ಉಡುಪಿ ಜಿಲ್ಲಾ ಉತ್ತಮ ಶಿಕ್ಷಕಿ ಉಷಾ ಹೆಬ್ಬಾರ್‌ಗೆ ಎನ್‌ಎನ್‌ಒ ಹೆಬ್ರಿ ಘಟಕದಿಂದ ಸನ್ಮಾನ

Date:

ಉಡುಪಿ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಅಲ್ಬಾಡಿ ಮೂರುಕೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಉಷಾ ಹೆಬ್ಬಾರ್ ಅವರನ್ನು ನಮ್ಮ ನಾಡ ಒಕ್ಕೂಟ (ಎನ್‌ಎನ್‌ಒ) ಹೆಬ್ರಿ ಘಟಕದ ವತಿಯಿಂದ ಇಂದು ಸನ್ಮಾನಿಸಲಾಯಿತು.

- Advertisement -

ಬೆಳ್ವೆಯ ಶ್ರೀ ಸಂದೇಶ ಕಿಣಿ ಮೆಮೋರಿಯಲ್ ಸಭಾಂಗಣದಲ್ಲಿ ನಡೆದ ಸನ್ಮಾನ ಸಮಾರಂಭದ ಅಧ್ಯಕ್ಷತೆಯನ್ನು ನಮ್ಮ ನಾಡ ಒಕ್ಕೂಟ ಹೆಬ್ರಿ ಘಟಕದ ಅಧ್ಯಕ್ಷ ಅನ್ಸಾರ್ ಹೊಸಂಗಡಿ ವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...
WhatsApp Image 2026 09 07 at 8.39.57 PM

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎನ್‌ಎಸ್ ಅಕಾಡೆಮಿ ಕಾರ್ಕಳದ ಅಧ್ಯಕ್ಷ ಮುಸ್ತಾಕ್ ಅಹಮದ್ ಬೆಳ್ವೆ, ನಮ್ಮ ನಾಡ ಒಕ್ಕೂಟ ಸೆಂಟ್ರಲ್ ಕಮಿಟಿಯ ಕೋಶಾಧಿಕಾರಿ ಫೀರು ಸಾಹೇಬ್ ಉಡುಪಿ, ಎನ್‌ಎನ್‌ಒ ಉಡುಪಿ ಜಿಲ್ಲಾ ಉಪಾಧ್ಯಕ್ಷ ಮುನಾವರ್ ಅಜೆಕಾರು, ಲಯನ್ಸ್ ಕ್ಲಬ್ ಆರ್ಡಿ-ಬೆಳ್ವೆ-ಗೋಳಿಯಂಗಡಿ ಅಧ್ಯಕ್ಷೆ ಶ್ರೀಮತಿ ಚಂದ್ರಿಕಾ, ಟೀಮ್ ಮಲೆನಾಡು ಹ್ಯೂಮೇನಿಟೇರಿಯನ್ ಟ್ರಸ್ಟ್ ಬೆಳ್ವೆಯ ಅಧ್ಯಕ್ಷ ಅಬ್ದುಲ್ ಶುಕುರ್ ಬೆಳ್ವೆ, ಶ್ರೀಧರ್ ಹೆಬ್ಬಾರ್, ಅಲ್ಬಾಡಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಆನಂದ್ ಪೂಜಾರಿ, ಎನ್‌ಎನ್‌ಒ ಹೆಬ್ರಿ ಘಟಕದ ಉಪಾಧ್ಯಕ್ಷ ಶರೀಫ್ ಸಾಹೇಬ್, ಎನ್‌ಎನ್‌ಒ ಉಡುಪಿ ತಾಲೂಕು ಸದಸ್ಯ ಅಕ್ರಮ್ ಆದಿಉಡುಪಿ, ಹಳೆ ವಿದ್ಯಾರ್ಥಿ ಸಂಘದ ಅನ್ವರ್ ಹುಸೇನ್ ಅಲ್ಬಾಡಿ ಮೊದಲಾದವರು ಉಪಸ್ಥಿತರಿದ್ದರು.

WhatsApp Image 2026 09 07 at 8.39.56 PM

ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ಉಷಾ ಹೆಬ್ಬಾರ್ ಅವರಿಗೆ ಉಡುಪಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ಈ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.

WhatsApp Image 2026 09 07 at 8.39.57 PM 1

ವಿದ್ಯಾರ್ಥಿ ಸಾಕೀಫ್ ತರಝ ಪ್ರಾರ್ಥನೆ ನೆರವೇರಿಸಿದರು. ಎನ್‌ಎನ್‌ಒ ಹೆಬ್ರಿ ಘಟಕದ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಅರಾಫತ್ ಕಾರ್ಯಕ್ರಮ ನಿರೂಪಿಸಿದರು. ಯುವ ಸಂಘಟಕ ಮೊಹಮ್ಮದ್ ಆಸೀಫ್ ಅಲ್ಬಾಡಿ ಸ್ವಾಗತಿಸಿ ವಂದಿಸಿದರು. ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡುವುದರೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...

ಕೋಲಾರ | ಆಗ್ನೇಯ ಪದವೀಧರರ ಕ್ಷೇತ್ರ : ಕೋಲಾರ ಜಿಲ್ಲೆಯಲ್ಲಿ ಶೇ. 76.99 ರಷ್ಟು ಮತದಾನ : ಚುನಾವಣಾಧಿಕಾರಿ ಎಂ.ಆರ್. ರವಿಕುಮಾರ್

ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಕೋಲಾರ ಜಿಲ್ಲೆಯಲ್ಲಿ...

ನಾಡ ದೇವತೆಯ ಬಳಿ ನನ್ನ ಅಳಲು; ವಿವೇಕಾನಂದ ಎಚ್. ಕೆ

ನಾಡ ದೇವಿ ತಾಯಿ ಚಾಮುಂಡೇಶ್ವರಿ, ನಿನಗೆ ತುಂಬು ಹೃದಯದ ಧನ್ಯವಾದಗಳು. ನಿನ್ನ...