆಸಿಫ್ ತೆಕ್ಕಟ್ಟೆ ವಂದಿಸಿದರು. ಇದಾದ ಬಳಿಗ ಸಿಹಿ ಹಂಚಿ ರಂಜಾನ್ ಹಬ್ಬವನ್ನು ಆಚರಿಸಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ನಾಗರಮಡಿ ಫಾಲ್ಸ್‌ನಲ್ಲಿ ಪ್ರವಾಸಿಗರು–ಸ್ಥಳೀಯರ ನಡುವೆ ಗಲಾಟೆ; ದೂರು ಪ್ರತಿದೂರು ದಾಖಲು

ಕಾರವಾರ: ತಾಲೂಕಿನ ಚೆಂಡಿಯಾ ಸಮೀಪದ ನಾಗರಮಡಿ ಫಾಲ್ಸ್‌ನಲ್ಲಿ ಬಾಟಲಿ ಎಸೆದ ವಿಚಾರಕ್ಕೆ...

ಬಳ್ಳಾರಿ | ಮತದಾರರ ಹೆಸರು ತೆಗೆದುಹಾಕಲು ಸಂಚು: ಕಾರ್ಪೊರೇಟರ್, ಪಾಲಿಕೆ ಅಧಿಕಾರಿಗಳ ವಿರುದ್ಧ FIR

ಬಳ್ಳಾರಿ ನಗರ ಕ್ಷೇತ್ರದ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ತೆಗೆದು ಹಾಕಲು...

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...