ಉಡುಪಿ | ಕುಂದಾಪುರದಲ್ಲಿ ಗುಂಡಿನ ದಾಳಿ: ಹಣಕಾಸಿನ ವ್ಯವಹಾರ ಹಿನ್ನೆಲೆ ಐವನ್ ಹ*ತ್ಯೆ, ಆರೋಪಿ ಡೆರಿಕ್ ಕ್ರಾಸ್ತಾ ಪರಾರಿ

Date:

ನಿನ್ನೆ ರಾತ್ರಿ ಆರಂಭವಾದ ಹಣಕಾಸಿನ ವ್ಯವಹಾರದ ವಿವಾದವು ಕುಂದಾಪುರದಲ್ಲಿ ಗುಂಡಿನ ದಾಳಿಗೆ ಕಾರಣವಾಗಿ ಒಬ್ಬರ ಸಾವಿನಲ್ಲಿ ಅಂತ್ಯಗೊಂಡಿದೆ.

- Advertisement -

ಪೊಲೀಸರ ಪ್ರಕಾರ, ಡೆರಿಕ್ ಕ್ರಾಸ್ತಾ ಅವರು ಐವನ್ ಅವರಿಗೆ ಕರೆ ಮಾಡಿ ಹಣಕಾಸಿನ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿ ಹಣ ಕೊಡಿಸುತ್ತೇನೆ ಎಂದು ಹೇಳಿದ್ದರು. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಡೆರಿಕ್ ಅವರು “ದಮ್ ಇದ್ದರೆ ಒಬ್ಬನೇ ಕುಂದಾಪುರಕ್ಕೆ ಬಾ” ಎಂದು ಸವಾಲು ಹಾಕಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಕೊಪ್ಪಳ | 8 ತಿಂಗಳಿನಿಂದ ಕಿಟ್‌ ವಿತರಣೆಯಿಲ್ಲ, ಮಲಗಲು...

ಕೊಪ್ಪಳ ನಗರದ ಡಾ.ಬಿ ಆರ್‌ ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ ನಂತರದ ಬಾಲಕರ ವೃತ್ತಿಪರ ವಸತಿ (ಪರಿಶಿಷ್ಟ ಜಾತಿ) ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು...

ಅದರಂತೆ, 31 ಜುಲೈ 2026ರ ರಾತ್ರಿ ಸುಮಾರು 1:30ಕ್ಕೆ ಡೆರಿಕ್ ಅವರು ಐವನ್ ಅವರಿಗೆ ಸ್ಥಳದ ಲೊಕೇಶನ್ ಕಳುಹಿಸಿದ್ದರು. ಬಳಿಕ ಚರ್ಚ್ ರಸ್ತೆಯ ಹೋಲಿ ರೋಸಾರಿ ಚರ್ಚ್ ಎದುರಿನ ಕಾಂಕ್ರೀಟ್ ರಸ್ತೆಯಲ್ಲಿ ಐವನ್ ತಮ್ಮ ಕಾರನ್ನು ನಿಲ್ಲಿಸಿಕೊಂಡಿದ್ದರು.

ಸುಮಾರು 3:15ಕ್ಕೆ ಕಪ್ಪು-ಕೆಂಪು ಬಣ್ಣದ ಥಾರ್ ವಾಹನದಲ್ಲಿ ಬಂದ ಡೆರಿಕ್, ಐವನ್ ಅವರ ಕಾರಿನ ಎದುರು ವಾಹನ ನಿಲ್ಲಿಸಿ ಕೆಳಗಿಳಿದು ಬಂದಿದ್ದಾರೆ. ಐವನ್ ಕಾರಿನಿಂದ ಇಳಿದ ತಕ್ಷಣ, ಕೈಯಲ್ಲಿ ತಂದಿದ್ದ ಗನ್‌ನಿಂದ ಅವರ ಸೊಂಟದ ಕೆಳಭಾಗಕ್ಕೆ ಗುಂಡು ಹಾರಿಸಿ, ಬಳಿಕ ಥಾರ್ ವಾಹನದಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಗುಂಡೇಟಿನಿಂದ ಸೊಂಟ ಹಾಗೂ ಕಾಲಿನ ಭಾಗಕ್ಕೆ ತೀವ್ರ ಗಾಯಗೊಂಡ ಐವನ್ ಅವರು ರಸ್ತೆಯಲ್ಲೇ ಕುಸಿದು ಬಿದ್ದು, ಅತಿಯಾದ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಐವನ್ ಮತ್ತು ಡೆರಿಕ್ ನಡುವೆ ಇದ್ದ ಹಣಕಾಸು ಹಾಗೂ ಇತರೆ ವ್ಯವಹಾರಗಳಿಗೆ ಸಂಬಂಧಿಸಿದ ಮನಸ್ತಾಪವೇ ಹತ್ಯೆಗೆ ಕಾರಣವಾಗಿರುವ ಶಂಕೆ ವ್ಯಕ್ತವಾಗಿದೆ.

ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 67/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 103 ಹಾಗೂ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ (Indian Arms Act) ಕಲಂ 3 ಮತ್ತು 25 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಡೆರಿಕ್ ಕ್ರಾಸ್ತಾ ಬಂಧನಕ್ಕಾಗಿ ಮೂರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಆರೋಪಿಯನ್ನು ಬಂಧಿಸುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಮುಳುಗಡೆ ಸಂತ್ರಸ್ತರಿಗೆ 151 ಇ-ಖಾತಾ, ಹಕ್ಕುಪತ್ರ ವಿತರಣೆ

ಮುಳುಗಡೆ ಸಂತ್ರಸ್ತರಿಗೆ ಅಗತ್ಯ ದಾಖಲೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ...

ಬಾಗೇಪಲ್ಲಿ | ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯ

ತಾಲೂಕಿನ ಮಾಡಪ್ಪಲ್ಲಿ ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಇಲ್ಲಿನ...

ರಾಯಚೂರು | ಹಳ್ಳಿ ಜನರನ್ನು ಅವಮಾನಿಸಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಕ್ಷಮೆಯಾಚನೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

ಹಳ್ಳಿಯ ಜನರನ್ನು ಗುಗ್ಗು ಹಾಗೂ 'ವಿಲೇಜ್ ಈಡಿಯಟ್ಸ್' ಎಂದು ಅವಹೇಳನಕಾರಿಯಾಗಿ ಮಾತನಾಡಿದ...

ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡುವ ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ

ಎಡಿಬಿ (ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್) ಜತೆ ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದ...