ಮಂಗಳೂರು | ಬೈಕ್‌ಗೆ ಸ್ಕೂಟರ್ ಡಿಕ್ಕಿ: ಗಂಭೀರ ಗಾಯಗೊಂಡ ಬಾಲಕಿ ಸಾವು

Date:

ಬಂಟ್ವಾಳ ತಾಲೂಕಿನ ಸೂರಿಕುಮೇರು ಸಮೀಪ ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 10 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ಜೂನ್ 3ರಂದು ಸಂಜೆ ನಡೆದಿದೆ.

- Advertisement -

ಮೃತ ಬಾಲಕಿಯನ್ನು ಬಾಳ್ತಿಲ ಗ್ರಾಮದ ಹೇಮಂತ್ ಕುಮಾರ್ ಅವರ ಪುತ್ರಿ ನೈರುತಿ ಎಂ. ಸುವರ್ಣ (10) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಜೂನ್ 3ರಂದು ಸಂಜೆ ನೆಟ್ಲ ಸದಾಶಿವ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹೇಮಂತ್ ಕುಮಾರ್ ಅವರು ಪತ್ನಿ ಹಾಗೂ ಮಕ್ಕಳಾದ ನೈರುತಿ ಮತ್ತು ಆಕೆಯ ತಂಗಿಯೊಂದಿಗೆ ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದ ವೇಳೆ, ಸೂರಿಕುಮೇರು ಸಮೀಪ ಎದುರಾದ ಸ್ಕೂಟರ್‌ ಒಂದು ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ನೈರುತಿ ಕಾಂಕ್ರೀಟ್ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗಳಾಗಿವೆ.

ತಕ್ಷಣ ಆಕೆಯನ್ನು ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದರೂ, ಚಿಕಿತ್ಸೆ ಫಲಿಸದೆ ಮಧ್ಯರಾತ್ರಿ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ನೈರುತಿ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಸ್ಥಳೀಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಭಜನಾ ಕ್ಷೇತ್ರದಲ್ಲಿಯೂ ಆಸಕ್ತಿ ಹೊಂದಿದ್ದ ಅವರು ಉತ್ತಮ ಭಜನಾಪಟುವಾಗಿದ್ದು, ಭಜನಾ ತರಬೇತಿ ಪಡೆಯುತ್ತಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣೆಯ ಎಸ್‌ಐ ಆದರ್ಶ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ನವೆಂಬರ್ 20, 21ರಂದು ಜೈವಿಕ ತಂತ್ರಜ್ಞಾನ ಕುರಿತು ರಾಷ್ಟ್ರೀಯ ಕಾರ್ಯಾಗಾರ

ಬಿವಿವಿಎಸ್ ರಿಸರ್ಚ್ ಸೆಂಟರ್ ಫಾರ್ ಎಕ್ಸಲೆನ್ಸ್ ವತಿಯಿಂದ ನವೆಂಬರ್ 20 ಮತ್ತು...

ರೈತರ ಸಂಕಷ್ಟ ನಿವಾರಿಸಲಿ, ಕಣ್ಣೀರು ಸುರಿಸುವ ಸಭೆಯಾಗದಿರಲಿ: ಕುರುಬೂರು ಶಾಂತಕುಮಾರ್

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಅಕ್ಟೋಬರ್ 26ರಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ...

‘ SIR’ ಫಾರಂ-7 ದುರ್ಬಳಕೆ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಿ: ಜಾಗೃತ ಕರ್ನಾಟಕ ಒತ್ತಾಯ

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ...