ಉಡುಪಿ | ಮಲಬಾರ್ ಚಾರಿಟೇಬಲ್ ಟ್ರಸ್ಟ್‌ನಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ

Date:

ಶಿಕ್ಷಣದ ಮೂಲಕ ಯುವಜನರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಅಧೀನದಲ್ಲಿರುವ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಹಾಗೂ ಅನುದಾನಿತ 75 ಕಾಲೇಜುಗಳ 518 ವಿದ್ಯಾರ್ಥಿಗಳಿಗೆ ಒಟ್ಟು 42 ಲಕ್ಷ ರೂ. ಮೊತ್ತದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಇಂದು ಉಡುಪಿ ಅಜ್ಜರಕಾಡು ಪುರಭವನದಲ್ಲಿ ನಡೆಯಿತು.

- Advertisement -

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ, ಮಲಬಾರ್ ಗೋಲ್ಡ್ ತನ್ನ ಸಿಎಸ್‌ಆರ್ ನಿಧಿಯ ದೊಡ್ಡ ಮೊತ್ತವನ್ನು ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ವಿನಿಯೋಗಿಸುತ್ತಿರುವುದು ಶ್ಲಾಘನೀಯ ಕೆಲಸ ಎಂದು ಹೇಳಿದರು. “ಒಂದು ಕಾಲದಲ್ಲಿ ವೈದ್ಯರ ಮಕ್ಕಳು ಮಾತ್ರ ವೈದ್ಯರಾಗುತ್ತಿದ್ದರು. ಆದರೆ ಕಾಲ ಬದಲಾಗಿದೆ. ಇಂದು ಮೆರಿಟ್ ಮೂಲಕ ಯಾರೂ ಬೇಕಾದರೂ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬಹುದು” ಎಂದು ಅವರು ಹೇಳಿದರು. ಇದೇ ವೇಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರೀತಮ್ ಪೂಜಾರಿ ಅವರನ್ನು ಅಭಿನಂದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...
1010835333

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕಾರ್ಯಕ್ರಮಕ್ಕೆ ಶುಭ ಹಾರೈಸಿ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಿದರು.

ಮಾಜಿ ಸಂಸದ ಜಯಪ್ರಕಾಶ್ ಶೆಟ್ಟಿ ಮಾತನಾಡಿ, ಶಿಕ್ಷಣ ಅಂದರೆ ಕೇವಲ ಅಕ್ಷರಾಭ್ಯಾಸವಲ್ಲ; ಅದರೊಳಗೆ ಕಲೆ, ಕ್ರೀಡೆ ಹಾಗೂ ವ್ಯಕ್ತಿತ್ವ ವಿಕಸನವೂ ಸೇರಿವೆ ಎಂದು ಹೇಳಿದರು. ವಿದ್ಯಾರ್ಥಿಗಳು ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು, ವೇದಿಕೆಯಲ್ಲಿ ಮಾತನಾಡಲು ಕಲಿಯಬೇಕು ಹಾಗೂ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇಂದಿನ ದಿನಗಳಲ್ಲಿ ಉತ್ತಮ ಉದ್ಯೋಗ ಪಡೆಯಲು ಕೃತಕ ಬುದ್ಧಿಮತ್ತೆ (Artificial Intelligence) ಕಲಿಯುವುದು ಬಹಳ ಮುಖ್ಯ” ಎಂದು ಅವರು ಅಭಿಪ್ರಾಯಪಟ್ಟರು. ಜೊತೆಗೆ ಪರಿಸರ ಸ್ವಚ್ಛತೆಯ ಬಗ್ಗೆ ವಿದ್ಯಾರ್ಥಿಗಳು ಹೆಚ್ಚಿನ ಗಮನ ಹರಿಸಬೇಕು ಎಂದರು.

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ ಎ ಗಫೂರ್ ಮಾತನಾಡಿ, “ನಾವು ಸಂವಿಧಾನದ ಅಡಿಯಲ್ಲಿ ಬೆಳೆದಿದ್ದೇವೆ. ಈ ದೇಶದ ಸ್ವಾತಂತ್ರ್ಯ ಹಾಗೂ ಸಂವಿಧಾನಕ್ಕಾಗಿ ಅನೇಕರು ತ್ಯಾಗ ಬಲಿದಾನ ಮಾಡಿದ್ದಾರೆ. ಯುವಕರನ್ನು ಸಬಲೀಕರಣಗೊಳಿಸಲು ಮಲಬಾರ್ ಚಾರಿಟೇಬಲ್ ಟ್ರಸ್ಟ್‌ನಂತಹ ಸಂಸ್ಥೆಗಳ ವಿದ್ಯಾರ್ಥಿವೇತನ ಕಾರ್ಯಕ್ರಮಗಳು ಅತ್ಯಂತ ಶ್ಲಾಘನೀಯ” ಎಂದು ಹೇಳಿದರು.

1010835334

ಚಿನ್ನದ ಮಹತ್ವದ ಕುರಿತು ಮಾತನಾಡಿದ ಅವರು, “ಚಿನ್ನವನ್ನು ಖರೀದಿಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರೂ, ನಾವು ಚಿನ್ನವನ್ನು ಹೆಚ್ಚು ಹೆಚ್ಚು ಖರೀದಿಸಬೇಕು. ಆಪತ್ತಿನ ಸಮಯದಲ್ಲಿ ಅದೇ ನಮ್ಮ ನೆರವಿಗೆ ಬರುತ್ತದೆ” ಎಂದು ಅಭಿಪ್ರಾಯಪಟ್ಟರು. ಯುವಜನತೆ ದೇಶ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು ಹಾಗೂ ಸಂವಿಧಾನ ರಕ್ಷಣೆಗೆ ಮುಂದಾಗಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದ ಪ್ರೀತಮ್ ಪೂಜಾರಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಗೆಳೆಯರ ಬಳಗ ಪೆರ್ಡೂರು, ಯಂಗ್ ಸ್ಟಾರ್ ಕಂಡ್ಲೂರು, ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ), ಕರಕಿರಿ ಫ್ರೆಂಡ್ಸ್ ಸೇವಾ ಬಳಗ (ರಿ), ಜಾನ್ ಗೋಮ್ಸ್ ತಂಡ – ಸೈಂಟ್ ಫ್ರಾನ್ಸಿಸ್ ಚರ್ಚ್ ಉದ್ಯಾವರ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳನ್ನು ಗೌರವಿಸಲಾಯಿತು. ಊರಿಗೆ ಅಗತ್ಯವಿದ್ದ ಅಂಬುಲೆನ್ಸ್ ಸೇವೆ ನೀಡುತ್ತಿರುವ ತಂಡಗಳ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

1010835331

ಮುಖ್ಯ ಅತಿಥಿಗಳಾಗಿ ಸಂಜೆ ಪ್ರಭ ಸಂಪಾದಕ ವೆಂಕಟೇಶ ಪೈ, ಶಿಕ್ಷಕ ಅಲ್ವಿನ್ ದಾಂತೆ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆಯ ಮುಖ್ಯಸ್ಥ ವಿಜಯ ಕುಮಾರ್ ವಹಿಸಿದ್ದರು. ಮಂಗಳೂರು ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರಾದೇಶಿಕ ಸಿಎಸ್‌ಆರ್ ಉಸ್ತುವಾರಿ ಹೈದರ್ ಕೆ., ಪುರಂದರ ತಿಂಗಳಾಯ, ಮುಸ್ತಫಾ ಎ.ಕೆ., ಮಾರುಕಟ್ಟೆ ವ್ಯವಸ್ಥಾಪಕ ತಂಝೀಮ್ ಶಿರ್ವ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿವೃತ್ತ ಉಪನ್ಯಾಸಕ ದಯಾನಂದ ಡಿ. ಕಿದಿಯೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...