ಉಡುಪಿ | ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ದೇಶಕ್ಕೆ ಕೊಡುಗೆ ನೀಡುವವರಾಗಿ : ಡಾ. ಅಬ್ದುಲ್ ಖಾದರ್

Date:

ವಿದ್ಯಾರ್ಥಿಗಳು ಕೇವಲ ಉತ್ತಮ ಅಂಕ ಗಳಿಸುವುದನ್ನಷ್ಟೇ ಗುರಿಯಾಗಿಸಿಕೊಳ್ಳದೆ, ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ, ಆಡಳಿತ, ಉದ್ಯಮ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡುವ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಬೀದರ್ ಜಿಲ್ಲೆಯ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಡಾ. ಅಬ್ದುಲ್ ಖಾದರ್ ಹೇಳಿದರು.

- Advertisement -

ಅವರು ಇಂದು ನಗರದ ಮಣಿಪಾಲ್‌ ಇನ್ ಹೋಟೆಲ್ ರಂಜಿತಾ ಪ್ಯಾಲೇಸ್‌ನಲ್ಲಿ ನಮ್ಮ ನಾಡ ಒಕ್ಕೂಟ (ರಿ.), ಉಡುಪಿ ಜಿಲ್ಲಾ ಘಟಕ ಆಯೋಜಿಸಿದ್ದ ‘ವೃತ್ತಿ ಮಾರ್ಗದರ್ಶನ ಹಾಗೂ ಸಾಧಕರ ಸನ್ಮಾನ ಸಮಾರಂಭ–2026’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...
WhatsApp Image 2026 08 02 at 10.58.22 AM 1

ಶಿಕ್ಷಣವು ಕೇವಲ ಉದ್ಯೋಗ ಪಡೆಯುವ ಸಾಧನವಲ್ಲ; ಅದು ಉತ್ತಮ ವ್ಯಕ್ತಿತ್ವ ನಿರ್ಮಾಣದ ಜೊತೆಗೆ ಸಮಾಜ ಮತ್ತು ದೇಶದ ಪ್ರಗತಿಗೆ ಕಾರಣವಾಗುವ ಶಕ್ತಿಯಾಗಿದೆ. ವಿದ್ಯಾರ್ಥಿಗಳು ದೊಡ್ಡ ಕನಸುಗಳನ್ನು ಕಾಣಬೇಕು. ಜೀವನದಲ್ಲಿ ಯಾವುದೇ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರೂ ಅದರಲ್ಲಿ ಶ್ರೇಷ್ಠ ಸಾಧನೆ ಮಾಡಿ ರಾಷ್ಟ್ರಕ್ಕೆ ಉಪಯೋಗವಾಗುವ ವ್ಯಕ್ತಿಗಳಾಗಬೇಕು ಎಂದು ಅವರು ಕರೆ ನೀಡಿದರು.

WhatsApp Image 2026 08 02 at 10.58.22 AM

ಶೂನ್ಯದಿಂದ ಆರಂಭವಾದ ಶಾಹೀನ್ ಶಿಕ್ಷಣ ಸಂಸ್ಥೆ ಇಂದು 40 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಸಂಸ್ಥೆಯಾಗಿ ಬೆಳೆದಿದೆ. ಕರ್ನಾಟಕ ಮಾತ್ರವಲ್ಲದೆ ದೇಶದ ವಿವಿಧ ರಾಜ್ಯಗಳ ಸಾವಿರಾರು ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಹಿಂದೂ, ಮುಸ್ಲಿಂ ಸೇರಿದಂತೆ ವಿವಿಧ ಸಮುದಾಯಗಳ ವಿದ್ಯಾರ್ಥಿಗಳು ಯಾವುದೇ ಭೇದಭಾವವಿಲ್ಲದೆ ಒಂದೇ ಕುಟುಂಬದ ಸದಸ್ಯರಂತೆ ಶಿಕ್ಷಣ ಪಡೆಯುತ್ತಿರುವುದು ಭಾರತದ ಐಕ್ಯತೆಯ ಪ್ರತೀಕವಾಗಿದೆ ಎಂದು ಹೇಳಿದರು.

ಶಿಕ್ಷಣದ ಜೊತೆಗೆ ಕೌಶಲಾಭಿವೃದ್ಧಿ, ನಾಯಕತ್ವ ಗುಣ, ಶಿಸ್ತು ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಅಗತ್ಯ. ಇಂದಿನ ವಿದ್ಯಾರ್ಥಿಗಳೇ ನಾಳಿನ ದೇಶದ ಶಕ್ತಿಯಾಗಿರುವುದರಿಂದ ಪ್ರತಿಯೊಬ್ಬರೂ ಸಮಾಜಕ್ಕೆ ಹಾಗೂ ರಾಷ್ಟ್ರಕ್ಕೆ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

WhatsApp Image 2026 08 02 at 10.58.23 AM 1

ಇನ್ನೋರ್ವ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ವಿದ್ಯಾರ್ಥಿಗಳಿಗೆ ಸರಿಯಾದ ಸಮಯದಲ್ಲಿ ವೃತ್ತಿ ಮಾರ್ಗದರ್ಶನ ದೊರೆತರೆ ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದು ಹೇಳಿದರು.

10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಬಳಿಕ ಯಾವ ಕೋರ್ಸ್ ಆಯ್ಕೆ ಮಾಡಬೇಕು ಎಂಬ ಗೊಂದಲ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಸಾಮಾನ್ಯವಾಗಿ ಕಂಡುಬರುತ್ತದೆ. ಅಂತಹ ಗೊಂದಲ ನಿವಾರಣೆಗೆ ನಮ್ಮ ನಾಡ ಒಕ್ಕೂಟ ಹಮ್ಮಿಕೊಂಡಿರುವ ಈ ರೀತಿಯ ಕೆರಿಯರ್ ಗೈಡೆನ್ಸ್ ಕಾರ್ಯಕ್ರಮಗಳು ಅತ್ಯಂತ ಉಪಯುಕ್ತವಾಗಿವೆ ಎಂದು ಹೇಳಿದರು.

WhatsApp Image 2026 08 02 at 10.58.23 AM

ಉಡುಪಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 600ಕ್ಕೂ ಹೆಚ್ಚು ಯುವಕ ಸಂಘಗಳು, ಧಾರ್ಮಿಕ ಕೇಂದ್ರಗಳು ಹಾಗೂ ಸಾಮಾಜಿಕ ಸಂಘಟನೆಗಳು ವರ್ಷಕ್ಕೊಮ್ಮೆ ಇಂತಹ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮಗಳನ್ನು ಆಯೋಜಿಸಿದರೆ ನಿರುದ್ಯೋಗ ಸಮಸ್ಯೆಯನ್ನು ಸಾಕಷ್ಟು ಮಟ್ಟಿಗೆ ತಗ್ಗಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಉಡುಪಿ ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯದ ಗಮನ ಸೆಳೆದ ಜಿಲ್ಲೆಯಾಗಿದೆ. ಕರಾವಳಿಯ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದು, ಅವರಿಗೆ ಸೂಕ್ತ ಮಾರ್ಗದರ್ಶನ ದೊರೆತರೆ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

WhatsApp Image 2026 08 02 at 10.58.23 AM 2

ದಾರುಲ್ ಹುದಾ ಚಾರಿಟೇಬಲ್ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಡಾ. ನಕ್ವಾ ಪರ್ವೇಜ್ ಅಹ್ಮದ್ ಮದನಿ ಮಾತನಾಡಿ, ಜೀವನದಲ್ಲಿ ಯಶಸ್ಸು ಸಾಧಿಸಲು ಗುರಿ, ಪರಿಶ್ರಮ, ಶಿಸ್ತು ಮತ್ತು ಆತ್ಮವಿಶ್ವಾಸ ಅತ್ಯಗತ್ಯ. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಸಾಮರ್ಥ್ಯವನ್ನು ಗುರುತಿಸಿಕೊಂಡು ನಿರಂತರ ಪ್ರಯತ್ನದ ಮೂಲಕ ಯಶಸ್ಸಿನ ಮೆಟ್ಟಿಲು ಏರಬೇಕು ಎಂದು ಪ್ರೇರಣಾದಾಯಕ ಸಂದೇಶ ನೀಡಿದರು.

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಪ್ರಮುಖ ಅಡಿಪಾಯವಾಗಿದ್ದು, ಉನ್ನತ ಶಿಕ್ಷಣದ ಮೂಲಕ ಸಮಾಜ ಮತ್ತು ದೇಶಕ್ಕೆ ಸೇವೆ ಸಲ್ಲಿಸುವ ಯುವಜನತೆ ರೂಪುಗೊಳ್ಳಬೇಕು ಎಂದು ಆಶಿಸಿದರು.

ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ನಕ್ವಾ ಯಾಹ್ಯಾ ಮಲ್ಪೆ ಅಧ್ಯಕ್ಷತೆ ವಹಿಸಿದ್ದರು.

ಮೌಲಾನ ಝಮೀರ್ ಅಹಮದ್ ರಶೀದ್ ಪ್ರಾಸ್ತಾವಿಕವಾಗಿ ಮಾತನಾಡಿ ನಮ್ಮ ನಾಡ ಒಕ್ಕೂಟ ಸಂಘಟನೆಯು ಸಮಾಜದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣ, ವೃತ್ತಿ ಮಾರ್ಗದರ್ಶನ ಹಾಗೂ ಉದ್ಯೋಗಾವಕಾಶಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ಹೇಳಿ ಸರ್ವರನ್ನೂ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸುಲ್ತಾನ್ ಡೈಮಂಡ್ಸ್ ಅಂಡ್ ಗೋಲ್ಡ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ಟಿ.ಎಂ. ಅಬ್ದುಲ್ ರಹೂಫ್, ನಮ್ಮ ನಾಡ ಒಕ್ಕೂಟ ಕೇಂದ್ರ ಸಮಿತಿಯ ಅಧ್ಯಕ್ಷ ಡಾ. ರಿಜ್ವಾನ್ ಅಹ್ಮದ್, ಉದ್ಯಮಿ ಸಾಧಿಕ್‌ ಗುಡ್ಮಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

WhatsApp Image 2026 08 02 at 10.59.05 AM

ವೇದಿಕೆಯಲ್ಲಿ ನಮ್ಮ ನಾಡ ಒಕ್ಕೂಟದ ಟ್ರಸ್ಟಿಗಳಾದ ಮುಶ್ತಾಕ್‌ ಅಹಮದ್‌ ಬೆಳ್ವೆ, ಪೀರು ಸಾಹೇಬ್‌, ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಫಾಝಿಲ್ ಅಹಮ್ಮದ್, ಖಜಾಂಚಿ ಝಹೀರ್ ನಖುದಾ ಗಂಗೊಳ್ಳಿ, ಕಾರ್ಯಕ್ರಮ ಸಂಚಾಲಕ ಟಿ.ಎಂ. ಜಫ್ರುಲ್ಲಾ ಹೂಡೆ, ಉಡುಪಿ ತಾಲೂಕು ಹಾಗೂ ಕಮ್ಯೂನಿಟಿ ಸೆಂಟರ್ ಅಧ್ಯಕ್ಷ ಇಬಾದ್ ಉಸ್ಮಾನ್ ಸಾಹೇಬ್, ಬೈಂದೂರು ತಾಲೂಕು ಅಧ್ಯಕ್ಷ ಸೈಯದ್ ಎಂ. ಅಜ್ಮಲ್, ಕುಂದಾಪುರ ತಾಲೂಕು ಅಧ್ಯಕ್ಷ ಜಮಾಲ್ ಎ., ಬ್ರಹ್ಮಾವರ ತಾಲೂಕು ಅಧ್ಯಕ್ಷ ಸಕೀರ್ ಎಂ., ಹೆಬ್ರಿ ತಾಲೂಕು ಅಧ್ಯಕ್ಷ ಅನ್ಸಾರ್, ಕಾರ್ಕಳ ತಾಲೂಕು ಅಧ್ಯಕ್ಷ ಮುಹಮ್ಮದ್ ಮುಸ್ತಫಾ ಹಾಗೂ ಕಾಪು ತಾಲೂಕು ಅಧ್ಯಕ್ಷ ಅಬ್ದುಲ್ ಹಮೀದ್ ಯೂಸುಫ್, ಉಪಸ್ಥಿತರಿದ್ದರು. ಅಡ್ವೊಕೇಟ್ ಮಹಮ್ಮದ್ ಸುಹಾನ್ ಸಾಸ್ತಾನ್ ಕಾರ್ಯಕ್ರಮ ನಿರೂಪಿಸಿದರು. ಅಬೂ ಮಹಮ್ಮದ್‌ ಧನ್ಯವಾದವಿತ್ತರು.

WhatsApp Image 2026 08 02 at 10.58.22 AM 2

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಣ ತಜ್ಞರು ಹಾಗೂ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು, ವೃತ್ತಿ ಮಾರ್ಗದರ್ಶನದ ಜೊತೆಗೆ ಸಾಧಕರಿಗೆ ಸನ್ಮಾನ ಸಲ್ಲಿಸಿದ ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಸೃಷ್ಟಿಸಲು ಯತ್ನಾಳ್ ಯತ್ನ: ಎಂ.ಬಿ ಪಾಟೀಲ್ ಕಿಡಿ

ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಮುಂದುವರಿಕೆಗೆ ವಿರೋಧ ವ್ಯಕ್ತಪಡಿಸಿ ಜಮೀರ್ ಅಹ್ಮದ್...

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...