ಮಹಾಲಕ್ಷ್ಮಿ ಸಹಕಾರಿ ಪ್ರಕರಣ; ಬಿ.ಕೆ. ಹರಿಪ್ರಸಾದ್ ಭೇಟಿಯಾದ ಹೋರಾಟಗಾರ ಕೋಟ ನಾಗೇಂದ್ರ ಪುತ್ರನ್‌

Date:

ಮಹಾಲಕ್ಷ್ಮಿ ಸಹಕಾರಿ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಮೂರು ವರ್ಷಗಳಿಂದ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ದೊರಕಿಸಿಕೊಡಲು ಹೋರಾಟ ನಡೆಸುತ್ತಿರುವ ಹೋರಾಟಗಾರ ಕೋಟ ನಾಗೇಂದ್ರ ಪುತ್ರನ್ ಅವರು ಇಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಭೇಟಿ ಮಾಡಿ ಮಾತುಕತೆ ನಡೆಸಿದರು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಕೋಟ ನಾಗೇಂದ್ರ ಪುತ್ರನ್, “ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸಲು ಕಳೆದ ಮೂರು ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಇದೀಗ ನ್ಯಾಯ ಸಿಗುವ ಸಮಯ ಬಂದಿದೆ. ಹೋರಾಟದ ಸಂದರ್ಭದಲ್ಲಿ ನಮ್ಮನ್ನು ದಾರಿ ತಪ್ಪಿಸಲು ಹಲವು ರೀತಿಯ ಪಿತೂರಿ ನಡೆಸಲಾಗಿದೆ. ಇವೆಲ್ಲದಕ್ಕೂ ಸೂಕ್ತ ಉತ್ತರ ಸಿಗಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ಅನ್ಯಾಯಕ್ಕೊಳಗಾದ ಎಲ್ಲರಿಗೂ ತಮ್ಮ ಹೋರಾಟದಿಂದ ಒಂದು ವರ್ಷದ ಹಿಂದೆಯೇ ನ್ಯಾಯ ದೊರೆಯುವ ನಿರೀಕ್ಷೆ ಇತ್ತು. ಆದರೆ ಉಡುಪಿ ಜಿಲ್ಲಾ ಸಹಕಾರಿ ಉಪನಿಬಂಧಕರ (DR) ಕಾರಣದಿಂದ ಜಿಲ್ಲೆಯ ಸಂತ್ರಸ್ತರಿಗೆ ಅನ್ಯಾಯವಾಗಿದೆ ಎಂದು ಅವರು ಆರೋಪಿಸಿದರು.

“ಸರಕಾರಿ ಉದ್ಯೋಗದಲ್ಲಿದ್ದು ಬಡವರಿಗೆ ನ್ಯಾಯ ಕೊಡಿಸಬೇಕಾದ ಅಧಿಕಾರಿಗಳು ಪ್ರಭಾವಿ ರಾಜಕಾರಣಿಗಳು ಹಾಗೂ ಶ್ರೀಮಂತರ ಅಡಿಯಾಳಾಗಿ ಕೆಲಸ ಮಾಡಬಾರದು. 64ರ ತನಿಖೆ ನ್ಯಾಯಯುತವಾಗಿ ನಡೆದಿದ್ದರೆ ಇಂದು ನಮ್ಮ ಸಂತ್ರಸ್ತರು ಕೋರ್ಟ್‌ ಹಾಗೂ ಕಚೇರಿಗಳಿಗೆ ಅಲೆಯುವ ಪರಿಸ್ಥಿತಿ ಬರುತ್ತಿರಲಿಲ್ಲ. ಉಡುಪಿ ಜಿಲ್ಲಾ ಸಹಕಾರಿ ಉಪನಿಬಂಧಕರನ್ನು ತೀವ್ರ ತನಿಖೆಗೆ ಒಳಪಡಿಸಬೇಕು” ಎಂದು ಬಿ.ಕೆ. ಹರಿಪ್ರಸಾದ್ ಅವರಲ್ಲಿ ಕೋಟ ನಾಗೇಂದ್ರ ಪುತ್ರನ್ ಮನವಿ ಮಾಡಿದರು.

ಸಂತ್ರಸ್ತರಿಗೆ ನ್ಯಾಯ ದೊರಕುವವರೆಗೆ ಹೋರಾಟ ಮುಂದುವರಿಸುವುದಾಗಿ ಅವರು ಇದೇ ವೇಳೆ ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ಪಿಲಿಕುಳಕ್ಕೆ ಹೊಸ ರೂಪ: 339.90 ಎಕರೆ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್

ಮಂಗಳೂರಿನ ಪಿಲಿಕುಳ ನಿಸರ್ಗಧಾಮವನ್ನು ವಿಜ್ಞಾನ, ಪರಿಸರ, ಶಿಕ್ಷಣ ಹಾಗೂ ಪ್ರವಾಸೋದ್ಯಮ ಒಳಗೊಂಡ...

ದಸರಾ ಕಲಾ ಕೆಲಸಗಳನ್ನು ನೇರವಾಗಿ ಕಲಾವಿದರಿಗೆ ನೀಡಲು ಆಗ್ರಹ

ಮೈಸೂರು ದಸರಾ ಮಹೋತ್ಸವದ ಕಲಾ ಚಟುವಟಿಕೆಗಳ ಗುತ್ತಿಗೆಗಳನ್ನು ಮಧ್ಯವರ್ತಿಗಳು ಹಾಗೂ ಖಾಸಗಿ...