ಉಡುಪಿ | ನೋಂದಣಿಯಿಲ್ಲದ ಆರ್ ಎಸ್ ಎಸ್ ಗೆ ಸಾವಿರಾರು ಕೋಟಿ ಆಸ್ತಿ ಹೇಗೆ?: ಕೋಟ ನಾಗೇಂದ್ರ ಪುತ್ರನ್ ಪ್ರಶ್ನೆ

Date:

ರಾಷ್ಟ್ರಿಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನೋಂದಣಿ ಮತ್ತು ಅದರ ಆಸ್ತಿ ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿರುವ ನಡುವೆ, ಕರ್ನಾಟಕ ಸರ್ಕಾರದ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ದೆಹಲಿಯ ಕೇಂದ್ರ ಭಾಗದಲ್ಲಿರುವ ಆರ್‌ಎಸ್‌ಎಸ್‌ನ ‘ಕೇಶವ ಕುಂಜ’ ಕಚೇರಿ ಕಟ್ಟಡವು ಸುಮಾರು 3.75 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡಿದ್ದು, 13 ಅಂತಸ್ತುಗಳನ್ನು ಹೊಂದಿರುವ ಈ ಕಟ್ಟಡದಲ್ಲಿ ಸುಮಾರು 300 ಕೊಠಡಿಗಳು ಹಾಗೂ 135 ಕಾರುಗಳ ಪಾರ್ಕಿಂಗ್ ವ್ಯವಸ್ಥೆ ಇದೆ ಎಂದು ಉಲ್ಲೇಖಿಸಿದರು. ಈ ಕಟ್ಟಡದ ನಿರ್ಮಾಣ ವೆಚ್ಚ ₹150 ಕೋಟಿಗೂ ಅಧಿಕವಾಗಿದ್ದು, 75 ಸಾವಿರಕ್ಕೂ ಹೆಚ್ಚು ಜನರ ದೇಣಿಗೆಯಿಂದ ನಿರ್ಮಿಸಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಇಷ್ಟೊಂದು ದೊಡ್ಡ ಆಸ್ತಿಯು ಒಂದು ನೋಂದಾಯಿತವಲ್ಲದ ಸಂಘಟನೆಯ ಹೆಸರಿನಲ್ಲಿರುವುದು ಹೇಗೆ ಎಂಬ ಪ್ರಶ್ನೆಯನ್ನು ಅವರು ಎತ್ತಿದ್ದಾರೆ. ಸಾಮಾನ್ಯವಾಗಿ ಒಂದು ಸಣ್ಣ ಅಂಗಡಿಯಿಂದ ಹಿಡಿದು ಯಾವುದೇ ಸಂಸ್ಥೆ ಕಾನೂನಿನ ಅಡಿಯಲ್ಲಿ ನೋಂದಣಿ ಮತ್ತು ಪರವಾನಿಗೆ ಪಡೆದುಕೊಳ್ಳಬೇಕಾಗಿರುವಾಗ, ಇಂತಹ ದೊಡ್ಡ ಸಂಘಟನೆಗೆ ಮಾತ್ರ ವಿನಾಯಿತಿ ಏಕೆ ಎಂಬುದನ್ನು ಸರ್ಕಾರ ಹಾಗೂ ಸಂಬಂಧಿತ ಅಧಿಕಾರಿಗಳು ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿದ್ದಾರೆ.

ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, “ಯಾವುದೇ ಸಂಘಟನೆ ಸಂವಿಧಾನದ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕಾದರೆ ನೋಂದಣಿ ಮತ್ತು ಅಗತ್ಯ ಪರವಾನಿಗೆಗಳನ್ನು ಪಡೆದುಕೊಳ್ಳಬೇಕು” ಎಂದು ಹೇಳಿರುವುದನ್ನು ಸಮರ್ಥಿಸಿಕೊಂಡಿರುವ ಕೋಟ ನಾಗೇಂದ್ರ ಪುತ್ರನ್, ಈ ನಿಲುವು ಸಂವಿಧಾನಬದ್ಧವಾಗಿದ್ದು, ಸರ್ಕಾರದ ಈ ಕ್ರಮಕ್ಕೆ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ, ಆರ್‌ಎಸ್‌ಎಸ್‌ನ ಸ್ವಾತಂತ್ರ್ಯ ಹೋರಾಟದಲ್ಲಿನ ಪಾತ್ರದ ಬಗ್ಗೆಯೂ ಅವರು ಪ್ರಶ್ನೆ ಎತ್ತಿದ್ದಾರೆ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಸಂಘಟನೆಯ ಪಾತ್ರದ ಕುರಿತು ಸಾರ್ವಜನಿಕ ಚರ್ಚೆ ನಡೆಯಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹಾಗೆಯೇ, ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್ ಹಾಗೂ ವಿ.ಡಿ. ಸಾವರ್ಕರ್ ಅವರ ನಿಲುವುಗಳನ್ನು ಉಲ್ಲೇಖಿಸಿ, ದೇಶದ ಸ್ವಾತಂತ್ರ್ಯ ಚಳವಳಿಯ ಇತಿಹಾಸವನ್ನು ಸಮಗ್ರವಾಗಿ ಅರ್ಥಮಾಡಿಕೊಳ್ಳುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಉಡುಪಿ ಜಿಲ್ಲೆಯ ಕೆಲ ಬಿಜೆಪಿ ಶಾಸಕರು ನೀಡುತ್ತಿರುವ ಹೇಳಿಕೆಗಳನ್ನು ಟೀಕಿಸಿರುವ ಅವರು, ಕಾನೂನಿನ ಮುಂದೆ ಎಲ್ಲರೂ ಸಮಾನರಾಗಿದ್ದು, ಯಾವುದೇ ಸಂಸ್ಥೆ ಅಥವಾ ಸಂಘಟನೆಗೆ ವಿಶೇಷ ವಿನಾಯಿತಿ ನೀಡಬಾರದು ಎಂದು ಒತ್ತಾಯಿಸಿದ್ದಾರೆ.

ಕೊನೆಗೆ, ದೇಶದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಂದು ಸಂಘಟನೆಯೂ ಸಂವಿಧಾನ ಮತ್ತು ಕಾನೂನಿನ ವ್ಯಾಪ್ತಿಯಲ್ಲಿಯೇ ಕಾರ್ಯನಿರ್ವಹಿಸಬೇಕು ಎಂಬುದೇ ಕಾಂಗ್ರೆಸ್ ಪಕ್ಷದ ನಿಲುವು ಎಂದು ಕೋಟ ನಾಗೇಂದ್ರ ಪುತ್ರನ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು,...

ರಾಯಚೂರು | ಅಂತರರಾಜ್ಯ ಕಳ್ಳನ ಬಂಧನ: ₹25.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ

ಸಿಂಧನೂರು ನಗರದ ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದ ವೇಳೆ ಬೀಗ...

ಯಾದಗಿರಿ | ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ; 19 ಮಂದಿ ವಿರುದ್ಧ ಪ್ರಕರಣ ದಾಖಲು

ಗಣೇಶ ಮೂರ್ತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ...

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...