ಮಲ್ಲಿಕಾರ್ಜುನ ಖರ್ಗೆ ರ‍್ಯಾಲಿ ನಡೆಸಿದ ಸ್ಥಳ ‘ಶುದ್ಧೀಕರಣ’ ದಲಿತ ವಿರೋಧಿ ಮನಸ್ಥಿತಿಯ ಪ್ರತೀಕ: ಕಾರ್ಕಳ ಕಾಂಗ್ರೆಸ್ ಆಕ್ರೋಶ

Date:

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಬಳಿಕ, ಅದೇ ಸ್ಥಳದಲ್ಲಿ ಬಿಜೆಪಿ ಪರವಾದ ಸಂಘಟನೆಗಳಿಂದ ಪೂಜೆ ಹಾಗೂ ಹವನ ನಡೆಸಿ ‘ಶುದ್ಧೀಕರಣ’ ಮಾಡಿರುವ ಘಟನೆ ತೀವ್ರ ಖಂಡನೀಯವಾಗಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದರು ಎನ್ನುವ ಏಕೈಕ ಕಾರಣಕ್ಕೆ ಬಿಜೆಪಿ ಪರ ಸಂಘಟನೆಗಳು ಸ್ಥಳವನ್ನು ‘ಶುದ್ಧೀಕರಣ’ ಮಾಡಿರುವುದು ಅಸ್ಪ್ರಶ್ಯತೆಯನ್ನು ಪೋಷಿಸುವಂತಿದೆ. ಜಾತಿ ಆಧಾರಿತ ಅಸ್ಪೃಶ್ಯತೆ ಮತ್ತು ತಾರತಮ್ಯವನ್ನು ಸಂವಿಧಾನವೇ ತಿರಸ್ಕರಿಸಿರುವ ಸಂದರ್ಭದಲ್ಲಿ ಇಂತಹ ಆಚರಣೆಗಳು ಅಮಾನವೀಯವಾಗಿದೆ. ಭಾರತವು 80 ನೇ ಸ್ವಾತಂತ್ರ್ಯದ ಹೊಸ್ತಿಲಲ್ಲಿದ್ದರು ಡಾ. ಬಿ.ಆರ್. ಅಂಬೇಡ್ಕರ್ ಅನುಭವಿಸಿದ ನೋವುಗಳನ್ನು ದಲಿತ ಸಮುದಾಯ ಈಗಲೂ ಅನಿಭವಿಸುವಂತಾಗಿದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯ ಸಭೆಯ ವಿರೋದ ಪಕ್ಷದ ನಾಯಕರಾಗಿ ಇರುವವರಿಗೇ ಈ ಪರಿಸ್ಥಿತಿಯಾದರೆ ಇನ್ನು ಸಾಮಾನ್ಯ ದಲಿತರ ಪಾಡನ್ನು ಊಹಿಸಿದರೆ ಆತಂಕವಾಗುತ್ತಿದೆ. ಭಾಷಣದಲ್ಲಿ ನಾವೆಲ್ಲ ಹಿಂದು ನಾವೆಲ್ಲ ಇಂದುಒಂದು ಹೇಳುವ ಸಂಘಪರಿವಾರ ಸಂಘಟನೆಗಳು ಈ ರೀತಿಯ ಘಟನೆಗಳನ್ನು ನಡೆಸಿ ಅಸ್ಪ್ರಶ್ಯತೆಯನ್ನು ಮುಂದುವರಿಸುತ್ತಿರುವುದು ಖಂಡನೀಯ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕರ್ನಾಟಕದಲ್ಲಿಯೂ ದಲಿತ ಸಮುದಾಯದ ಪ್ರಮುಖ ನಾಯಕರಾದ ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಬಿಜೆಪಿ ಹಾಗೂ ಅದರ ಬೆಂಬಲಿಗರಿಂದ ನಡೆದ ರಾಜಕೀಯ ಟೀಕೆಗಳು ಮತ್ತು ವಿರೋಧವನ್ನು ಗಮನಿಸಿದಾಗ, ದಲಿತ ನಾಯಕರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ರಾಜಕೀಯವನ್ನು ಸಮಾಜ ಗಂಭೀರವಾಗಿ ಪ್ರಶ್ನಿಸಬೇಕಾಗಿದೆ.

ಬಿಜೆಪಿ ಮತ್ತು ಬಿಜೆಪಿ ಪರ ಸಂಘಟನೆಗಳು ನಿಜವಾಗಿಯೂ ಅಸ್ಪೃಶ್ಯತೆ ಹಾಗೂ ಜಾತಿ ತಾರತಮ್ಯವನ್ನು ವಿರೋಧಿಸುತ್ತಿದ್ದರೆ, ಇಂತಹ ಘಟನೆಗಳನ್ನು ಸ್ಪಷ್ಟವಾಗಿ ಖಂಡಿಸಬೇಕು. ಧರ್ಮದ ಹೆಸರಿನಲ್ಲಿ ಯಾರನ್ನೂ ಕೀಳಾಗಿ ಕಾಣುವುದು, ವ್ಯಕ್ತಿಯ ಜಾತಿಯ ಆಧಾರದಲ್ಲಿ ಪವಿತ್ರ ಅಪವಿತ್ರ ಎಂಬ ಭೇದ ಸೃಷ್ಟಿಸುವುದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ.

ಮನುಸ್ಮೃತಿಯಂತಹ ಜಾತಿ ವ್ಯವಸ್ಥೆಯನ್ನು ಸಮರ್ಥಿಸುವ ಚಿಂತನೆಗಳಿಗೆ ಬೆಂಬಲ ನೀಡುವ ಶಕ್ತಿಗಳೊಂದಿಗೆ ರಾಜಕೀಯವಾಗಿ ಗುರುತಿಸಿಕೊಂಡಿರುವ ಹಿಂದುಳಿದ ವರ್ಗಗಳ ಹಾಗೂ ದಲಿತ ಸಮುದಾಯದ ಕಾರ್ಯಕರ್ತರು ಇಂತಹ ಘಟನೆಗಳನ್ನು ಇನ್ನಾದರೂ ಗಂಭೀರವಾಗಿ ಪರಾಮರ್ಶಿಸಬೇಕು. ದಲಿತರನ್ನು ಅವಮಾನಿಸುವವರಿಗೆ ನಮ್ಮ ದಿಕ್ಕಾರವಿದೆ. ಅಸ್ಪೃಶ್ಯತೆ ಮತ್ತು ಜಾತಿ ತಾರತಮ್ಯಕ್ಕೆ ಶಾಶ್ವತವಾಗಿ ಅಂತ್ಯ ಹಾಡಿ, ಸಂವಿಧಾನದ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಆಶಯಗಳನ್ನು ಎತ್ತಿಹಿಡಿಯುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಶುಭದರಾವ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...