ಉಡುಪಿ | ಆರ್‌ಎಸ್‌ಎಸ್‌ಗೆ ನೂರಾರು ಎಕರೆ ಜಾಗ ನೀಡಿದ ಬಿಜೆಪಿ: ಸಚಿವ ಬೋಸರಾಜು ಆರೋಪ

Date:

- Advertisement -

ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಆಗಿರುವ ವಿಳಂಬದ ಕುರಿತು ಪಂಚಾಯತ್‌ ರಾಜ್ ಸಚಿವರು ಸಭೆ ನಡೆಸಿದ್ದು, ಮುಂದಿನ 2-3 ತಿಂಗಳೊಳಗೆ ಚುನಾವಣೆ ನಡೆಸಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದು ಸಣ್ಣ ನೀರಾವರಿ, ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್. ಬೋಸರಾಜು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಕುಂದಾಪುರ ಜ್ಯೂನಿಯರ್ ಕಾಲೇಜು ಸಮೀಪದ ಕಾಂಗ್ರೆಸ್ ಪಕ್ಷದ ನಿವೇಶನದಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್‌ನ ನೂತನ ಕಚೇರಿ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಮೀಸಲಾತಿ ಕುರಿತ ಪ್ರಯತ್ನಗಳು ಮುಂದುವರಿದಿವೆ ಎಂದರು.

Advertisements

“ಐಎಸ್‌ಆರ್ ಮುಖಾಂತರ ತೊಂದರೆ ಕೊಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗಿದೆ” ಎಂದು ಹೇಳಿದರು.

Advertisements

ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಗಳಿಗೆ ಕಾನೂನುಬದ್ಧವಾಗಿ ಜಾಗ ಪಡೆಯುವ ಕಾರ್ಯ ನಡೆಯುತ್ತಿದೆ ಎಂದ ಅವರು, “ಬಿಜೆಪಿಯವರು ಆಡಳಿತದಲ್ಲಿದ್ದ ಸ್ವಲ್ಪ ಸಮಯದಲ್ಲೇ ರಾಜ್ಯದ ಅನೇಕ ಜಾಗಗಳನ್ನು ಅತಿಕ್ರಮಿಸಿಕೊಂಡಿದ್ದಾರೆ. ಆರೆಸ್ಸೆಸ್ ಹಾಗೂ ಅದರ ಅಂಗಸಂಸ್ಥೆಗಳಿಗೆ ನೂರಾರು ಎಕರೆ ಜಾಗ ನೀಡಲಾಗಿದೆ” ಎಂದು ಆರೋಪಿಸಿದರು.

“ಪಾರ್ಲಿಮೆಂಟ್‌ನಲ್ಲಿ 400 ಸೀಟ್ ಪಡೆಯುವುದಾಗಿ ಹೇಳಿದ್ದ ಬಿಜೆಪಿ ಈಗ 200ಕ್ಕೆ ಇಳಿದಿದೆ. ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ಶಕ್ತಿ” ಎಂದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ₹60 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತಿದ್ದು, ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು. “ಬಿಜೆಪಿಯವರು ಅಪಪ್ರಚಾರ ಮತ್ತು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ” ಎಂದು ಟೀಕಿಸಿದರು.

“ಚುನಾವಣೆಗೂ ಮುನ್ನ ದೇಶ ಸಮೃದ್ಧಿಯಾಗಿದೆ ಎಂದು ಹೇಳುವ ಪ್ರಧಾನ ಮಂತ್ರಿಗಳು, ಚುನಾವಣೆ ಬಳಿಕ ಉಳಿತಾಯದ ಮಾತು ಮಾಡುತ್ತಾರೆ. ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಮಾಡುವ ಉದ್ದೇಶದಿಂದ ಕ್ಷೇತ್ರ ಪುನರ್ವಿಂಗಡನೆ ಯತ್ನ ನಡೆಯುತ್ತಿದೆ” ಎಂದು ಆರೋಪಿಸಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಕೆ. ಜಯಪ್ರಕಾಶ ಹೆಗ್ಡೆ, ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ ಮಾತನಾಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ ಕೊಡವೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...