ಉಡುಪಿ | ಮಣಿಪಾಲದಲ್ಲಿ ಪೊಲೀಸರ ಮೇಲೆಯೇ ಪಟಾಕಿ ಎಸೆದು ಬೆದರಿಕೆ: ಪ್ರಕರಣ ದಾಖಲು

Date:

ತಡರಾತ್ರಿ ಸಾರ್ವಜನಿಕ ರಸ್ತೆಯಲ್ಲಿ ಪಟಾಕಿ ಸಿಡಿಸಿ, ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ತೊಂದರೆ ನೀಡಿದ 15ರಿಂದ 20 ಮಂದಿಯ ಗುಂಪಿನ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ನ.8ರಂದು ರಾತ್ರಿ 11 ಗಂಟೆಯ ಸುಮಾರಿಗೆ ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಶಂಭುಲಿಂಗಯ್ಯ ಎಂ.ಇ. ಅವರು ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ, ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಮಾಂಡವಿ ಎಮರಾಲ್ಡ್ ಅಪಾರ್ಟ್‌ಮೆಂಟ್ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಕೆಲವರು ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ತುರ್ತುಪರಿಸ್ಥಿತಿ ಸರಿಯೇ- ತಪ್ಪೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನಂತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ರಾಜೀವ್ ಗಾಂಧಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಮುಂದಿನ ಚುನಾವಣೆಯವರೆಗೆ ಕಾಯುವಂತೆ ಇಂದಿರಾ ಗಾಂಧಿಯವರಿಗೆ ಸಲಹೆ...

GMPL ಘಟಕದಿಂದ ಪರಿಸರಕ್ಕೆ ಕುತ್ತು: ಜನವಸತಿ ಪ್ರದೇಶದಲ್ಲಿ ವಿಷ...

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಬಜ್ಪೆ ಶಾಂತಿಗುಡ್ಡೆ ಪರಿಸರದ ಜನರು ಕೆಲವು ದಿನಗಳಿಂದ ಆತಂಕದಿಂದಲೇ ಬದುಕನ್ನು ಸಾಗಿಸುವಂತಾಗಿದೆ. ತಮ್ಮ ಪರಿಸರ ವಿಶೇಷ ಆರ್ಥಿಕ ವಲಯವಾಗಿದ್ದರೂ, ಪರಿಸರದ ಮನೆಗಳ ಅಂಗಳ, ಬಾವಿಗಳ ನೀರಿಗೂ...

ತಕ್ಷಣ ಸಿಬ್ಬಂದಿಯೊಂದಿಗೆ ರಾತ್ರಿ 11:10ರ ಸುಮಾರಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಸುಮಾರು 15ರಿಂದ 20 ಮಂದಿ ಗುಂಪಾಗಿ ಸೇರಿಕೊಂಡು ರಸ್ತೆಯಲ್ಲಿ ಪಟಾಕಿ ಸಿಡಿಸುತ್ತಿದ್ದರು. ಅಲ್ಲದೆ, ಕೈಯಲ್ಲಿ ಪಟಾಕಿ ಹಿಡಿದುಕೊಂಡು ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು, ವಾಹನ ಸವಾರರು ಹಾಗೂ ವಾಹನಗಳ ಮೇಲೆ ಎಸೆಯುತ್ತಿದ್ದರು ಎನ್ನಲಾಗಿದೆ.

ಈ ಬಗ್ಗೆ ಸ್ಥಳದಲ್ಲಿದ್ದ ಅನಿಲ್, ಕೀರ್ತಿ, ಡೆನಿಸ್, ರವಿಶೆಟ್ಟಿ ಹಾಗೂ ಜ್ಞಾನೇಶ್ವರ್ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರನ್ನು ಕಂಡ ಗುಂಪಿನಲ್ಲಿದ್ದವರು ಸ್ಥಳದಿಂದ ಓಡಿಹೋಗಿದ್ದಾರೆ. ಓಡಿಹೋದವರ ಪೈಕಿ ಆರ್ಯನ್ ಕುಮಾರ್, ಆದಿತ್ಯ, ಪ್ರಿಯಾಂಶ್, ಸಿದ್ದಾಂತ್ ಸಿಂಗ್ ಹಾಗೂ ಪ್ರಿಯಜಿತ್ ಸಿಂಗ್ ಸೇರಿದಂತೆ ಇತರರ ಹೆಸರುಗಳನ್ನು ಸ್ಥಳದಲ್ಲಿದ್ದವರು ಪೊಲೀಸರಿಗೆ ತಿಳಿಸಿದ್ದಾರೆ.

ಆರೋಪಿಗಳು ಕರ್ತವ್ಯದಲ್ಲಿದ್ದ ಸಮವಸ್ತ್ರಧಾರಿ ಪೊಲೀಸರ ಸೂಚನೆಗಳನ್ನು ಪಾಲಿಸದೆ, ಪೊಲೀಸರ ಮೇಲೆಯೇ ಪಟಾಕಿ ಎಸೆದು ಬೆದರಿಕೆ ಹಾಕಿದ್ದಾರೆ. ವಾಹನ ಸಂಚಾರವಿರುವ ರಸ್ತೆಯಲ್ಲಿ ಪಟಾಕಿ ಸಿಡಿಸಿ ಸಾರ್ವಜನಿಕರ ಸುರಕ್ಷತೆಗೆ ಅಪಾಯ ಉಂಟುಮಾಡಿ ಉಪದ್ರವ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 184/2026ರಂತೆ ಭಾರತೀಯ ನ್ಯಾಯ ಸಂಹಿತೆಯ ಕಲಂ 224, 292 ಹಾಗೂ 3(5)ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇಸಿ ಭತ್ತದ ತಳಿಗಳ ಸಂರಕ್ಷಕ ಮದ್ದೂರಿನ ರೈತ ಕೃಷ್ಣ ಅವರಿಗೆ ರಾಷ್ಟ್ರೀಯ ಪ್ರಶಸ್ತಿ

ಸಾಂಪ್ರದಾಯಿಕ ಕೃಷಿ ಪದ್ಧತಿ, ದೇಸಿ ಬೀಜಗಳ ಸಂರಕ್ಷಣೆ ಹಾಗೂ ಜೈವಿಕ ವೈವಿಧ್ಯತೆಯ...

ಸೋಮನಕೊಪ್ಪ ಗ್ರಾಮದಲ್ಲಿ ಅಗ್ನಿ ಅವಘಡ: ಕಬ್ಬು, ಗೋವಿನಜೋಳ ಬೆಂಕಿಗಾಹುತಿ!

ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ಸೋಮನಕೊಪ್ಪ ಗ್ರಾಮದಲ್ಲಿ ಅಗ್ನಿ ಅವಘಡ ಸಂಭವಿಸಿ...

GMPL ಘಟಕದಿಂದ ಪರಿಸರಕ್ಕೆ ಕುತ್ತು: ಜನವಸತಿ ಪ್ರದೇಶದಲ್ಲಿ ವಿಷ ಬೂದಿಯ ಮಳೆ!

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಬಜ್ಪೆ ಶಾಂತಿಗುಡ್ಡೆ ಪರಿಸರದ ಜನರು...

ಯುವಜನರಲ್ಲಿ ರಾಜಕೀಯ ಜಾಗೃತಿ ಮೂಡಿಸಲು ಜಾಗೃತ ಕರ್ನಾಟಕದಿಂದ ನ. 17ರಂದು ರಾಜ್ಯಮಟ್ಟದ ಭಾಷಣ ಸ್ಪರ್ಧೆ

ಯುವಜನರಲ್ಲಿ ರಾಜಕೀಯ ಜಾಗೃತಿ ಮೂಡಿಸುವುದರ ಜೊತೆಗೆ ಪ್ರಾಮಾಣಿಕತೆ, ಸಾಮಾಜಿಕ ಕಾಳಜಿ, ಸಂವಿಧಾನದ...