ಉಡುಪಿ | ಬಿಜೆಪಿಗೆ ಮುಜುಗರ ತರಿಸಿದ ಪ್ರಥ್ವಿರಾಜ್ ನ ರೆಸಾರ್ಟ್‌ ದಂಧೆ : ನಾಗೇಂದ್ರ ಪುತ್ರನ್‌

Date:

ಕಾಂಗ್ರೆಸ್‌ನಲ್ಲಿದ್ದಾಗ ಅನೈತಿಕ ದಂಧೆ ನಡೆಸಲು ಅವಕಾಶ ಸಿಗದ ಕಾರಣ ಬಿಜೆಪಿ ಪಕ್ಷವನ್ನು ಸೇರಿ, ಸಿಕ್ಕಸಿಕ್ಕಿದ್ದಕ್ಕೆಲ್ಲ ಪ್ರತಿಭಟನೆ ಮಾಡಿ, ಉಡುಪಿ ಜಿಲ್ಲಾ ಯುವಮೋರ್ಚಾದ ಅಧ್ಯಕ್ಷ ಸ್ಥಾನವನ್ನು ಪಡೆದು, ಈಗ ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ ಎಂಬಂತೆ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್‌ ಶೆಟ್ಟಿ ಬಿಲ್ಲಾಡಿ ಅವರ ರೆಸಾರ್ಟ್‌ನಲ್ಲಿ ಯಾವುದೇ ದಾಖಲೆಗಳಲ್ಲಿದೆ ವಿದೇಶಿಗರು ಅದೇನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಉಡುಪಿ ಬಿಜೆಪಿ ವಲಯದಲ್ಲಿ ಮಾತ್ರವಲ್ಲ ರಾಜ್ಯದ ಬಿಜೆಪಿ ವಲಯ ಹಾಗೂ ಜಿಲ್ಲೆಯ ಪ್ರಜ್ಞಾವಂತ ನಾಗರಿಕರಲ್ಲಿ ಉದ್ಭವಿಸಿದೆ. ಈ ಬಗ್ಗೆ ಪೊಲೀಸ್‌ ಇಲಾಖೆ ಸಮಗ್ರ ತಿನಿಖೆ ನಡೆಸಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾದ ಕೋಟ ನಾಗೇಂದ್ರ ಪುತ್ರನ್‌ ಆಗ್ರಹಿಸಿದ್ದಾರೆ.

- Advertisement -

ಚಿಕ್ಕ ವಯಸ್ಸಿನ ಸುಮಾರು ಏಳು ಮಂದಿ ಅನಧಿಕೃತವಾಗಿ ರೆಸಾರ್ಟ್‌ನಲ್ಲಿ ವಾಸಿಸುತ್ತಿರುವುದು ನಿಜವಾಗಿಯೂ ಅಚ್ಚರಿ ಮತ್ತು ಆತಂಕವನ್ನುಂಟು ಮಾಡಿದೆ. ಇಂದಿನ ದಿನಗಳಲ್ಲಿ ಸಾಮಾನ್ಯ ಲಾಡ್ಜ್‌ಗಳಲ್ಲೂ ಉಳಿದುಕೊಳ್ಳಬೇಕಾದರೆ ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದೆ. ಕನಿಷ್ಠ ಆಧಾರ್‌ ಕಾರ್ಡ್‌ ನೀಡದಿದ್ದರೂ ಅಲ್ಲಿ ಉಳಿಯಲು ಅವಕಾಶ ನೀಡುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ವಿದೇಶಿ ನಾಗರಿಕರನ್ನು ರೆಸಾರ್ಟ್‌ನಲ್ಲಿ ಕೆಲಸಕ್ಕಿರಿಸಿಕೊಂಡಿರುವುದು ಕಾನೂನುಬಾಹಿರ. ಇವರು ಯಾವ ಕೆಲಸಕ್ಕೆ ಇರಿಸಿಕೊಂಡಿದ್ದಾರೆ ಎನ್ನುವುದರ ಬಗ್ಗೆಯೂ ತನಿಖೆ ಆಗಬೇಕಿದೆ. ರೆಸಾರ್ಟ್‌ನ ಹೆಸರು ಕಂಡಾಗ ನಿಜವಾಗಿಯೂ ನೋವಾಗುತ್ತದೆ. “ಸಂಕಮ್ಮ ತಾಯಿ ರೆಸಾರ್ಟ್‌” ಇಂತಹ ಒಂದು ಉತ್ತಮವಾದ ಹೆಸರಿರುವ ರೆಸಾರ್ಟ್‌ನಲ್ಲಿ ಈ ರೀತಿಯಲ್ಲಿ ಕಾನೂನು ಉಲ್ಲಂಘನೆಯ ಕಾರ್ಯಗಳು ನಡೆಯುತ್ತಿರುವುದು ಎಷ್ಟು ಸಮಂಜಸ ಎಂದು ನಾಗೇಂದ್ರ ಪುತ್ರನ್‌ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ದೇಶಭಕ್ತಿ, ಸಂಸ್ಕಾರ, ಸಂಸ್ಕೃತಿ ಇವುಗಳನ್ನೆಲ್ಲ ಆಜೀವ ಪರ್ಯಂತ ಗುತ್ತಿಗೆ ಪಡೆದವರಂತೆ ವರ್ತಿಸುವ ಬಿಜೆಪಿ ಪ್ರಮುಖರು ಇಂಥ ಕಾನೂನು ಬಾಹೀರ ಚಟುವಟಿಕೆಗಳಲ್ಲಿ ಪಾಲ್ಗೊಂಡವರ ವಿರುದ್ಧ ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬದುನ್ನು ಕಾದು ನೋಡಬೇಕು. ಬೇರೆ ದೇಶಗಳಿಂದ ಜನ ಬಂದರೆ ಅವರು ಬಾಂಬ್‌ ಹಾಕಲು ಬರುತ್ತಾರೆ, ಅವರು ನಮ್ಮ ಕೆಲಸ ಕಸಿದುಕೊಳ್ಳಲು ಬರುತ್ತಾರೆ ಎಂದು ಸಭೆ ಸಮಾರಂಭಗಲ್ಲಿ ಕೂಗಿ ಪ್ರತಿಭಟನೆ ಮಾಡುವ. ಸಿಕ್ಕ ಸಿಕ್ಕಲ್ಲಿ ಪ್ರತಿಭಟನೆ ಮಾಡುವ ಈ ಯುವ ಮೋರ್ಚಾ ಅಧ್ಯಕ್ಷರ ಚಟುವಟಿಕೆ ನೋಡಿದರೆ ಇವರ ಉದ್ದೇಶ ಏನೆಂಬುದು ಸ್ಪಷ್ಟವಾಗುತ್ತದೆ. ಪಕ್ಷದಿಂದ ಪಕ್ಷಕ್ಕೆ ಹಾರಿದರೂ ಶೀಲ ರಕ್ಷಣೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಇಂಥ ಸಾಮಾನ್ಯ ವಿಷಯಗಳ ಅರಿವು ಜವಾಬ್ದಾರಿಯುತ ಹುದ್ದೆಯಲ್ಲಿ ಇರುವವರಿಗೆ ಇರಬೇಕಾದ ಅಗತ್ಯವಿದೆ. ಇಂಥವರು ಯಾವುದೇ ಹುದ್ದೆಯಲ್ಲಿ ಮಾತ್ರವಲ್ಲ ಪ್ರಾಥಮಿಕ ಸದಸ್ಯತ್ವದಲ್ಲೂ ಇರಲು ಅನರ್ಹರು ಎಂದು ನಾಗೇಂದ್ರ ಪುತ್ರನ್‌ ಕಿಡಿ ಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನಸಿನತ್ತ ಕರಾವಳಿ ಕನಸು: ಶೀಘ್ರದಲ್ಲೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಲಿದೆ ತುಳು!

ಕರಾವಳಿ ಜನರ ಬಹುಕಾಲದ ಕನಸು ಮತ್ತು ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ...

ಉಡುಪಿ | ಕಸ್ತೂರಿ ರಂಗನ್ ವರದಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ: ಕಾಂಗ್ರೆಸ್ ಆಗ್ರಹ

ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...