ಉಡುಪಿ | ನಾಗರಮಠ ಮರಳು ದಕ್ಕೆ: ಲೋಕಾಯುಕ್ತ ಸೂಚನೆ ಮೇರೆಗೆ ತಜ್ಞರ ಸಮಿತಿ ಪರಿಶೀಲನೆ

Date:

ಉಡುಪಿ ಜಿಲ್ಲೆಯ ಬಾರಕೂರು ಸಮೀಪದ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ಮರಳುಗಾರಿಕೆ ಕಾನೂನು ನಿಯಮಗಳನ್ನು ಮೀರಿ ಹಾಗೂ ಪರಿಸರಕ್ಕೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆ, ಕರ್ನಾಟಕ ಲೋಕಾಯುಕ್ತದ ಸೂಚನೆ ಮೇರೆಗೆ ತಜ್ಞರ ಜಂಟಿ ಸಮಿತಿ ಸ್ಥಳ ಪರಿಶೀಲನೆ ನಡೆಸಿತು.
ಸ್ಥಳೀಯರಾದ ಗಣೇಶ್ ಶೆಟ್ಟಿ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದು, ದೂರಿನ ಗಂಭೀರತೆಯನ್ನು ಪರಿಗಣಿಸಿದ ಲೋಕಾಯುಕ್ತರು ವಿವಿಧ ಇಲಾಖೆಗಳ ತಜ್ಞರನ್ನು ಒಳಗೊಂಡ ಸಮಿತಿಯನ್ನು ರಚಿಸಿ ಪರಿಶೀಲನೆ ನಡೆಸುವಂತೆ ಆದೇಶಿಸಿದ್ದರು. ಅದರಂತೆ ಮೇ 21ರಂದು ಸಮಿತಿ ದೋಣಿ ಮೂಲಕ ಮರಳುಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಿ ವರದಿ ಸಿದ್ಧಪಡಿಸಿತು.

- Advertisement -

ಸಮಿತಿಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉಡುಪಿ ವಿಭಾಗದ ಹಿರಿಯ ಪರಿಸರ ಅಧಿಕಾರಿಗಳು, ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಹಕ ಇಂಜಿನಿಯರ್, ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಸುರತ್ಕಲ್ ಇಂಜಿನಿಯರಿಂಗ್ ಕಾಲೇಜಿನ ಪರಿಸರ ಹಾಗೂ ಭೂವಿಜ್ಞಾನ ವಿಭಾಗದ ಮುಖ್ಯಸ್ಥರು, ಭೂ ದಾಖಲೆಗಳ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಲೋಕಾಯುಕ್ತ ಅಧಿಕಾರಿಗಳು ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...
1010954920

ಮರಳುಗಾರಿಕೆಯಲ್ಲಿ ನಡೆದಿರುವ ಅಕ್ರಮಗಳ ಸ್ವರೂಪ, ಪರಿಸರ ಹಾನಿ, ಪರಿಸರ ವ್ಯತ್ಯಯ ಹಾಗೂ ಸರ್ಕಾರದ ಖಜಾನೆಗೆ ಉಂಟಾದ ಆರ್ಥಿಕ ನಷ್ಟದ ಪ್ರಮಾಣವನ್ನು ಅಂದಾಜು ಮಾಡುವ ಉದ್ದೇಶದಿಂದ ಈ ಪರಿಶೀಲನೆ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಇದಕ್ಕೂ ಮುನ್ನ ಉಡುಪಿ ಲೋಕಾಯುಕ್ತ ಪೊಲೀಸರು ಏಪ್ರಿಲ್ 27ರಂದು ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದರು. ತನಿಖೆ ವೇಳೆ ಅಕ್ರಮ ಹಾಗೂ ಕಾನೂನುಬಾಹಿರ ಚಟುವಟಿಕೆಗಳು ನಡೆದಿರುವುದು ಕಂಡುಬಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ವಿವಿಧ ಇಲಾಖೆಗಳು ಸ್ವತಂತ್ರ ಪರಿಶೀಲನೆ ನಡೆಸದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಸಮಾಧಾನ ವ್ಯಕ್ತಪಡಿಸಿ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಜ್ಞರ ಸಮಿತಿಯಿಂದ ವರದಿ ನೀಡುವಂತೆ ಸೂಚಿಸಿತ್ತು.

ಪರಿಶೀಲನೆ ವೇಳೆ ಲೋಕಾಯುಕ್ತ ಡಿವೈಎಸ್ಪಿ ಹಾಲಮೂರ್ತಿ ರಾವ್, ವೃತ್ತ ನಿರೀಕ್ಷಕ ಮಂಜುನಾಥ್, ಎಡಿಎಲ್‌ಆರ್ ತಿಪ್ಪೆರಾಯ ತೊರವಿ, ಸಣ್ಣ ನೀರಾವರಿ ಇಲಾಖೆಯ ರಾಜುದ್ದೀನ್, ಅರಣ್ಯ ಇಲಾಖೆಯ ಶ್ರೀಧರ್, ಮಾಲಿನ್ಯ ನಿಯಂತ್ರಣ ಮಂಡಳಿಯ ಕೀರ್ತಿ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...