ಉಡುಪಿ | ‘ದೆಹಲಿ ಹುಲಿ ಎಲ್ಲಿದೆ?’ – NEET ವಿಚಾರದಲ್ಲಿ ಉಡುಪಿ – ಚಿಕ್ಕಮಗಳೂರು ಸಂಸದರು ಯಾಕೆ ಮೌನ ?

Date:

ಕರ್ನಾಟಕದಿಂದ ಆಯ್ಕೆಯಾಗಿ ಸಂಸತ್ತಿಗೆ ತೆರಳಿರುವ ಬಿಜೆಪಿ ಸಂಸದರು NEET ಪರೀಕ್ಷೆಯಲ್ಲಿನ ಅವ್ಯವಸ್ಥೆ ಹಾಗೂ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮೌನ ವಹಿಸಿರುವುದು ಖಂಡನೀಯ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್ ವಾಗ್ದಾಳಿ ನಡೆಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಒಂದು ಕಾಲದಲ್ಲಿ ‘ನನಗೆ ಹಿಂದಿ ಬರುವುದಿಲ್ಲ, ಆರು ತಿಂಗಳಲ್ಲಿ ಹಿಂದಿ ಕಲಿತು ದೆಹಲಿಯಲ್ಲಿ ಸಿಡಿಯುತ್ತೇನೆ’ ಎಂದು ಹೇಳಿದ್ದ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು, ಎರಡು ವರ್ಷ ಕಳೆದರೂ ವಿದ್ಯಾರ್ಥಿಗಳ ಪರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಿಲ್ಲ. ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡುವುದು ಮತ್ತು ಜನರ ಸಮಸ್ಯೆಗಳಿಗೆ ಧ್ವನಿಯಾಗುವುದು ಕೇವಲ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಮತ ಕೇಳುವುದಕ್ಕಿಂತ ದೊಡ್ಡ ಜವಾಬ್ದಾರಿ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...

“NEET ಪರೀಕ್ಷೆಯ ಅಕ್ರಮಗಳ ಬಗ್ಗೆ ಮಾತನಾಡಲು ಹಿಂದಿ ಬರಬೇಕೇ? ಅಥವಾ ಪಕ್ಷದ ವಿರುದ್ಧ ಮಾತನಾಡಲು ಸಾಧ್ಯವಾಗುತ್ತಿಲ್ಲವೇ? ಈಗಾಗಲೇ NEET ಸಂಬಂಧಿತ ಒತ್ತಡದಿಂದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿಗಳಿವೆ. ಇದಕ್ಕೆ ಯಾರು ಹೊಣೆ? ಈ ಪ್ರಶ್ನೆಗೆ ಕನ್ನಡದಲ್ಲೇ ಉತ್ತರ ನೀಡಲಿ” ಎಂದು ಅವರು ಸವಾಲು ಹಾಕಿದರು.

NEET ವ್ಯವಸ್ಥೆ ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸುವ ಸಾಧನವಾಗಬೇಕಿತ್ತು. ಆದರೆ ಇಂದು ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷೆ ರದ್ದು, ಮರುಪರೀಕ್ಷೆ ಹಾಗೂ ಗೊಂದಲಗಳಿಂದ ವಿದ್ಯಾರ್ಥಿಗಳ ಕನಸುಗಳನ್ನು ನಾಶ ಮಾಡುವ ವ್ಯವಸ್ಥೆಯಾಗಿ ಪರಿಣಮಿಸಿದೆ ಎಂದು ಆರೋಪಿಸಿದರು.

“ವರ್ಷಪೂರ್ತಿ ಶ್ರಮಪಟ್ಟು ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ. ಶ್ರೀಮಂತ ವಿದ್ಯಾರ್ಥಿಗಳಿಗೆ ಹಣದ ಮೂಲಕ ಅವಕಾಶ ದೊರೆಯುತ್ತಿದ್ದರೆ, ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳು ಕಠಿಣ ಪರಿಶ್ರಮದ ಮೂಲಕ ಮಾತ್ರ ಗುರಿ ತಲುಪಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಸಮಾನತೆಯಲ್ಲ” ಎಂದು ಹೇಳಿದರು.

ಶಿಕ್ಷಣವು ರಾಜ್ಯಗಳ ಹಕ್ಕಾಗಿದ್ದು, ಒಂದೇ ರಾಷ್ಟ್ರೀಯ ಪರೀಕ್ಷೆಯ ಮೂಲಕ ರಾಜ್ಯಗಳ ಅಧಿಕಾರವನ್ನು ಕೇಂದ್ರ ಸರ್ಕಾರ ಕಸಿದುಕೊಳ್ಳಲು ಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ಕರ್ನಾಟಕದಲ್ಲಿ ಹಲವು ವರ್ಷಗಳಿಂದ Karnataka Common Entrance Test (CET) ಪಾರದರ್ಶಕ ಹಾಗೂ ನ್ಯಾಯಯುತವಾಗಿ ನಡೆಯುತ್ತಿದ್ದು, ಗ್ರಾಮೀಣ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಸಮಾನ ಅವಕಾಶ ಕಲ್ಪಿಸಿದೆ ಎಂದು ತಿಳಿಸಿದರು.

“ವಿದ್ಯಾರ್ಥಿಗಳ ಹಿತದೃಷ್ಟಿಯಿಂದ NEET ವ್ಯವಸ್ಥೆಯನ್ನು ಮರುಪರಿಶೀಲಿಸಬೇಕು. ರಾಜ್ಯಗಳಿಗೆ ತಮ್ಮದೇ ಪ್ರವೇಶ ಪರೀಕ್ಷಾ ವ್ಯವಸ್ಥೆಯನ್ನು ರೂಪಿಸಿಕೊಳ್ಳುವ ಹಕ್ಕು ನೀಡಬೇಕು. ಕರ್ನಾಟಕದ ವಿದ್ಯಾರ್ಥಿಗಳ ಭವಿಷ್ಯವನ್ನು ರಾಜಕೀಯಕ್ಕಾಗಿ ಬಲಿಕೊಡಲು ನಾವು ಅವಕಾಶ ನೀಡುವುದಿಲ್ಲ. ವಿದ್ಯಾರ್ಥಿಗಳ ಹಕ್ಕು, ಸಮಾನತೆ ಮತ್ತು ನ್ಯಾಯಕ್ಕಾಗಿ CET ಮಾದರಿಯನ್ನು ಬಲಪಡಿಸಬೇಕು” ಎಂದು ಕೋಟ ನಾಗೇಂದ್ರ ಪುತ್ರನ್ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ವಾಟ‌ರ್ ಹೀಟರ್‌ ನಿಂದ ಮಗು ಸಾವು 

ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ  ಬಕೆಟ್‌ನಲ್ಲಿ ನೀರು ಕಾಯಿಸಲು ಹಾಕಿದ್ದ ವಾಟ‌ರ್...

ಚಿಕ್ಕಮಗಳೂರು | ಅಪಘಾತದಲ್ಲಿ ಮೃತ: ಸರ್ಕಾರದಿಂದ ಪರಿಹಾರ; ಶಾಸಕ ಹೆಚ್.ಡಿ ತಮ್ಮಯ್ಯ

ಬಿಳೇಕಲ್ಲು ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕ‌ರ್ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ಏಕಾಏಕಿ...

ಉಡುಪಿ | ಕುಂದಾಪುರ ಪತ್ರಕರ್ತನ ಮೇಲಿನ ಹಲ್ಲೆ ಪ್ರಕರಣ; ವೈದ್ಯರ ವರ್ಗಾವಣೆಗೆ ಆಗ್ರಹಿಸಿ ಉಸ್ತುವಾರಿ ಸಚಿವರಿಗೆ ಮನವಿ

ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸರ್ಜನ್...

ಚಿಕ್ಕಮಗಳೂರು | ನಾಡ ಹಬ್ಬದಲ್ಲೇ ಆಂಗ್ಲ ಭಾಷೆ ಬಳಕೆ: ಕನ್ನಡಿಗರ ಆಕ್ರೋಶ 

ಜಿಲ್ಲೆಯ ಮೂಡಿಗೆರೆ ತಾಲೂಕು ಕೇಂದ್ರದಲ್ಲಿ ನಡೆದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು...