ಉಡುಪಿ | ನೇಜಾರು ನಾಲ್ವರ ಹತ್ಯೆ ಪ್ರಕರಣಕ್ಕೆ ಮೂರು ವರ್ಷ: ನ್ಯಾಯದ ನಿರೀಕ್ಷೆಯಲ್ಲಿ ಸಂತ್ರಸ್ತ ಕುಟುಂಬ

Date:

ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಬರ್ಬರ ಹತ್ಯೆ ಪ್ರಕರಣಕ್ಕೆ ನ.12ಕ್ಕೆ ಮೂರು ವರ್ಷ ಪೂರ್ಣಗೊಂಡಿದೆ. ಆದರೆ, ಆ ಕರಾಳ ಘಟನೆಯ ನೆನಪು ಮಾತ್ರ ಇನ್ನೂ ಜನಮಾನಸದಿಂದ ಮಾಸಿಲ್ಲ. ಒಂದೇ ಕುಟುಂಬದ ನಾಲ್ವರನ್ನು ಕಳೆದುಕೊಂಡ ಕುಟುಂಬ ಇಂದಿಗೂ ದುಃಖದಲ್ಲಿದ್ದು, ಪ್ರಕರಣದ ನ್ಯಾಯಾಲಯದ ವಿಚಾರಣೆ ಮುಂದುವರಿದಿದೆ. ಮೃತರ ಕುಟುಂಬ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕೆಂಬ ನಿರೀಕ್ಷೆಯಲ್ಲಿದೆ.

- Advertisement -

2023ರ ನ.12ರಂದು ನೇಜಾರಿನ ತೃಪ್ತಿ ಲೇಔಟ್‌ನಲ್ಲಿ ಹಾಡಹಗಲೇ ನಡೆದ ಈ ನಾಲ್ವರ ಹತ್ಯೆ ಪ್ರಕರಣ ಇಡೀ ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿತ್ತು. ದುಷ್ಕರ್ಮಿಯ ಕ್ರೌರ್ಯಕ್ಕೆ ಒಂದೇ ಕುಟುಂಬದ ತಾಯಿ ಮತ್ತು ಮೂವರು ಮಕ್ಕಳು ಬಲಿಯಾಗಿದ್ದರು. ಕ್ಷಣಾರ್ಧದಲ್ಲಿ ನಾಲ್ಕು ಜೀವಗಳನ್ನು ಕಳೆದುಕೊಂಡ ಈ ದುರಂತ ಉಡುಪಿ ಜಿಲ್ಲೆ ಮಾತ್ರವಲ್ಲದೆ ರಾಜ್ಯದ ಜನತೆಯನ್ನೇ ಬೆಚ್ಚಿಬೀಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ತಮ್ಮ ಕುಟುಂಬದ ನಾಲ್ವರನ್ನು ಕಳೆದುಕೊಂಡಿರುವ ನೋವು ಇಂದಿಗೂ ಕುಟುಂಬಸ್ಥರನ್ನು ಕಾಡುತ್ತಿದೆ. ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂಬುದು ಮೃತರ ಕುಟುಂಬದ ಪ್ರಮುಖ ಆಗ್ರಹವಾಗಿದೆ. ಮೂರು ವರ್ಷ ಕಳೆದರೂ ನ್ಯಾಯದ ನಿರೀಕ್ಷೆ ಮಾತ್ರ ಇನ್ನೂ ಜೀವಂತವಾಗಿದೆ.

Advertisements

81 ಸಾಕ್ಷಿಗಳ ವಿಚಾರಣೆ ಪೂರ್ಣ

ಪ್ರಕರಣದ ತನಿಖೆ ನಡೆಸಿದ ಪೊಲೀಸರು 2024ರ ಫೆ.12ರಂದು ಪ್ರಕರಣ ಮೊದಲ ಹಂತ ಮತ್ತು ಎರಡನೇ ಹಂತದ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಒಟ್ಟು 15 ಸಂಪುಟಗಳಲ್ಲಿ 2202 ಪುಟಗಳ ದೋಷಾರೋಪಣಾಪಟ್ಟಿ ಸಲ್ಲಿಸಿದ್ದು, ಒಟ್ಟು 244 ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿತ್ತು.

ಇದೀಗ ಎಲ್ಲ ಹಂತಗಳು ಮುಗಿದು, ಸಾಕ್ಷಿಗಳ ವಿಚಾರಣೆ ನಡೆಯುತ್ತಿದೆ. ನ.5 ಮತ್ತು ನ.11ರಂದು 11 ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ. ಇದರಲ್ಲಿ ಒಂದು ಸಾಕ್ಷಿಯ ಪಾಟಿ ಸವಾಲು ಬಾಕಿ ಇದ್ದು, ಉಳಿದ ಎಲ್ಲ ಸಾಕ್ಷಿಗಳ ಪೂರ್ಣ ವಿಚಾರಣೆ ನಡೆಸಲಾಗಿದೆ. ಈ ಮೂಲಕ ಈ ಪ್ರಕರಣದಲ್ಲಿ ಒಟ್ಟು 81 ಸಾಕ್ಷಿಗಳ ವಿಚಾರಣೆ ಪ್ರಕ್ರಿಯೆ ಪೂರ್ಣ ಗೊಂಡಿದೆ. ಮುಂದಿನ ಸಾಕ್ಷಿಗಳ ವಿಚಾರಣೆಯನ್ನು ಡಿ.3 ಮತ್ತು 9ಕ್ಕೆ ನಿಗದಿ ಪಡಿಸಿ ನ್ಯಾಯಾಲಯ ಆದೇಶ ನೀಡಿದೆ ಎಂದು ವಿಶೇಷ ಸರಕಾರಿ ಅಭಿಯೋಜಕರಾಗಿ ಶಿವಪ್ರಸಾದ್ ಆಳ್ವ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts
Advertisements

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | 101.9 ಎಫ್‌ಎಂ ಸೇವೆಗೆ ಚಾಲನೆ; ಕರಾವಳಿಯಲ್ಲಿ ಆಕಾಶವಾಣಿ ಪ್ರಸಾರ ವ್ಯವಸ್ಥೆ ಬಲವರ್ಧನೆ : ಸಚಿವ ಅಶ್ವಿನಿ ವೈಷ್ಣವ್

ಕರಾವಳಿ ಪ್ರದೇಶದಲ್ಲಿ ಸಾರ್ವಜನಿಕ ಪ್ರಸಾರ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಉಡುಪಿಯಲ್ಲಿ ಆರಂಭಗೊಂಡಿರುವ...

ಬಾಗಲಕೋಟೆ |ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಪಾರದರ್ಶಕವಾಗಿ ನಡೆಯಲಿ: ಜಿಲ್ಲಾಧಿಕಾರಿ ಸಂಗಪ್ಪ ಸೂಚನೆ

ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವುದು ಪ್ರತಿಯೊಬ್ಬ ಅಧಿಕಾರಿ ಹಾಗೂ...

ಕೋಲಾರ | ಕೋಳಿ ಸಾಕಾಣಿಕೆ ರೈತರ ಬೇಡಿಕೆ ಈಡೇರಿಕೆಗೆ ನ.25ರಂದು ವಿಧಾನಸೌಧ ಚಲೋ

ಕೋಳಿ ಸಾಕಾಣಿಕೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ...