ಉಡುಪಿ | ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಲಿ : ಡಾ. ನಾಗಲಕ್ಷ್ಮೀ ಚೌಧರಿ

Date:

ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ, ಖಾಸಗಿ ಸೇರಿದಂತೆ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಕೆಲಸದ ಸ್ಥಳಗಳಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸುವುದರೊಂದಿಗೆ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಹೇಳಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರಕ್ಷಕ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಹಾಗೂ ಆಂತರಿಕ ದೂರು ನಿವಾರಣಾ ಸಮಿತಿ ಸದಸ್ಯರಿಗೆ ನಡೆದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ – 2013ರ ಕುರಿತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಗೌರವಯುತ ವಾತಾವರಣ ನಿರ್ಮಾಣವಾಗಬೇಕು. ಮಹಿಳೆಯರು ದೈಹಿಕವಾಗಿ ಹಾಗೂ ಮಾನಸಿಕವಾಗಿ ಭಯಮುಕ್ತ ವಾತಾವರಣದಲ್ಲಿ ಕೆಲಸ ನಿರ್ವಹಿಸಿದ್ದಲ್ಲಿ ತಮ್ಮ ಒತ್ತಡವನ್ನು ಕುಟುಂಬದವರ ಮೇಲೆ ಹೇರುವುದಿಲ್ಲ. ಇದರಿಂದ ಕುಟುಂಬ ಹಾಗೂ ಕೆಲಸ ಎರಡನ್ನೂ ಖುಷಿಯಿಂದ ನಿರ್ವಹಿಸಿಕೊಂಡು ಹೋಗಲು ಸಾಧ್ಯವಾಗಲಿದೆ. ಅದು ಅಧಿನಿಯಮವು ಕೇವಲ ಕಡತದಲ್ಲಷ್ಟೇ ಸೀಮಿತವಾಗಿರದೇ ಪರಿಣಾಮಕಾರಿಯಾಗಿ ಜಾರಿಯಾಗಬೇಕಿದೆ ಎಂದರು.

ಜಿಲ್ಲೆಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಕಡಿಮೆ ಇದೆ. ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳಿಗೆ ಆಸ್ಪದ ನೀಡಬಾರದು. ಯಾವುದೇ ಹೆಣ್ಣುಮಗಳು ತನ್ನ ಕೆಲಸದ ಸ್ಥಳದಲ್ಲಿ ದೌರ್ಜನ್ಯ ನಡೆದಾಗ ದೂರು ನೀಡಲು ಹಿಂಜರಿಯಬಾರದು ಎಂದ ಅವರು, ಈ ಕಾಯಿದೆಯನ್ನು ಅನುಷ್ಠಾನ ಮಾಡುವಲ್ಲಿ ಎಲ್ಲಾ ಅಧಿಕಾರಿಗಳ ಪಾತ್ರ ಮಹತ್ವದಾಗಿದ್ದು, ಕಾಯ್ದೆಯ ಅನುಷ್ಠಾನದಲ್ಲಿ ಎಡವದೇ ಅಧಿಕಾರಿಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದರು.

ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷಿತ ಮತ್ತು ಗೌರವಯುತ ವಾತಾವರಣ ಕಲ್ಪಿಸುವುದರೊಂದಿಗೆ ಲೈಂಗಿಕ ದೌರ್ಜನ್ಯಗಳನ್ನು ತಡೆಗಟ್ಟುವುದು ಈ ಕಾಯಿದೆಯ ಮೂಲ ಉದ್ದೇಶವಾಗಿದೆ. ಪ್ರತಿ ಇಲಾಖೆ ಮತ್ತು ಖಾಸಗಿ ಸಂಸ್ಥೆಗಳು ಕಡ್ಡಾಯವಾಗಿ ಆಂತರಿಕ ದೂರು ನಿವಾರಣಾ ಸಮಿತಿಯನ್ನು ರಚಿಸಿ, ದೂರುಗಳನ್ನು ಗೌಪ್ಯವಾಗಿ ಸ್ವೀಕರಿಸಲು ಅನ್ನು ಪರಿಣಾಮಕಾರಿಯಾಗಿ ಬಳಸಬೇಕು ಎಂದರು.

ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಇಂತಹ ತರಬೇತಿ ಕಾರ್ಯಾಗಾರಗಳು ಮಹಿಳಾ ಉದ್ಯೋಗಿಗಳ ಹಕ್ಕುಗಳನ್ನು ರಕ್ಷಿಸುವುದರೊಂದಿಗೆ ಕೆಲಸದ ಸ್ಥಳದಲ್ಲಿ ಸಮಾನತೆಯನ್ನು ಒದಗಿಸುತ್ತದೆ ಎಂದ ಅವರು, ಪ್ರತಿಯೊಬ್ಬ ಮಹಿಳೆಯು ತಮ್ಮ ರಕ್ಷಣೆಗಾಗಿ ಜಾರಿಗೊಳಿಸಲಾದ ಕಾಯಿದೆ ಹಾಗೂ ಕಾನೂನಿನ ಬಗ್ಗೆ ಅರಿವು ಹೊಂದಿರಬೇಕು ಎಂದರು.

ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸಂಬಂಧಿಸಿದಂತೆ ಯಾವುದೇ ದೂರುಗಳು ದಾಖಲಾದಲ್ಲಿ ಅವುಗಳಿಗೆ ತಕ್ಷಣವೇ ಸ್ಪಂದಿಸಿ, ಸೂಕ್ತ ಕಾನೂನು ನೆರವು ಒದಗಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ – 2013ರ ಕುರಿತು ಜನರಲ್ಲಿ ಅರಿವು ಕಡಿಮೆ ಇದೆ. ಸಮಿತಿಗೆ ದೂರು ಬಂದಾಗ ಅದನ್ನು ಯಾವ ರೀತಿಯಲ್ಲಿ ಬಗೆಹರಿಸಬೇಕು ಎಂಬ ಅರಿವು ಸಮಿತಿಯ ಸದಸ್ಯರುಗಳಿಗೆ ಇರಬೇಕು. ಕಾಯಿದೆಯ ಕುರಿತು ತರಬೇತಿಯಲ್ಲಿ ಪಡೆದ ಮಾಹಿತಿಯನ್ನು ತಳಮಟ್ಟದಲ್ಲಿ ಅನುಷ್ಠಾನ ಮಾಡುವುದರೊಂದಿಗೆ ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ರಕ್ಷಣೆಯ ವಾತಾವರಣ ದೊರಕುವಂತಾಗಬೇಕು ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಆಯಿಶಾ ಸಿಂಗ್ ಅವರು, ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ – 2013 ಅಡಿ ಸ್ಥಳೀಯ ದೂರು ಸಮಿತಿ (ಎಲ್.ಸಿ.ಸಿ) ಮತ್ತು ಆಂತರಿಕ ದೂರು ಸಮಿತಿ (ಐ.ಸಿ.ಸಿ) ಯ ರಚನೆ, ಕಾರ್ಯನಿರ್ವಹಣೆ, ಪೋರ್ಟಲ್ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳೀಯ ಹಾಗೂ ಆಂತರಿಕ ದೂರು ನಿವಾರಣಾ ಸಮಿತಿ ಸದಸ್ಯರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಅನುರಾಧ ಬಿ ಹಾದಿಮನೆ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿ, ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕಿ ಸಂಗೀತ ಎಂ.ಕೆ ನಿರೂಪಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...