ಉಡುಪಿ | ತೆಂಗು ಅಭಿವೃದ್ಧಿ ಮಂಡಳಿ ವತಿಯಿಂದ ಬೃಹತ್ ಕಾರ್ಯಾಗಾರ : ಸಂಸದ ಕೋಟಾ ಶ್ರೀನಿವಾಸ ಪೂಜಾರಿ

Date:

ಕೇಂದ್ರ ತೆಂಗು ಅಭಿವೃದ್ಧಿ ಮಂಡಳಿಯ ವತಿಯಿಂದ ಜಿಲ್ಲಾ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ತೆಂಗು ಅಭಿವೃದ್ಧಿ ಕುರಿತು ಬೃಹತ್ ಕಾರ್ಯಾಗಾರವು ಜನವರಿ 12 ರಂದು ನಡೆಯಲಿದೆ ಎಂದು ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ತೆಂಗು ಅಭಿವೃದ್ಧಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ತೆಂಗು ಅಭಿವೃದ್ಧಿ ಕುರಿತು ಬೃಹತ್ ಕಾರ್ಯಾಗಾರವನ್ನು ಕುಂದಾಪುರ ತಾಲೂಕಿನಲ್ಲಿ ಆಯೋಜಿಸಲು ತಿಳಿಸಿದ ಅವರು, ಇದಕ್ಕಾಗಿ ಎರಡು ದಿನಗಳ ಒಳಗಾಗಿ ಸ್ಥಳ ಗುರುತಿಸುವುದರೊಂದಿಗೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯವಿರುವ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...
ತೆಂಗು ಅಭಿವೃದ್ಧಿ ಕುರಿತು ಬೃಹತ್ ಕಾರ್ಯಾಗಾರ 4

ಜಿಲ್ಲೆಯಲ್ಲಿ 16,252 ಹೆಕ್ಟೇರ್ ತೆಂಗು ಬೆಳೆ ಪ್ರದೇಶವನ್ನು ಹೊಂದಿದ್ದು, ಕರಾವಳಿ ಭಾಗದಲ್ಲಿ ಜೇಡಿ ಮತ್ತು ಮರಳು ಮಿಶ್ರಿತ ಮಣ್ಣು ಜೊತೆಗೆ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಾಗಿ ಮಳೆಯಾಗಿರುವುದರಿಂದ ತೆಂಗು ಬೆಳೆ ಬೆಳವಣಿಗೆಗೆ ಸೂಕ್ತವಾಗಿದೆ. ಈ ಹಿನ್ನೆಲೆ ತೆಂಗು ಬೆಳೆಗಾರರಿಗೆ ಇನ್ನಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಾಗಾರದಲ್ಲಿ ದೇಶದ ವಿವಿಧೆಡೆಯಲ್ಲಿರುವ ತೆಂಗಿನ ಉತ್ಪನ್ನಗಳ ಪ್ರದರ್ಶನ, ತೆಂಗಿನ ಮೂಲಕ ನಿರ್ಮಾಣವಾಗುತ್ತಿರುವ ನೀರಾ, ಬೆಲ್ಲ, ಚಾಕಲೇಟ್ ಉತ್ಪನ್ನಗಳು ಮತ್ತು ಅಪರೂಪದ ತೆಂಗು ಉತ್ಪನ್ನಗಳ ಪ್ರದರ್ಶನಗಳು, ಸಣ್ಣ ಕೈಗಾರಿಕೆ, ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಪಟ್ಟ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳಗಳು ನಡೆಯಲಿದೆ ಎಂದರು.

ಕಾರ್ಯಾಗಾರದಲ್ಲಿ ವಿವಿಧ ಸ್ಟಾಲ್‌ಗಳು ಭಾಗವಹಿಸಿ, ತೆಂಗು ಅಭಿವೃದ್ಧಿ ಕುರಿತ ಪ್ರಾತ್ಯಕ್ಷಿಕೆ ನೀಡಲಿದ್ದು, ತೆಂಗು ಬೆಳೆಯಲ್ಲಿ ಅಪಾರ ಜ್ಞಾನ ಹೊಂದಿರುವ ಹಿರಿಯ ರೈತರುಗಳಿಗೆ ಸನ್ಮಾನ, ಭವಿಷ್ಯದಲ್ಲಿ ತೆಂಗು ಕೃಷಿಯಿಂದಾಗುವ ಪ್ರಯೋಜನಗಳು, ರೋಬೋಟಿಕ್ ಹಾರ್ವೆಸ್ಟರ್ ಕುರಿತು, ತೆಂಗು ಬೆಳೆಗೆ ದೊರೆಯುವ ಪ್ರೋತ್ಸಾಹಧನ, ದೈನಂದಿನ ಬಳಕೆಗೆ ಸ್ಥಳೀಯವಾಗಿ ತಯಾರಾಗುವ ತೆಂಗಿನ ಎಣ್ಣೆ, ಹಾಲು, ಕೊಬ್ಬರಿ, ತೆಂಗಿನ ನಾರು, ಹೈಬ್ರಿಡ್ ಮತ್ತು ಗಿಡ್ಡ ತಳಿಗಳ ಬಗ್ಗೆ ಮಾಹಿತಿ, ನೀರಾ ಘಟಕ ತಯಾರಿಸುವ ಪರ್ಯಾಯ ಆಯಾಮ, ತೆಂಗಿಗೆ ತಗುಲುವ ರೋಗ – ರೂಜಿನಗಳ ನಿರ್ವಹಣೆ ಹಾಗೂ ಚಿಕಿತ್ಸೆಯ ಬಗ್ಗೆ, ತೆಂಗು ವಿಮಾ ಯೋಜನೆ, ತೆಂಗಿನ ಚಿಪ್ಪಿನ ಬೇಡಿಕೆ ಸೇರಿದಂತೆ ಮತ್ತಿತರ ಅಗತ್ಯ ಮಾಹಿತಿಯನ್ನು ಬೆಳೆಗಾರರಿಗೆ ನೀಡಲಾಗುವುದು ಎಂದರು.

ಕಾರ್ಯಾಗಾರದಲ್ಲಿ ತೆಂಗಿನ ಉತ್ಪನ್ನಗಳ ಬಗ್ಗೆ ಅನುಭವಿ ತಜ್ಞರಿಂದ ಮಾಹಿತಿ ಒದಗಿಸಲಾಗುವುದು ಎಂದ ಅವರು, ರೈತಬಾಂಧವರು, ಸ್ವ- ಸಹಾಯ ಗುಂಪುಗಳ ಸದಸ್ಯರುಗಳು, ಸಾರ್ವಜನಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಾಗಾರದ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದರು.

ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶಿಷ್ಠಾಚಾರದಂತೆ ಮುದ್ರಿಸಿ, ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು ಎಂದ ಅವರು, ಸಂಬಂಧಪಟ್ಟ ಇಲಾಖೆಗಳು ಸಮನ್ವಯತೆ ಹೊಂದಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದರು.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಜನವರಿ 12 ರಂದು ನಡೆಯಲಿರುವ ತೆಂಗು ಅಭಿವೃದ್ಧಿಗೊಳಿಸುವ ಕುರಿತು ರೈತರು ಅಳವಡಿಸಿಕೊಳ್ಳಬೇಕಾದ ಆಧುನಿಕ ಬೇಸಾಯ ಪದ್ಧತಿ, ಉತ್ಪನ್ನಗಳ ಮೌಲ್ಯವರ್ಧನೆ ಸೇರಿದಂತೆ ಮತ್ತಿತರ ಮಾಹಿತಿಗಳನ್ನು ಕಾರ್ಯಾಗಾರದಲ್ಲಿ ನೀಡಲಾಗುತ್ತಿದ್ದು, ರೈತರು ಈ ತಂತ್ರಜ್ಞಾನಗಳನ್ನು ಬಳಸಿಕೊಂಡು ತಮ್ಮ ಆದಾಯವನ್ನು ಹೆಚ್ಚಿಸಲು ಹಾಗೂ ತೆಂಗು ಬೆಳೆಗೆ ದೊರೆಯುವ ಸಹಾಯಧನಗಳ ಪ್ರಯೋಜನವನ್ನು ಪಡೆದುಕೊಂಡು ತೆಂಗಿನ ಮೌಲ್ಯವರ್ಧನೆಯಿಂದ ಹೆಚ್ಚಿನ ಲಾಭ ಪಡೆದು ಯಶಸ್ವಿ ರೈತರಾಗಿ ಹೊರಹೊಮ್ಮಬೇಕು ಎಂದರು.

ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಕ್ಷಮಾ ಪಾಟೀಲ್, ಉಪನಿರ್ದೇಶಕ ಚಂದ್ರಶೇಖರ್ ನಾಯಕ್, ಕಿಸಾನ್ ಸಂಘದ ಜಿಲ್ಲಾ ಅಧ್ಯಕ್ಷ ಉಡುಪ, ಕೃಷಿ ವಿಜ್ಞಾನ ಕೇಂದ್ರದ ಧನಂಜಯ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರಾಮೀಣ ಬದುಕು, ಕೃಷಿ ಸಂಸ್ಕೃತಿ ಪ್ರವಾಸಿಗರಿಗೆ ಪರಿಚಯಿಸಲು ಹೊಸ ಪ್ರವಾಸೋದ್ಯಮ ಪ್ಯಾಕೇಜ್‌ಗಳ ಚಿಂತನೆ

ಉಡುಪಿ ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳೊಂದಿಗೆ ಗ್ರಾಮೀಣ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...