ಉಡುಪಿ | ಮೋದಿಯವರು ಹೇಳೋದೇ ಆಯ್ತು, ಜನರ ಸಮಸ್ಯೆಗೆ ಪರಿಹಾರವೇನು? : ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ

Date:

ಜನರಿಗೆ ಹೇಳೋದಾಯ್ತು, ಇವರೇನು ಮಾಡಿದ್ದಾರೆ ಅದನ್ನು ಮೊದಲು ಹೇಳಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ.

- Advertisement -

ಉಡುಪಿಯಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೋದಿಯವರು ಗಂಟೆ ಬಾರಿಸಬೇಕು ಅಂದ್ರೆ ನಾವು ಗಂಟೆ ಬಾರಿಸುತ್ತೇವೆ. ಚಪ್ಪಾಳೆ ಹೊಡೀರಿ ಅಂದ್ರೆ ಹೊಡೀತೇವೆ. ಪೆಟ್ರೋಲ್ ಡೀಸೆಲ್ ಜಾಸ್ತಿ ಬಳಸಬೇಡಿ ಅಂದ್ರೆ ನಾವು ಪಾಲಿಸುತ್ತೇವೆ. ಬಂಗಾರ ಖರೀದಿಸಬೇಡಿ ಎಂದರೆ ಬಿಡುತ್ತೇವೆ. ದೇಶಕ್ಕಾಗಿ ಇತಿ ಮಿತಿಯನ್ನು ಪಾಲಿಸೋಣ. ಆದರೆ ಇಂತಹ ಪರಿಸ್ಥಿತಿ ಆಗೋದಕ್ಕೆ ಕಾರಣ ಯಾರು? ಅದು ಮಾಡಿ ಇದು ಮಾಡಿ ಅನ್ನೋದೇ ಆಯ್ತು. ಆದರೆ ಇವರೇನು ಮಾಡ್ತಿದಾರೆ, ಮುಂಜಾಗ್ರತಾ ಕ್ರಮವಾಗಿ ಏನು ಕ್ರಮ ತೆಗೆದುಕೊಳ್ಳುತ್ತಿದ್ದಾರೆ ಎನ್ನೋದು ಬೇಕಲ್ವಾ ಎಂದು ಪ್ರಶ್ನಿಸಿದರು.
ಈಗ ಮೋದಿ ಬಂಗಾರ ಖರೀದಿ ಮಾಡಬೇಡಿ ಎನ್ನುತ್ತಿದ್ದಾರೆ. ಏನೇನೋ ಹೇಳುತ್ತ ಬಂದಿದ್ದಾರೆ. ಆದರೆ ಅಮೆರಿಕ ಯಾವ ರೀತಿ ನಮ್ಮ ಪ್ರಧಾನ ಮಂತ್ರಿಯನ್ನು ಕಂಟ್ರೋಲ್ ಮಾಡುತ್ತಿದೆ ಅಂತ ಮಾಧ್ಯಮದಲ್ಲೇ ನೋಡುತ್ತಿದ್ದೇವೆ. ಭಾರತದ ಬಗ್ಗೆ ಟ್ರಂಪ್ ಏನು ಹೇಳುತ್ತಿದ್ದಾರೆ ಗೊತ್ತಲ್ಲ.. ಎಂದು ವ್ಯಂಗ್ಯವಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...


ಚುನಾವಣೆ ಮುಗಿದ ಕೂಡಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದಾರೆ. ಇದು ಕಂಪ್ಲೀಟ್ ರಾಜಕಾರಣ. ಈಗೇನೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿಲ್ಲ‌. ಮನಮೋಹನ್ ಸಿಂಗ್ ಸರ್ಕಾರ ಇದ್ದಾಗ ಕಚ್ಚಾ ತೈಲ ಬೆಲೆ ಎಷ್ಟು ಏರಿತ್ತು ಗೊತ್ತಿದೆ.‌ ಆದ್ರೂ ಜನರಿಗೆ ಬರೆ ಹಾಕುವ ಕೆಲಸ ಮಾಡಿಲ್ಲ. ಈಗ ದಿಢೀರ್ ಆಗಿ 3 ರೂಪಾಯಿ ಬೆಲೆ ಏರಿಸಿ ಜನರ ಮೇಲೆ ಹೊರೆ ಹಾಕಿದ್ದಾರೆ ಎಂದು ಹೇಳಿದರು.

ಹಿಜಾಬ್ ವಿವಾದ ಕುರಿತ ಪ್ರಶ್ನೆಗೆ, “ಶಿಕ್ಷಣದಲ್ಲಿ ರಾಜಕಾರಣ ಯಾವತ್ತೂ ಮಾಡಬಾರದು. ಮಕ್ಕಳು ಮುಗ್ಧರಿದ್ದಾರೆ, ಪಾಲಕರು ಕಲಿಯುವುದಕ್ಕೆಂದು ಶಾಲೆಗೆ ಕಳಿಸುತ್ತಾರೆ. ಈ ವಿಚಾರದಲ್ಲಿ ಹೆಚ್ಚು ಚರ್ಚೆ ಮಾಡದೆ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ವಾತಾವರಣ ಸೃಷ್ಟಿ ಮಾಡಬೇಕೆಂದು ಮಾತ್ರ ಹೇಳುತ್ತೇನೆ. ಅವರ ಭವಿಷ್ಯದ ಜೊತೆ ಚೆಲ್ಲಾಟ ಆಡಬಾರದು. ಹಿಜಾಬ್ ಅಥವಾ ಇನ್ನಾವುದೇ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ.‌ ಮಕ್ಕಳ ಭವಿಷ್ಯ ತಲೆಯಲ್ಲಿಟ್ಡು ರಾಜಕಾರಣ ಮಾಡಬೇಕು ಅಂತ ಹೇಳುತ್ತೇನೆ ಎಂದು ಪ್ರತಿಕ್ರಿಯಿಸಿದರು.

ಮುಖ್ಯಮಂತ್ರಿ ಬದಲಾವಣೆ, ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಕೇಳಿದ ಪ್ರಶ್ನೆಗೆ, ಅದು ಎಲ್ಲವೂ ಪಕ್ಷದ ಹೈಕಮಾಂಡ್ ತೀರ್ಮಾನ. ನಾವು ಪಕ್ಷದ ಶಿಸ್ತಿನ ಸಿಪಾಯಿಗಳು. ನಾವೇನೂ ಪ್ರತಿಕ್ರಿಯೆ ನೀಡಲ್ಲ ಎಂದರು.

ಬಾಗಲಕೋಟೆಯಲ್ಲಿ ಅಂಗನವಾಡಿಯಿಂದ ಹಣ ಕಲೆಕ್ಷನ್ ಮಾಡಲಾಗಿದೆ ಎಂಬ ಆರೋಪದ ಪ್ರಶ್ನೆಗೆ, ಯಾವುದೇ ಅಂಗನವಾಡಿಯಿಂದ ಹಣ ತಗೊಂಡಿದ್ದಿಲ್ಲ. ಯಾರೇ ಆಗಲಿ ಹಾಗೇನಾದರೂ ಹಣ ಕಲೆಕ್ಷನ್ ಮಾಡಿದ್ದಲ್ಲಿ ಅವರ ಮೇಲೆ ಮುಲಾಜಿಲ್ಲದೆ ಕ್ರಮ ಜರುಗಿಸ್ತೀನಿ. ತನಿಖೆಯನ್ನು ಕೈಗೊಳ್ತೀನಿ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...