ಉಡುಪಿ | ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ ಅಭಿವೃದ್ಧಿಗೆ ಆದ್ಯತೆ : ಸಚಿವ ಕೆ.ಜೆ. ಜಾರ್ಜ್

Date:

ಪಡುಬಿದ್ರಿಯ ಬ್ಲೂ ಫ್ಲ್ಯಾಗ್ ಬೀಚ್‌ಗೆ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಅಗತ್ಯವಿರುವ ಮೂಲಸೌಕರ್ಯ ಹಾಗೂ ವಿವಿಧ ಸೌಲಭ್ಯಗಳನ್ನು ಆದ್ಯತೆಯ ಮೇಲೆ ಕಲ್ಪಿಸಲಾಗುವುದು ಎಂದು ಪ್ರವಾಸೋದ್ಯಮ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

- Advertisement -

ಸೋಮವಾರ ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್‌ಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ ಸಚಿವರು, ಬೀಚ್ ಪ್ರದೇಶದಲ್ಲಿ ಪ್ರವಾಸಿಗರಿಗೆ ಅಗತ್ಯವಿರುವ ಮೂಲಸೌಕರ್ಯಗಳು ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಪ್ರತಿದಿನ ಒಂದರಿಂದ ಎರಡು ಸಾವಿರಕ್ಕೂ ಅಧಿಕ ಪ್ರವಾಸಿಗರು ಬೀಚ್‌ಗೆ ಆಗಮಿಸುತ್ತಿದ್ದು, ವಾರಾಂತ್ಯದಲ್ಲಿ ಪ್ರವಾಸಿಗರ ಸಂಖ್ಯೆ ಮತ್ತಷ್ಟು ಹೆಚ್ಚುತ್ತಿದೆ. ಹೀಗಾಗಿ ಪ್ರವಾಸಿಗರ ಅನುಕೂಲಕ್ಕಾಗಿ ಅಗತ್ಯವಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಅಗತ್ಯವಿದೆ ಎಂದು ಸಚಿವರು ತಿಳಿಸಿದರು.

ವಿದ್ಯುತ್ ಸಮಸ್ಯೆಗೆ ₹50 ಲಕ್ಷ

ಕರಾವಳಿ ಪ್ರದೇಶದ ವಾತಾವರಣದಲ್ಲಿ ಉಪ್ಪಿನ ಅಂಶ ಹೆಚ್ಚಿರುವುದರಿಂದ ವಿದ್ಯುತ್ ತಂತಿಗಳು ತುಕ್ಕು ಹಿಡಿದು ಹಾನಿಗೊಳಗಾಗುತ್ತಿರುವ ಪರಿಣಾಮ ಬೀಚ್ ಪ್ರದೇಶದಲ್ಲಿ ನಿರಂತರ ವಿದ್ಯುತ್ ಪೂರೈಕೆಗೆ ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬ್ಲೂ ಫ್ಲ್ಯಾಗ್ ಬೀಚ್ ರಸ್ತೆಯಲ್ಲಿರುವ ವಿದ್ಯುತ್ ತಂತಿಗಳಿಗೆ ಇನ್ಸುಲೇಟೆಡ್ ಕೇಬಲ್ ಅಳವಡಿಸಲು ಇಂಧನ ಇಲಾಖೆಯಿಂದ ತಕ್ಷಣವೇ ₹50 ಲಕ್ಷ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ಘೋಷಿಸಿದರು. ಈ ಕಾಮಗಾರಿಗೆ ಸಂಬಂಧಿಸಿದ ಅಂದಾಜು ಪಟ್ಟಿಯನ್ನು ಒಂದು ವಾರದೊಳಗೆ ಸಿದ್ಧಪಡಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

3 ಕಿ.ಮೀ. ಸಂಪರ್ಕ ರಸ್ತೆ ಅಭಿವೃದ್ಧಿ

ರಾಷ್ಟ್ರೀಯ ಹೆದ್ದಾರಿ 66ರಿಂದ ಪಡುಬಿದ್ರಿ ಬೀಚ್‌ಗೆ ಸಂಪರ್ಕ ಕಲ್ಪಿಸುವ ಸುಮಾರು ಮೂರು ಕಿ.ಮೀ. ರಸ್ತೆಯ ವಿಸ್ತರಣೆ ಹಾಗೂ ಕಾಂಕ್ರೀಟ್ ಕಾಮಗಾರಿ ಕೈಗೊಳ್ಳುವ ಕುರಿತು ಸಚಿವರು ಮಾಹಿತಿ ಪಡೆದರು. ಅದೇ ರೀತಿ ಎಂಡ್‌ಪಾಯಿಂಟ್ ರಸ್ತೆಯ ಕಾಮಿನಿ ಹೊಳೆಯ ಹೂಳೆತ್ತುವಿಕೆ ಸೇರಿದಂತೆ ವಿವಿಧ ಕಾಮಗಾರಿಗಳ ಕುರಿತು ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳೊಂದಿಗೆ ಶೀಘ್ರದಲ್ಲೇ ಜಂಟಿ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಸರ್ಕಾರಿ ಜಾಗ ಒತ್ತುವರಿ ಪರಿಶೀಲನೆ

ಬೀಚ್‌ಗೆ ಹೊಂದಿಕೊಂಡಿರುವ ಸರ್ಕಾರಿ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿರುವ ಕುರಿತು ಮೌಖಿಕ ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಒತ್ತುವರಿ ಕಂಡುಬಂದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದರು.

ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಅಗತ್ಯವಿದೆ. ಬೀಚ್ ಸಮೀಪದಲ್ಲಿರುವ ಸರ್ಕಾರಿ ಅಥವಾ ಖಾಸಗಿ ಜಾಗವನ್ನು ಪಡೆದು ಪ್ರವಾಸಿಗರ ವಾಹನಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಚಿವರು ತಿಳಿಸಿದರು.

PADUBIDRI BEACH

ಕಡಲ್ಕೊರೆತ ನಿಯಂತ್ರಣಕ್ಕೆ ಕ್ರಮ

ಪಡುಬಿದ್ರಿ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಕಡಲ್ಕೊರೆತದಿಂದ ಪ್ರವಾಸೋದ್ಯಮ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಡಲ್ಕೊರೆತ ನಿಯಂತ್ರಣ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೆ.ಜೆ. ಜಾರ್ಜ್ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಹೆಜಮಾಡಿ–ಪಡುಬಿದ್ರಿ ನಡುವಿನ ಮುಟ್ಟಳಿವೆಗೆ ಬ್ರೇಕ್‌ವಾಟರ್ ನಿರ್ಮಾಣ, ನಾದರಸ್ತಿಯಲ್ಲಿರುವ ಬೀಚ್ ಸಂಪರ್ಕ ಸೇತುವೆಗೆ ಕಾಯಕಲ್ಪ, ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ ಬಳಿ ಬಾಕಿ ಇರುವ ಒಂದು ಕಿ.ಮೀ. ಸಮುದ್ರ ತಡೆಗೋಡೆ ನಿರ್ಮಾಣ ಹಾಗೂ ಎಂಡ್‌ಪಾಯಿಂಟ್ ದ್ವೀಪಕ್ಕೆ ತೂಗು ಸೇತುವೆ ನಿರ್ಮಿಸುವಂತೆ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಈ ಬೇಡಿಕೆಗಳ ಕುರಿತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ರಾಜ್ಯ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಅವರು ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್‌ನ ಪ್ರಸ್ತುತ ಸ್ಥಿತಿ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಚಿವರ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ಮೆಸ್ಕಾಂ ಚೇರ್‌ಮೆನ್ ಹರೀಶ್ ಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ರಾಮ್ ಪ್ರಸಾತ್ ಮನೋಹರ್, ಎಡಿಸಿ ಅಬೀದ್ ಗಧ್ಯಾಳ, ಮೆಸ್ಕಾಂ ಎಂ.ಡಿ. ಹರೀಶ್, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸೌಮ್ಯಾ, ಸಹಾಯಕ ನಿರ್ದೇಶಕಿ ವಿಂಧ್ಯಾ ಎನ್.ಎಂ., ಬ್ಲೂ ಫ್ಲ್ಯಾಗ್ ಬೀಚ್ ಮ್ಯಾನೇಜರ್ ವಿಜಯ ಶೆಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಕೊಲೆ ಪ್ರಕರಣ: ಎಸ್‌ಐಟಿ ತನಿಖೆ ಚುರುಕು, ತಾಯಿ ಕುಸುಮಾವತಿ ರಕ್ತದ ಮಾದರಿ ಸಂಗ್ರಹ

ಧರ್ಮಸ್ಥಳದಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ...

ಚಿಕ್ಕಮಗಳೂರು | ಹಬ್ಬಕ್ಕೆ ಹೊಸ ಬಟ್ಟೆ ಖರೀದಿಸಲು ಹೋಗಿ ಯುವಕ ಸಾವು 

ಜಿಲ್ಲೆಯ ಅಜ್ಜಂಪುರ ತಾಲೂಕಿನ ನವರಾತ್ರಿ ಸಡಗರದಲ್ಲಿದ್ದ ವೇಳೆ ಬಟ್ಟೆ ಖರೀದಿಸಲು ಹೋಗಿದ್ದ...

ವಿಜಯಪುರ | ಮತದಾರರ ಹಕ್ಕು ಕಸಿಯುವ ಪ್ರಯತ್ನ: ಎಸ್‌ಐಆರ್ ವಿರುದ್ಧ ವಿಜಯಪುರದಲ್ಲಿ ತಿರಂಗ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ...

ಉತ್ತರ ಕನ್ನಡ | ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.76.52ರಷ್ಟು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಉತ್ತರ ಕನ್ನಡ...