ಉಡುಪಿ | ದಾರ್ಶನಿಕರ ಜೀವನಾದರ್ಶಗಳು ಮನುಕುಲದ ಏಳಿಗೆಗೆ ದಾರಿದೀಪ : ಎಂ.ಎ. ಗಫೂರ್

Date:

ತಿಗಳ ಸಮುದಾಯದ ಆರಾಧ್ಯ ದೈವ್ಯರಾದ ಶ್ರೀ ಅಗ್ನಿಬನ್ನಿರಾಯರಂತಹ ಮಹಾನ್ ದಾರ್ಶನಿಕರ ಜೀವನಾದರ್ಶಗಳು ಮನುಕುಲದ ಏಳಿಗೆಗೆ ದಾರಿದೀಪವಾಗುತ್ತವೆ ಎಂದು ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.

- Advertisement -

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ಅಗ್ನಿಬನ್ನಿರಾಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಳಿಕ ಅಗ್ನಿಬನ್ನಿರಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಶ್ರಮ ಜೀವನಕ್ಕೆ ಹೆಸರಾದ ತಿಗಳ ಸಮುದಾಯವು ಅಗ್ನಿಬನ್ನಿರಾಯರನ್ನು ಸಮಾಜ ಸುಧಾರಕರಾಗಿ ಆರಾಧಿಸುತ್ತಿದೆ. 10ರಿಂದ 12ನೇ ಶತಮಾನದಲ್ಲಿ ಅನೇಕ ವಚನಕಾರರು, ದಾರ್ಶನಿಕರು ಹಾಗೂ ಸಮಾಜ ಸುಧಾರಕರು ಜನಿಸಿ ಸಮಾಜದಲ್ಲಿನ ಲೋಪದೋಷಗಳನ್ನು ತಿದ್ದಿ ಸಮಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ಸತ್ಯದ ಮಾರ್ಗವನ್ನು ಪ್ರತಿಪಾದಿಸಿದ್ದ ಅಗ್ನಿಬನ್ನಿರಾಯರ ತತ್ತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶೋಷಣೆಯಿಲ್ಲದ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದ ಅವರ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನವಾಗಬೇಕು ಎಂದರು. ಕೃಷಿ ಮತ್ತು ಕಲೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದ ತಿಗಳ ಸಮುದಾಯವು ಇನ್ನಷ್ಟು ಅಭಿವೃದ್ಧಿ ಹೊಂದಿ ಸಮಾಜದ ಮುಂಚೂಣಿಗೆ ಬರಬೇಕೆಂದು ಆಶಿಸಿದರು.

ಸಾಂಸ್ಕೃತಿಕ ಚಿಂತಕ ಡಾ. ಶ್ರೀಕಾಂತ್ ಸಿದ್ಧಾಪುರ ಉಪನ್ಯಾಸ ನೀಡಿ ಮಾತನಾಡಿ, ಅಗ್ನಿಬನ್ನಿರಾಯರ ಕುರಿತು ಜನಪದ ಹಾಗೂ ಪೌರಾಣಿಕ ಮೂಲಗಳಲ್ಲಿ ಹಲವು ಕಥೆಗಳು ದೊರೆಯುತ್ತವೆ ಎಂದರು. ಭಾಷಾವಾರು ಪ್ರಾಂತ್ಯ ರಚನೆಯ ಮುನ್ನ ತಿಗಳರು ರಾಜ್ಯರಕ್ಷಣೆಗಾಗಿ ಸೈನ್ಯದಲ್ಲಿ ಸೇವೆ ಸಲ್ಲಿಸಿ ತಮ್ಮ ಪ್ರಾಣವನ್ನೇ ಅರ್ಪಿಸಿದ್ದರೆಂಬುದು ಶಾಸನಗಳಿಂದ ತಿಳಿದುಬರುತ್ತದೆ ಎಂದು ಹೇಳಿದರು.

ಅಗ್ನಿ ಬನ್ನಿರಾಯ ಜಯಂತಿ 1

ತಿಗಳ ಸಮುದಾಯದವರು ಮುಖ್ಯವಾಗಿ ಬೆಂಗಳೂರು, ಮೈಸೂರು, ಮಂಡ್ಯ ಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಅವರ ಅಭಿವೃದ್ಧಿಗಾಗಿ ಸರ್ಕಾರ ತಿಗಳ ಸಮುದಾಯ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದೆ ಎಂದರು. ತೋಟಗಾರಿಕೆಯಲ್ಲಿ ನಿಪುಣರಾಗಿದ್ದ ತಿಗಳರು ಬೆಂಗಳೂರಿನ ಲಾಲ್‌ಬಾಗ್ ಉದ್ಯಾನವನ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿದ್ದು, ಅಲ್ಲಿನ ಕೈತೋಟಗಳು ವಿಶ್ವದ ಗಮನ ಸೆಳೆಯುತ್ತಿವೆ ಎಂದು ಹೇಳಿದರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಮಾತನಾಡಿ, ವಿವಿಧ ಸಂತರ ಮತ್ತು ಚಿಂತಕರ ಜಯಂತಿಗಳನ್ನು ಆಚರಿಸುವ ಮೂಲಕ ಅವರ ಆದರ್ಶಗಳನ್ನು ಯುವಪೀಳಿಗೆಗೆ ತಲುಪಿಸಲಾಗುತ್ತಿದೆ. ಅವರ ಉದಾತ್ತ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದಲೇ ಜಯಂತಿ ಆಚರಣೆಗಳಿಗೆ ಸಾರ್ಥಕತೆ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಉಪ ತಹಶೀಲ್ದಾರ್ ನವನೀತ್, ಜಿಲ್ಲಾಡಳಿತದ ಸಿಬ್ಬಂದಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಿಬ್ಬಂದಿ ವರ್ಷಾ ಬಿ. ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕ ರಾಮಾಂಜಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...