ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

Date:

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಈ ಬಾರಿ ಮಣಿಪಾಲ ಹಾಗೂ ಬೆಂಗಳೂರು ಕ್ಯಾಂಪಸ್‌ಗಳ ಒಟ್ಟು 10,277 ವಿದ್ಯಾರ್ಥಿಗಳು ವಿವಿಧ ಪದವಿ, ಚಿನ್ನದ ಪದಕ, ಬಹುಮಾನ ಹಾಗೂ ಡಾಕ್ಟರೇಟ್ ಪದವಿಗಳನ್ನು ಸ್ವೀಕರಿಸಲಿದ್ದಾರೆ ಎಂದು ಮಾಹೆಯ ಪ್ರೊ ಚಾನ್ಸಲರ್ ಡಾ. ಎಚ್.ಎಸ್. ಬಲ್ಲಾಳ್ ತಿಳಿಸಿದರು.

- Advertisement -

ಮಾಹೆಯ ಆಡಳಿತ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಘಟಿಕೋತ್ಸವದ ವಿವರಗಳನ್ನು ನೀಡಿದ ಅವರು, ನವೆಂಬರ್ 19ರಿಂದ 22ರವರೆಗೆ ಮಣಿಪಾಲದ ಕೆಎಂಸಿ ಗ್ರೀನ್ಸ್‌ನಲ್ಲಿ ಮಣಿಪಾಲ ಕ್ಯಾಂಪಸ್‌ನ ಘಟಿಕೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ಒಟ್ಟು 7,694 ವಿದ್ಯಾರ್ಥಿಗಳು ಪದವಿ ಸ್ವೀಕರಿಸಲಿದ್ದಾರೆ. ನವೆಂಬರ್ 28 ಮತ್ತು 29ರಂದು ಬೆಂಗಳೂರು ಕ್ಯಾಂಪಸ್‌ನಲ್ಲಿ ನಡೆಯುವ ಘಟಿಕೋತ್ಸವದಲ್ಲಿ 2,583 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

ವಿವಿಧ ವಿಷಯಗಳಲ್ಲಿ ಸಂಶೋಧನೆ ನಡೆಸಿರುವ 207 ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಗುತ್ತದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ ವಿಶೇಷ ಬಹುಮಾನಗಳನ್ನು ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.

ಘಟಿಕೋತ್ಸವದ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದ ಮಾಹೆಯ ಕುಲಪತಿ ಡಾ. ಶರತ್ ಕೆ. ರಾವ್, ನಾಲ್ಕು ದಿನಗಳ ಕಾಲ ನಡೆಯುವ ಮಣಿಪಾಲ ಕ್ಯಾಂಪಸ್‌ನ ಘಟಿಕೋತ್ಸವ ಪ್ರತಿದಿನ ಮಧ್ಯಾಹ್ನ 2.30ಕ್ಕೆ ಕೆಎಂಸಿ ಗ್ರೀನ್ಸ್‌ನಲ್ಲಿ ಮೆರವಣಿಗೆಯೊಂದಿಗೆ ಆರಂಭವಾಗಲಿದೆ. ಬಳಿಕ ಮುಖ್ಯ ಅತಿಥಿಗಳ ಘಟಿಕೋತ್ಸವ ಭಾಷಣ, ಪದವಿ ಪ್ರದಾನ ಹಾಗೂ ವಿಶ್ವವಿದ್ಯಾಲಯದ ಪ್ರಮುಖರಿಂದ ಅಭಿನಂದನಾ ಸಂದೇಶ ನಡೆಯಲಿದೆ ಎಂದರು.

ಒಟ್ಟು 10,277 ಪದವೀಧರರಲ್ಲಿ 7,851 ಮಂದಿ ಘಟಿಕೋತ್ಸವಕ್ಕೆ ಖುದ್ದು ಹಾಜರಾಗಿ ಪದವಿ ಸ್ವೀಕರಿಸಲಿದ್ದು, ಉಳಿದ 2,426 ಮಂದಿ ಗೈರುಹಾಜರಾಗಿರುವುದರಿಂದ ಅಂಚೆ ಮೂಲಕ ಪ್ರಮಾಣಪತ್ರಗಳನ್ನು ಪಡೆಯಲಿದ್ದಾರೆ ಎಂದು ತಿಳಿಸಿದರು.

ನವೆಂಬರ್ 19ರಂದು ಮೊದಲ ದಿನದ ಘಟಿಕೋತ್ಸವದಲ್ಲಿ ಮಣಿಪಾಲದ ಎಂಐಟಿಯ ಹಳೆಯ ವಿದ್ಯಾರ್ಥಿ ಹಾಗೂ ಪ್ರಸ್ತುತ ಕೋನೆ ಎಲಿವೇಟರ್ಸ್ ಇಂಡಿಯಾ ಮತ್ತು ದಕ್ಷಿಣ ಏಷ್ಯಾದ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕರಾಗಿರುವ ಅಮಿತ್ ಗೋಸೈನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಅಂದು ಒಟ್ಟು 1,401 ಮಂದಿ ಪದವಿ ಸ್ವೀಕರಿಸಲಿದ್ದಾರೆ.

ನವೆಂಬರ್ 20ರಂದು ನಡೆಯುವ ಎರಡನೇ ದಿನದ ಕಾರ್ಯಕ್ರಮದಲ್ಲಿ ಹಿಟಾಚಿ ಸಿಸ್ಟಮ್ಸ್ ಇಂಡಿಯಾದ ನಿರ್ದೇಶಕ ಹಾಗೂ ಸಿಟಿಆರ್‌ಒ ಕೊಜಿ ತ್ಸುಬೋಟಾ ಮುಖ್ಯ ಅತಿಥಿಯಾಗಿರುವರು. ಅಂದು 1,460 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ನಡೆಯಲಿದೆ.

ನವೆಂಬರ್ 21ರಂದು ಬ್ರಿಟನ್‌ನ ಲ್ಯಾಂಕಾಸ್ಟರ್ ವಿಶ್ವವಿದ್ಯಾಲಯದ ಪ್ರೊ-ವೈಸ್ ಚಾನ್ಸಲರ್ ಹಾಗೂ ಸಂಶೋಧನೆ ಮತ್ತು ಔದ್ಯಮಿಕ ವಿಭಾಗದ ಪ್ರೊ. ಜೋ ರೈಕ್ರಾಫ್ಟ್ ಮಲೋನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಕೊನೆಯ ದಿನವಾದ ನವೆಂಬರ್ 22ರಂದು ಕೆನಡಾದ ಯುಎನ್‌ಬಿ ವಿಶ್ವವಿದ್ಯಾಲಯದ ಅಧ್ಯಕ್ಷೆ ಹಾಗೂ ಕುಲಪತಿ ಡಾ. ಕ್ಯಾಥಿ ವಿಲ್ಸನ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಮಾಹೆ ಮತ್ತು ಕೆನಡಾದ ಯುಎನ್‌ಬಿ ವಿಶ್ವವಿದ್ಯಾಲಯದ ನಡುವೆ ಆರಂಭಿಸಿರುವ ದ್ವಿಪದವಿ (ಡ್ಯುಯಲ್ ಡಿಗ್ರಿ) ಕಾರ್ಯಕ್ರಮದಡಿ 25 ನರ್ಸಿಂಗ್ ವಿದ್ಯಾರ್ಥಿಗಳಿಗೆ ಅಂದು ಪದವಿ ಪ್ರದಾನ ಮಾಡಲಾಗುವುದು. ಇದೇ ಮೊದಲ ಬಾರಿಗೆ ಆನ್‌ಲೈನ್ ಮೂಲಕ ಪದವಿ ಪಡೆದ ವಿದ್ಯಾರ್ಥಿಗಳೂ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಡಾ. ಶರತ್ ಕೆ. ರಾವ್ ವಿವರಿಸಿದರು.

ಮಾಹೆಯ ದುಬೈ ಕ್ಯಾಂಪಸ್‌ನಲ್ಲಿ ಈಗಾಗಲೇ ಎರಡು ದಿನಗಳ ಘಟಿಕೋತ್ಸವವನ್ನು ಆಯೋಜಿಸಲಾಗಿದೆ. ಮಣಿಪಾಲ ಹಾಗೂ ಬೆಂಗಳೂರು ಕ್ಯಾಂಪಸ್‌ಗಳ ಘಟಿಕೋತ್ಸವದ ಬಳಿಕ ಮುಂದಿನ ಏಪ್ರಿಲ್‌ನಲ್ಲಿ ಜಮ್ಶೆಡ್‌ಪುರ ಕ್ಯಾಂಪಸ್‌ನಲ್ಲಿ ಹಾಗೂ ಮೇ ತಿಂಗಳಲ್ಲಿ ಮಂಗಳೂರು ಕ್ಯಾಂಪಸ್‌ನಲ್ಲಿ ಘಟಿಕೋತ್ಸವ ನಡೆಯಲಿದೆ ಎಂದು ಡಾ. ಎಚ್.ಎಸ್. ಬಲ್ಲಾಳ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಹೆಯ ರಿಜಿಸ್ಟ್ರಾರ್ ಡಾ. ಪಿ. ಗಿರಿಧರ್ ಕಿಣಿ, ಸಿಒಒ ಡಾ. ಆನಂದ ವೇಣುಗೋಪಾಲ್, ಮೇಜರ್ ಜನರಲ್ ಡಾ. ಮ್ಯಾಥ್ಯೂ ಜೇಕಬ್, ಡಾ. ಸಂದೀಪ್ ಶೆಣೈ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಖಜಾಂಚಿಯಾಗಿ ಜಿ ಎಚ್ ನಾಗರಾಜ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ನೂತನ ಖಜಾಂಚಿಯನ್ನಾಗಿ ಚಿಕ್ಕಬಳ್ಳಾಪುರದ ಜಿ.ಹೆಚ್. ನಾಗರಾಜ್...

ಹಾವೇರಿ | ಮಹಿಳೆಯರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ದೊರೆತರೆ ಆರ್ಥಿಕ ಸಬಲತೆ: ಶಾಸಕ ಶ್ರೀನಿವಾಸ ಮಾನೆ

"ಉದ್ಯಮಶೀಲತೆಯ ಮೊದಲ ಹೆಜ್ಜೆ ಮನೆಯಿಂದಲೇ ಆರಂಭವಾಗಬೇಕು. ಸಣ್ಣ ಪ್ರಮಾಣದಲ್ಲಿ, ಕೇವಲ ನೂರು...

ಸುಳ್ಯ | ಗ್ರೀನ್ ವೀವ್ ಶಾಲೆಯಲ್ಲಿ ʼಬ್ಯಾರಿ ಸಾಹಿತ್ಯ ಕಮ್ಮಟʼ

ವಿದ್ಯಾರ್ಥಿ ದೆಸೆಯಲ್ಲೇ ಸಾಹಿತ್ಯ ರಚನೆಯ ಹವ್ಯಾಸ ಬೆಳೆಸಿಕೊಂಡ ಮಕ್ಕಳಿಗೆ ಭವಿಷ್ಯದಲ್ಲಿ ಉತ್ತಮ...

ಬಾಗೇಪಲ್ಲಿ | ಕೆಪಿಎಸ್ ಮ್ಯಾಗ್ನೆಟ್ ಯೋಜನೆ’ಯನ್ನು ವಿರೋಧಿಸಿ ಪ್ರತಿಭಟನೆ

ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಹೆಸರಿನಲ್ಲಿ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಮ್ಯಾಗ್ನೆಟ್...