ಉಡುಪಿ | ಪ್ರಧಾನಿ ಚಿನ್ನ ಖರೀದಿಸಬೇಡಿ ಎಂದರೂ ನಾವು ಖರೀದಿಸಬೇಕು; ಆಪತ್ತಿನಲ್ಲಿ ಅದೇ ನೆರವಾಗುತ್ತದೆ : ಎಂ.ಎ. ಗಫೂರ್

Date:

ಸಮಾಜದಲ್ಲಿ ಶಿಕ್ಷಣದ ಮೂಲಕ ಯುವಜನರನ್ನು ಸಬಲೀಕರಿಸುವ ಕಾರ್ಯ ಅತ್ಯಂತ ಮಹತ್ವದ್ದಾಗಿದ್ದು, ಆ ನಿಟ್ಟಿನಲ್ಲಿ ವಿದ್ಯಾರ್ಥಿವೇತನ ನೀಡುತ್ತಿರುವ ಮಲಬಾರ್ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯ ಶ್ಲಾಘನೀಯವಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.

- Advertisement -

ಅವರು ಇಂದು ಉಡುಪಿ ನಗರದ ಅಜ್ಜರಕಾಡು ಟೌನ್ ಹಾಲ್‌ನಲ್ಲಿ ನಡೆದ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಸಂಸ್ಥೆಯ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಸಂವಿಧಾನದ ಅಡಿಯಲ್ಲಿ ನಾವು ಬೆಳೆದಿದ್ದೇವೆ. ಈ ದೇಶಕ್ಕಾಗಿ ಅನೇಕ ಮಹನೀಯರು ತ್ಯಾಗ ಮತ್ತು ಬಲಿದಾನ ನೀಡಿದ್ದಾರೆ. ಆ ಹೋರಾಟದ ಫಲವಾಗಿ ನಮಗೆ ಸಿಕ್ಕಿರುವ ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ” ಎಂದು ಅವರು ಹೇಳಿದರು.

ದೇಶದ ಯುವಜನತೆ ಸಮಾಜ ನಿರ್ಮಾಣದ ಪ್ರಮುಖ ಶಕ್ತಿಯಾಗಿದ್ದು, ಯುವಕರು ರಾಷ್ಟ್ರ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಶಿಕ್ಷಣವೇ ಅದಕ್ಕೆ ಬಲವಾದ ಅಸ್ತ್ರವಾಗಿದೆ ಎಂದು ಅಭಿಪ್ರಾಯಪಟ್ಟ ಅವರು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೆರವಾಗುವ ವಿದ್ಯಾರ್ಥಿವೇತನ ಯೋಜನೆಗಳು ಸಮಾಜದಲ್ಲಿ ಆಶಾಕಿರಣ ಮೂಡಿಸುತ್ತವೆ ಎಂದರು.

“ಈ ದೇಶದಲ್ಲಿರುವ ಯುವಕರನ್ನು ಸಬಲೀಕರಣ ಮಾಡಬೇಕಾದರೆ ಮಲಬಾರ್ ಚಾರಿಟೇಬಲ್ ಟ್ರಸ್ಟ್‌ನಂತಹ ಸಂಸ್ಥೆಗಳು ವಿದ್ಯಾರ್ಥಿವೇತನದಂತಹ ಕಾರ್ಯಕ್ರಮಗಳನ್ನು ಇನ್ನಷ್ಟು ವಿಸ್ತರಿಸಬೇಕು” ಎಂದು ಹೇಳಿದರು.

ಚಿನ್ನದ ಮಹತ್ವದ ಕುರಿತು ಮಾತನಾಡಿದ ಅವರು, “ಚಿನ್ನವನ್ನು ಖರೀದಿಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರೂ, ನಾವು ಚಿನ್ನವನ್ನು ಹೆಚ್ಚು ಹೆಚ್ಚು ಖರೀದಿಸಬೇಕು. ಆಪತ್ತಿನ ಸಮಯದಲ್ಲಿ ಅದೇ ನಮ್ಮ ನೆರವಿಗೆ ಬರುತ್ತದೆ” ಎಂದು ಅಭಿಪ್ರಾಯಪಟ್ಟರು.

1010833392

ಕಾರ್ಯಕ್ರಮದಲ್ಲಿ ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ 75 ಕಾಲೇಜುಗಳ 518 ವಿದ್ಯಾರ್ಥಿನಿಯರಿಗೆ ಒಟ್ಟು 42 ಲಕ್ಷ ರೂಪಾಯಿ ವಿದ್ಯಾರ್ಥಿವೇತನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಾಜಿ ಲೋಕಸಭಾ ಸದಸ್ಯ ಜಯಪ್ರಕಾಶ್ ಹೆಗ್ಡೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಶಿಕ್ಷಕ ಹಾಗೂ ಬರಹಗಾರ ಅಶ್ವಿನ್ ದಾಂತೆ, ವಕೀಲೆ ಸಹನ ಕುಂದರ್, ಸಾಮಾಜಿಕ ಕಾರ್ಯಕರ್ತ ನವೀನ್ ಚಂದ್ರ ಶೆಟ್ಟಿ ಉಪಸ್ಥಿತರಿದ್ದರು. ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿದ್ಯಾರ್ಥಿನಿಯರು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...