ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

Date:

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ ಹಕ್ಕುಪತ್ರವನ್ನು ತಕ್ಷಣ ವಿತರಿಸುವಂತೆ ಆಗ್ರಹಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಕೊರಗ ಸಮುದಾಯದ ಫಲಾನುಭವಿಗಳು ಸೋಮವಾರ ವಾಮಂಜೂರು ಜಂಕ್ಷನ್‌ನಿಂದ ಪಡೀಲ್ ಜಂಕ್ಷನ್‌ವರೆಗೆ ಅರೆಬೆತ್ತಲೆ ಮೆರವಣಿಗೆ ನಡೆಸಿದರು.

- Advertisement -
WhatsApp Image 2026 10 12 at 9.23.18 PM 1

ಬೆಳಗ್ಗೆ 9 ಗಂಟೆಗೆ ವಾಮಂಜೂರು ಜಂಕ್ಷನ್‌ನಿಂದ ಆರಂಭವಾದ ಪಾದಯಾತ್ರೆ ಮಧ್ಯಾಹ್ನ 1.30ರ ವೇಳೆಗೆ ಪಡೀಲ್ ಜಂಕ್ಷನ್ ತಲುಪಿತು. ವಾಮಂಜೂರು, ಪಂಪ್‌ವೆಲ್ ಹಾಗೂ ಪಡೀಲ್ ಸೇರಿದಂತೆ ವಿವಿಧೆಡೆ ಬಹಿರಂಗ ಸಭೆ ನಡೆಸಿದ ಪ್ರತಿಭಟನಾಕಾರರು ತಮ್ಮ ನಿವೇಶನ ಹಕ್ಕಿನ ಬೇಡಿಕೆಯನ್ನು ಮುಂದಿಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಪಡೀಲ್ ಪ್ರಜಾಸೌಧದ ಬಳಿ ಮಾತನಾಡಿದ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ವಾಮಂಜೂರು ಘಟಕದ ಸಂಚಾಲಕ ಕರಿಯ ಕೆ., ಮಂಗಳಜ್ಯೋತಿಯಲ್ಲಿ ಕೊರಗ ಸಮುದಾಯದ ಸುಮಾರು 33 ಕುಟುಂಬಗಳಿಗೆ ಮನೆ ನಿವೇಶನ ಹಸ್ತಾಂತರಿಸುವ ಪ್ರಕ್ರಿಯೆ 2018ರಿಂದ ಬಾಕಿಯಿದೆ. 2022ರಿಂದ ಸಮಿತಿಯ ನೇತೃತ್ವದಲ್ಲಿ ನಿರಂತರವಾಗಿ ಹೋರಾಟ ನಡೆಸಿ, ಸಂಬಂಧಪಟ್ಟ ಇಲಾಖೆಗಳು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಮಹಾನಗರ ಪಾಲಿಕೆ ಅಧಿಕಾರಿಗಳು ನಿವೇಶನಗಳ ಗಡಿ ಗುರುತಿಸಿ ಹಂಚಿಕೆ ಮಾಡುವುದರೊಂದಿಗೆ ಹಕ್ಕುಪತ್ರ ವಿತರಿಸಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

WhatsApp Image 2026 10 12 at 9.23.18 PM

16 ಬಾರಿ ಪ್ರತಿಭಟನೆ, ಮನವಿ ಸಲ್ಲಿಕೆ

ದಾನವಾಗಿ ನೀಡಲಾದ ಭೂಮಿಯ ಹಕ್ಕಿಗಾಗಿ ಈಗಾಗಲೇ 16 ಬಾರಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗಿದೆ. ಆದರೂ ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಗಮನ ಸೆಳೆಯಲು ಅರೆಬೆತ್ತಲೆ ಮೆರವಣಿಗೆ ನಡೆಸಲಾಗಿದೆ. ಒಂದು ವಾರದೊಳಗೆ ಹಕ್ಕುಪತ್ರ ವಿತರಿಸದಿದ್ದರೆ ಸಂಪೂರ್ಣ ಬೆತ್ತಲೆ ಮೆರವಣಿಗೆ ನಡೆಸಲು ನಿರ್ಧರಿಸಲಾಗಿದೆ ಎಂದು ಕರಿಯ ಕೆ. ಎಚ್ಚರಿಸಿದರು.

WhatsApp Image 2026 10 12 at 9.23.18 PM 2

ಸಾಮಾಜಿಕ ಹೋರಾಟಗಾರ ಹಾಗೂ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಮಾತನಾಡಿ, ಧ್ವನಿಯಿಲ್ಲದ ಕೊರಗ ಸಮುದಾಯದ ಬೇಡಿಕೆಗಳ ಬಗ್ಗೆ ಜಿಲ್ಲಾಡಳಿತ ಹಾಗೂ ಸರ್ಕಾರ ಮೌನ ವಹಿಸಿವೆ ಎಂದು ಆರೋಪಿಸಿದರು. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಭೆ-ಸಮಾರಂಭ ಹಾಗೂ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಭರವಸೆ ನೀಡುತ್ತಿದ್ದಾರೆಯೇ ಹೊರತು, ಸಮುದಾಯದ ಬೇಡಿಕೆಗಳನ್ನು ಈಡೇರಿಸಲು ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು.

WhatsApp Image 2026 10 12 at 9.23.20 PM

ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ವಾಸುದೇವ ಉಚ್ಚಿಲ್, ಜೆ. ಬಾಲಕೃಷ್ಣ ಶೆಟ್ಟಿ, ಯಾದವ ಶೆಟ್ಟಿ, ಜಯಂತಿ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ಸಂತೋಷ್ ಬಜಾಲ್, ಯೋಗೀಶ್ ಜಪ್ಪಿನಮೊಗರು, ಶೇಖರ್ ವಾಮಂಜೂರು ಸೇರಿದಂತೆ ವಿಘ್ನೇಶ್ ವಾಮಂಜೂರು, ಪೂರ್ಣಿಮಾ, ದಲಿತ ಹಕ್ಕುಗಳ ಹೋರಾಟ ಸಮಿತಿ ಉಡುಪಿ ಜಿಲ್ಲಾಧ್ಯಕ್ಷ ಸಂಜೀವ ಬಳ್ಕೂರು, ಸುನಿ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2026 10 12 at 9.23.19 PM 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪದವೀಧರರ ಸಮಸ್ಯೆಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕಣಕ್ಕೆ ಇಳಿದಿದ್ದೇನೆ: ಮೋಹನ ಲಿಂಬಿಕಾಯಿ

ನಾಲ್ಕು ದಶಕಗಳಿಂದ ವಿವಿಧ ಸಂಘಟನೆಗಳ ಮೂಲಕ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿದ್ದೇನೆ,...

ಗದಗ | ಅಂಚೆ ಸೇವೆಗಳು ಮನೆ ಬಾಗಿಲಿಗೆ: ಅಂಚೆ ಅಧೀಕ್ಷಕ ಎಸ್. ಎಸ್. ಶಿರಹಟ್ಟಿ

ಪತ್ರ ವ್ಯವಹಾರ ಸೇರಿದಂತೆ ಅಂಚೆ ಇಲಾಖೆಯ ವಿವಿಧ ಸೇವೆಗಳನ್ನು ಗ್ರಾಹಕರು ತಮ್ಮ...

ಧಾರವಾಡ | ಕಾವ್ಯದ ಮೌಲಿಕ ಸಂಗತಿಗಳು ಸಾಮಾಜಿಕ, ರಾಜಕೀಯ ಮುಖಾಮುಖಿಗೊಳಿಸಿದ ಕವಿ ಪಂಪ: ಡಾ. ವೈ.ಎಂ. ಭಜಂತ್ರಿ

ಪಂಪ ಭಾರತ ಇಡೀ ಕಾವ್ಯವನ್ನು ಸಂಕ್ಷಿಪ್ತವಾಗಿ ಪರಿಚಯಿಸಿ, ಈ ಕಾವ್ಯದ ಬಹು...