ಭಾರತ–ಜಪಾನ್ ತಂತ್ರಜ್ಞಾನ ಸಹಕಾರದಿಂದ ಹೊಸ ಉದ್ಯಮ ಅವಕಾಶ: ನವತಾ ಹಿರೋಷಿ

Date:

ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್ ಸಾಮರ್ಥ್ಯವನ್ನು ಜೋಡಿಸುವ ಮೂಲಕ ಹೊಸ ತಂತ್ರಜ್ಞಾನ ಹಾಗೂ ಉದ್ಯಮ ಅವಕಾಶಗಳನ್ನು ಸೃಷ್ಟಿಸಬಹುದು ಎಂದು ಬೆಂಗಳೂರಿನ ಜಪಾನ್‌ ಕಾನ್ಸುಲ್‌ ಜನರಲ್‌ ನವತಾ ಹಿರೋಷಿ ಹೇಳಿದರು.

- Advertisement -

ಗುರುವಾರ ನಿಟ್ಟೆ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ನಿಟ್ಟೆ ಫ್ಯೂಚರ್‌ ಸ್ಪೇಸ್‌ನಲ್ಲಿ ನಡೆದ ಸೆಂಟರ್ಸ್ ಆಫ್ ಎಕ್ಸಲೆನ್ಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...
Screenshot 2026 10 01 213648

ಭಾರತದ ಯುವಜನರ ಚೈತನ್ಯ ಹಾಗೂ ಭವಿಷ್ಯದತ್ತ ಸಾಗುವ ಉತ್ಸಾಹ ತಮ್ಮನ್ನು ಪ್ರಭಾವಿತಗೊಳಿಸಿದೆ. ಭಾರತ ಮತ್ತು ಜಪಾನ್‌ನ ಕೈಗಾರಿಕಾ ಹಾಗೂ ತಾಂತ್ರಿಕ ಸಾಮರ್ಥ್ಯಗಳನ್ನು ಪರಸ್ಪರ ಜೋಡಿಸುವುದರಿಂದ ಹೊಸ ಅವಕಾಶಗಳನ್ನು ರೂಪಿಸಬಹುದು ಎಂದು ಅವರು ಹೇಳಿದರು.

ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಾ. ಎಂ.ಎಸ್. ಮೂಡಿತ್ತಾಯ ಮಾತನಾಡಿ, ಇಂತಹ ಕೇಂದ್ರಗಳು ವಿದ್ಯಾರ್ಥಿಗಳನ್ನು ಪ್ರಸ್ತುತ ಕಾರ್ಪೊರೇಟ್ ಜಗತ್ತಿಗೆ ಸಜ್ಜುಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಲಿವೆ ಎಂದರು. ಈ ಪ್ರಯತ್ನಕ್ಕೆ ನಿಟ್ಟೆ ವಿವಿಯ ಅಂತಾರಾಷ್ಟ್ರೀಯ ಸಹಯೋಗ ವಿಭಾಗದ ನಿರ್ದೇಶಕ ಪ್ರೊ. ಹರಿಕೃಷ್ಣ ಭಟ್ ಹಾಗೂ ಯಸುಕೊ ಸಾಟೊ ಅವರ ಕೊಡುಗೆ ಶ್ಲಾಘನೀಯ ಎಂದರು.

ಜಪಾನ್‌ನ ತಕಾವೊ ಕೊಗ್ಯೊ ಕಂಪನಿ ಲಿಮಿಟೆಡ್‌ನ ಅಧ್ಯಕ್ಷ ಹಾಗೂ ಸಿಇಒ ಯುತಾಕಾ ಶಿಮೊಮುರಾ ಮಾತನಾಡಿ, ಭಾರತ ಮತ್ತು ಜಪಾನ್‌ನ ಯುವ ಪ್ರತಿಭೆಗಳು ಹಾಗೂ ಕೈಗಾರಿಕಾ ಕ್ಷೇತ್ರದ ನಡುವಿನ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದರು. ನಿಟ್ಟೆಯ ವಿದ್ಯಾರ್ಥಿಗಳು ಜಪಾನ್‌ಗೆ ತೆರಳಿ ಪಡೆಯುತ್ತಿರುವ ಅನುಭವ ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿದೆ. ಕಳೆದ ವರ್ಷ 115 ವಿದ್ಯಾರ್ಥಿಗಳು ಜಪಾನ್‌ಗೆ ತೆರಳಿದ್ದು, 2027ರಲ್ಲಿ ಇನ್ನಷ್ಟು ವಿದ್ಯಾರ್ಥಿಗಳನ್ನು ಜಪಾನ್‌ಗೆ ಕರೆಸಿಕೊಳ್ಳುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ವಿಫ್ಲಿ ಇಂಡಿಯಾ ಎಲ್‌ಎಲ್‌ಪಿಯ ಇಂಡಿಯಾ ಆಪರೇಷನ್ಸ್ ಮುಖ್ಯಸ್ಥ ಸುಮಂತ್ ಪಡಿವಾಳ್ ಶುಭಹಾರೈಸಿದರು.

Screenshot 2026 10 01 213532

ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿಯ ಕುಲಾಧಿಪತಿ ಹಾಗೂ ಕಾರ್ಯಕ್ರಮದ ಅಧ್ಯಕ್ಷ ವಿಶಾಲ್ ಹೆಗ್ಡೆ ಮಾತನಾಡಿ, ಶಿಕ್ಷಣದ ಜತೆಗೆ ಕೈಗಾರಿಕಾ ಮತ್ತು ಅಂತಾರಾಷ್ಟ್ರೀಯ ಸಹಭಾಗಿತ್ವಕ್ಕೆ ಸಂಸ್ಥೆ ಆದ್ಯತೆ ನೀಡುತ್ತಿದೆ. ವಿದ್ಯಾರ್ಥಿಗಳಿಗೆ ಜಾಗತಿಕ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವ ದೊರೆಯುವಂತೆ ಹೊಸ ಅವಕಾಶಗಳನ್ನು ಸೃಷ್ಟಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಆಟೋಲಿವ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಆರ್‌ಡಿಇ ವಿಭಾಗದ ಪ್ರಧಾನ ವ್ಯವಸ್ಥಾಪಕ ಮಲ್ಲಿಕಾರ್ಜುನ ಬಿ., ಕೊಬಯಶಿ ಕ್ರಿಯೇಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಕೋಕಿ ಕಾಟೊ, ಬೆಂಗಳೂರಿನ ಜಪಾನ್ ಉಪ ಕಾನ್ಸುಲ್ ಜುನ್ ಹೊಮ್ಮ, ಟಿಕೆಇ ಕಂಪನಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಜೂನಿಚಿ ಗೋಯಾ, ವಿಪ್ರೊ 3ಡಿಯ ಪ್ರಧಾನ ವ್ಯವಸ್ಥಾಪಕ ಹಾಗೂ ವ್ಯವಹಾರ ಮುಖ್ಯಸ್ಥ ಯತಿ ರಾಜ್ ಕಸಲ್ ಮತ್ತು ನಿಟ್ಟೆ ಜಪಾನ್ ಸಹಯೋಗದ ಮ್ಯಾನೇಜರ್ ಯಸುಕೊ ಸಾಟೊ ಉಪಸ್ಥಿತರಿದ್ದರು.

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಳುಣ್ಕರ್ ಸ್ವಾಗತಿಸಿದರು. ನಿಟ್ಟೆ ವಿವಿಯ ಅಂತಾರಾಷ್ಟ್ರೀಯ ಸಹಯೋಗ ವಿಭಾಗದ ನಿರ್ದೇಶಕ ಪ್ರೊ. ಹರಿಕೃಷ್ಣ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ಅಭಿವೃದ್ಧಿ, ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥ ಭರತ್ ಜಿ. ಕುಮಾರ್ ವಂದಿಸಿದರು. ವಿದ್ಯಾರ್ಥಿನಿಯರಾದ ಗ್ಲ್ಯಾಡಿಯಾ ಹಾಗೂ ನಿಲಿಮಾ ಭಕ್ತಾ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಹಾಲು ಉತ್ಪಾದಕರಿಗೆ ಮೇವು ಕಟಾವು ಯಂತ್ರಗಳ ವಿತರಣೆ,

ತಾಲ್ಲೂಕಿನ ವೇಮಗಲ್ ಹೋಬಳಿಯ ಹೊಳೇರಹಳ್ಳಿ ಗ್ರಾಮದಲ್ಲಿ ಗುರುವಾರ ಕೋಮುಲ್ ನಿರ್ದೇಶಕ ಚಂಜಿಮಲೆ...

ಧಾರವಾಡ | ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸಹಾಯಧನ ಪಾವತಿಸಲು ಕ್ರಮ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸರ್ಕಾರದಿಂದ ನೀಡಲಾಗುವ ಸಹಾಯಧನದ ಹಣವನ್ನು ಪಾವತಿಸುವ ಕುರಿತು...