ಉಡುಪಿ | ಹಿಂದೂ ಪದ್ಧತಿಯೇ ಜಾತೀಯತೆ, ಅಸ್ಪೃಶ್ಯತೆಗೆ ಮೂಲ: ಶ್ಯಾಮರಾಜ್ ಬಿರ್ತಿ

Date:

ಹಿಂದೂ ಧರ್ಮದ ಶ್ರೇಣೀಕೃತ ವ್ಯವಸ್ಥೆಯೇ ಜಾತೀಯತೆಗೆ ಮೂಲವಾಗಿದ್ದು, ಇದೇ ವ್ಯವಸ್ಥೆ ಅಸ್ಪೃಶ್ಯತೆಗೆ ಕಾರಣವಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದದ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಅಭಿಪ್ರಾಯಪಟ್ಟರು.

- Advertisement -

ಅವರು ಹೆಬ್ರಿಯ ದೋರಿಯಾಲ್‌ನಲ್ಲಿ ಮಹಾಡ್ ಚಳುವಳಿಯ ನೆನಪಿನಲ್ಲಿ ಆಯೋಜಿಸಲಾದ “ಮಹಾಡ್ ಕೆರೆ ಚಳುವಳಿ ಕಥಾ ಕಥನಾ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಹಾಡ್ ಚಳುವಳಿಯಲ್ಲಿ ಚೌದಾರ್ ಕೆರೆಯ ನೀರನ್ನು ಸ್ಪರ್ಶಿಸಿ ಕುಡಿದ ಘಟನೆ ದಲಿತರ ಪ್ರಥಮ ಸ್ವಾತಂತ್ರ್ಯ ಹೋರಾಟವಾಗಿದ್ದು, ಅಸ್ಪೃಶ್ಯತೆ ವಿರುದ್ಧದ ಬೃಹತ್ ಪ್ರತಿಭಟನೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...
Untitled design 20260315 161436 0000
ಜಾಹಿರಾತು

ಮನುಷ್ಯರನ್ನು ಹುಟ್ಟಿನಿಂದಲೇ ಅಸ್ಪೃಶ್ಯರೆಂದು ಗುರುತಿಸುವ ಧಾರ್ಮಿಕ ಮನೋಭಾವವನ್ನು ಅರಿತುಕೊಳ್ಳಬೇಕಾದ ಅಗತ್ಯವಿದೆ. ಧರ್ಮದ ಹೆಸರಿನಲ್ಲಿ ಮತಗಳಿಗಾಗಿ ದಲಿತರನ್ನು ಬಳಸಿಕೊಳ್ಳುವ ಶಕ್ತಿಗಳ ಬಗ್ಗೆ ಜಾಗೃತರಾಗಿರಬೇಕು ಎಂದು ಅವರು ಎಚ್ಚರಿಸಿದರು. ಇತ್ತೀಚೆಗೆ ಹುಬ್ಬಳ್ಳಿ ಸಮೀಪ ನಡೆದ ಗರ್ಭಿಣಿ ಮಹಿಳೆಯ ಹತ್ಯೆ ಘಟನೆ ಜಾತೀಯ ಮನೋಭಾವದ ಕ್ರೂರತೆಯ ಉದಾಹರಣೆಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರ್ ಮಾತನಾಡಿ, 1927ರ ಮಾರ್ಚ್ 20ರಂದು ಮಹಾರಾಷ್ಟ್ರದ ಮಹಾಡ್‌ನಲ್ಲಿ ನಡೆದ ಚೌದಾರ್ ಕೆರೆ ಚಳುವಳಿ ಐತಿಹಾಸಿಕವಾಗಿದ್ದು, ಅಸ್ಪೃಶ್ಯತೆ ವಿರುದ್ಧದ ಸ್ವಾಭಿಮಾನ ಹೋರಾಟದ ಸಂಕೇತವಾಗಿದೆ ಎಂದು ಹೇಳಿದರು. ಈ ಚಳುವಳಿಯನ್ನು ನೆನೆದು ಆಚರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ವಿಶೇಷವಾಗಿ ಸಮುದಾಯದ ವಸತಿ ಪ್ರದೇಶಗಳಲ್ಲಿ ಆಚರಿಸುವುದು ಅರ್ಥಪೂರ್ಣ ಎಂದರು.

ಕಾರ್ಯಕ್ರಮದಲ್ಲಿ ಶ್ಯಾಮಸುಂದರ ತೆಕ್ಕಟ್ಟೆ, ರಾಜು ಬೆಟ್ಟಿನಮನೆ, ದೇವು ಹೆಬ್ರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಂತೋಷ ಮಾಸ್ಟರ್ ಸ್ವಾಗತಿಸಿ, ಅಣ್ಣಪ್ಪ ಮಾಸ್ಟರ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...