80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜೀವನ್ ಮಿತ್ರ ಸೇವಾ ಟ್ರಸ್ಟ್ (ರಿ.) ಕೋಟ ವತಿಯಿಂದ ಹಂದಟ್ಟು ಕೆಚ್ಕೆರೆ ಅಂಗನವಾಡಿ ಕೇಂದ್ರದಲ್ಲಿ ಚಿಣ್ಣರೊಂದಿಗೆ ವಿಶೇಷವಾಗಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಚಿಣ್ಣರೊಂದಿಗೆ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಹಂಚಿಕೊಂಡ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸದಸ್ಯರು, ಮಕ್ಕಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. ಇದೇ ಸಂದರ್ಭದಲ್ಲಿ ಅಂಗನವಾಡಿ ಚಿಣ್ಣರಿಗೆ ‘ಜೀವನ್ ಮಿತ್ರ ಕಿಟ್’ ವಿತರಿಸಿ, ಸಿಹಿತಿಂಡಿ ಹಂಚುವ ಮೂಲಕ ಮಕ್ಕಳ ಸಂತಸವನ್ನು ಹೆಚ್ಚಿಸಿದರು.
ಮಕ್ಕಳ ಮುಖದಲ್ಲಿ ನಗು ಮೂಡಿಸುವುದರ ಜೊತೆಗೆ, ಸ್ವಾತಂತ್ರ್ಯೋತ್ಸವದ ಮಹತ್ವವನ್ನು ಚಿಣ್ಣರೊಂದಿಗೆ ಹಂಚಿಕೊಳ್ಳುವ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸರಳತೆ, ಸೇವೆ ಹಾಗೂ ಮಕ್ಕಳ ಮೇಲಿನ ಕಾಳಜಿಯೊಂದಿಗೆ ನಡೆದ ಕಾರ್ಯಕ್ರಮ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಜೀವನ್ ಮಿತ್ರ ಸೇವಾ ಟ್ರಸ್ಟ್‌ನ ಸಂಸ್ಥಾಪಕ ನಾಗರಾಜ್ ಪುತ್ರನ್, ಸಂಸ್ಥೆಯ ಮುಂದಾಳು ನಾಗೇಂದ್ರ ಪುತ್ರನ್ ಕೋಟ, ಅಂಗನವಾಡಿ ಸಿಬ್ಬಂದಿ ವರ್ಗ ಹಾಗೂ ಜೀವನ್ ಮಿತ್ರ ಸಂಸ್ಥೆಯ ಸರ್ವ ಸದಸ್ಯರು ಉಪಸ್ಥಿತರಿದ್ದರು. ಆಶಾ ಕಾರ್ಯಕರ್ತೆ ಪೂರ್ಣಿಮಾ ಕೋಟ ಅವರು ಧನ್ಯವಾದ ಅರ್ಪಿಸಿದರು.





