ಉಡುಪಿ | ಮೀಲಾದುನ್ನಬಿ ರಜೆ ಆಗಸ್ಟ್ 25ರಂದು ನೀಡಲು ಜಿಲ್ಲಾಧಿಕಾರಿ ಹಾಗೂ ಉಸ್ತುವಾರಿ ಸಚಿವರಿಗೆ ಮನವಿ

Date:

ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ ﷺ ರವರ ಪವಿತ್ರ ಮೀಲಾದುನ್ನಬಿ ಪ್ರಯುಕ್ತ ಸರ್ಕಾರವು ಸಾರ್ವತ್ರಿಕ ರಜೆಯನ್ನು ಆಗಸ್ಟ್ 26ರಂದು ನಿಗದಿಪಡಿಸಿದೆ.

- Advertisement -

ಆದರೆ, ಚಂದ್ರದರ್ಶನದಲ್ಲಿ ಉಂಟಾದ ವ್ಯತ್ಯಾಸದ ಹಿನ್ನೆಲೆಯಲ್ಲಿ ಆಗಸ್ಟ್ 25, ಮಂಗಳವಾರದಂದು ಮೀಲಾದುನ್ನಬಿಯನ್ನು ಆಚರಿಸಬೇಕೆಂದು ಜಿಲ್ಲೆಯ ಖಾಝಿಗಳು ನಿರ್ಧರಿಸಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಆದ್ದರಿಂದ, ಆಗಸ್ಟ್ 26ರಂದು ನಿಗದಿಪಡಿಸಿರುವ ಸಾರ್ವತ್ರಿಕ ರಜೆಯನ್ನು ಆಗಸ್ಟ್ 25, ಮಂಗಳವಾರದಂದು ಮೀಲಾದುನ್ನಬಿ ಪ್ರಯುಕ್ತ ರಜೆಯಾಗಿ ಬದಲಾಯಿಸಿ ನೀಡುವಂತೆ ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಅವರ ಅನುಪಸ್ಥಿತಿಯಲ್ಲಿ ಜಿಲ್ಲಾ ಅಸಿಸ್ಟಾಂಟ್ ಅಧಿಕಾರಿ ಮಾನ್ಯ ಆಬಿದ್ ಸರ್ ರವರಿಗೆ ಸುನ್ನೀ ಕೋ-ಓರ್ಡಿನೇಷನ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.

ಅದೇ ರೀತಿ, ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ರಿಝ್ವಾನ್ ಅರ್ಷದ್ ರವರಿಗೆ ಈ ಕುರಿತು ಇ-ಮೇಲ್ ಮೂಲಕವೂ ಮನವಿ ಸಲ್ಲಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ವಿನಂತಿಸಲಾಯಿತು.

ಸುನ್ನೀ ಕೋ-ಓರ್ಡಿನೇಷನ್ ಉಡುಪಿ ಜಿಲ್ಲಾ ಸಮಿತಿ ಅಧ್ಯಕ್ಷರಾದ ಕೆ. ಎ. ಅಬ್ದುರ್ರಹ್ಮಾನ್ ರಝ್ವಿ ಅಲ್ ಫುರ್ಖಾನಿ ಕಲ್ಕಟ್ಟ ರವರ ನೇತೃತ್ವದಲ್ಲಿ ನಡೆದ ನಿಯೋಗದಲ್ಲಿ ಅಡ್ವೊಕೇಟ್ ಹಬೀಬ್ ಅಲಿ ಅಂಬಾಗಿಲು, ಸುಭಾನ್ ಅಹ್ಮದ್ ಹೊನ್ನಾಳ,ವಸೀಮ್ ಬಾಷಾ ಕುಂದಾಪುರ, ಶೇಖ್ ನಹೀಮ್ ಕಟಪಾಡಿ ಹಾಗೂ ಅಶ್ರಫ್ ತೋನ್ಸೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮಖಂಡಿ | ದಲಿತ ಸಾಹಿತ್ಯ ಶೋಷಣೆಯ ವಿರುದ್ಧದ ಧ್ವನಿ: ಪರಶುರಾಮ ಮಹಾರಾಜನವರ

ಅಸ್ಪೃಶ್ಯತೆ, ಸಾಮಾಜಿಕ ತಾರತಮ್ಯ ಹಾಗೂ ಶೋಷಣೆಯ ವ್ಯವಸ್ಥೆಯ ವಿರುದ್ಧ ಪ್ರಶ್ನೆ ಎತ್ತಿ,...

ವಿಜಯಪುರ | ವಿಶೇಷಚೇತನರ ಸಬಲೀಕರಣಕ್ಕೆ ವಿವಿಧ ಯೋಜನೆ: ಆನ್‌ಲೈನ್ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲೆಯ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...

ಬಾಗಲಕೋಟೆ | ಬರದ ಹೊಡೆತಕ್ಕೆ ಬೆಳೆ ನಿರ್ನಾಮ! ಎಕರೆಗೆ ರೂ.30 ಸಾವಿರ ಖರ್ಚು, ಕೈ ಸೇರದ ಫಸಲು

ಬಾಗಲಕೋಟೆ ಜಿಲ್ಲೆಯ ರೈತರು ಬಿತ್ತನೆ, ಗೊಬ್ಬರ, ಕೂಲಿ ಸೇರಿದಂತೆ ಎಕರೆಗೆ ರೂ.25ರಿಂದ...

ಸಾಗರ | ಡಾ. ಹೆಚ್. ಗಣಪತಿಯಪ್ಪ ಸ್ಮಾರಕ ಅಭಿವೃದ್ಧಿಗೆ ಶಾಸಕರಿಗೆ ಮನವಿ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ದಿವಂಗತ ಹೆಚ್.ಗಣಪತಿಯಪ್ಪ...