ಉಡುಪಿ | ನಿಗಮವಿದೆ, ಅನುದಾನವಿಲ್ಲ; ಇದು ನೋವಿನ ಸಂಗತಿ : ಪ್ರವೀಣ್ ಎಂ. ಪೂಜಾರಿ

Date:

ನಾರಾಯಣ ಗುರುಗಳ ತತ್ವ, ಆದರ್ಶ ಹಾಗೂ ಸಮಾನತೆಯ ಸಂದೇಶವನ್ನು ಸಮಾಜದ ಪ್ರತಿಯೊಬ್ಬರಿಗೂ ತಲುಪಿಸುವ ಕೆಲಸವಾಗಬೇಕು ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಜಿಲ್ಲಾಧ್ಯಕ್ಷ ಪ್ರವೀಣ್ ಎಂ. ಪೂಜಾರಿ ಹೇಳಿದರು.

- Advertisement -

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಶ್ರೀನಾರಾಯಣ ಗುರುಗಳ 172ನೇ ಜನ್ಮ ಜಯಂತಿ ಪ್ರಯುಕ್ತ ಗುರುಗಳ ಸಂದೇಶ ಸಾಮರಸ್ಯ ಜಾಥಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಧಾನಸೌಧದಲ್ಲಿ ನಾರಾಯಣ ಗುರುಗಳ ಪುತ್ಥಳಿ ಸ್ಥಾಪನೆಯಾಗಬೇಕು. ನಾರಾಯಣ ಗುರು ಜಯಂತಿಯಂದು ರಾಜ್ಯ ಸರ್ಕಾರ ರಜೆ ಘೋಷಿಸಬೇಕು ಎಂಬ ಬೇಡಿಕೆ ಈಡೇರಿಲ್ಲ. ಸಮಾಜದ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆಯಾಗಬೇಕು ಎಂದು ಒತ್ತಾಯಿಸಿದ್ದೆವು. ನಿಗಮ ಸ್ಥಾಪನೆಯಾಗಿದ್ದರೂ ಅಗತ್ಯ ಅನುದಾನ ನೀಡದಿರುವುದು ಬಹಳ ನೋವಿನ ಸಂಗತಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...
WhatsApp Image 2026 08 30 at 9.35.05 PM

ಕಾಟಾಚಾರಕ್ಕೆ ಮಾತ್ರ ನಾರಾಯಣ ಗುರು ಜಯಂತಿ ಆಚರಿಸುವಂತಾಗಬಾರದು. ಗುರುಗಳ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ನಡೆಯುವ ಕಾರ್ಯಕ್ರಮಗಳಲ್ಲಿ ಎಲ್ಲ ಸಮುದಾಯಗಳ ಜನರು ಭಾಗವಹಿಸುವಂತಾಗಬೇಕು ಎಂದು ಅವರು ಹೇಳಿದರು.

‘ಒಂದೇ ಜಾತಿ, ಒಂದೇ ಕುಲ’ ಎಂಬ ನಾರಾಯಣ ಗುರುಗಳ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾನತೆಯಿಂದ ಬದುಕಿದಾಗ ಮಾತ್ರ ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯ ನೆಲೆಸಲು ಸಾಧ್ಯ. ಗುರುಗಳ ತತ್ವ ಹಾಗೂ ಸಂದೇಶಗಳು ಒಂದು ಸಮುದಾಯಕ್ಕೆ ಸೀಮಿತವಾಗದೆ ಎಲ್ಲರಿಗೂ ತಲುಪಬೇಕು ಎಂದರು.

ರಾಜ್ಯ ಮಟ್ಟದಲ್ಲಿ ಭಾಷಣ ಸ್ಪರ್ಧೆ ನಡೆದಿರುವುದು ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮದಲ್ಲಿ ವಿವಿಧ ಜಾತಿ, ಧರ್ಮಗಳ ಜನರು ಒಗ್ಗೂಡಿ ಭಾಗವಹಿಸಿರುವುದು ವಿಶೇಷವಾಗಿದೆ. ನಾರಾಯಣ ಗುರುಗಳ ಆಶಯದಂತೆ ಜಾತಿ, ಧರ್ಮದ ಭೇದ ಮರೆತು ಸಮಾಜದಲ್ಲಿ ಸಾಮರಸ್ಯ ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮುಂದುವರಿಯಬೇಕು ಎಂದು ಪ್ರವೀಣ್ ಎಂ. ಪೂಜಾರಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...