ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯಿಂದ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ ಆಚರಣೆ

Date:

ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಉಪಸ್ಥಿತಿಯಲ್ಲಿ ಪೇಟೆ ಭಾಗದ ಧ್ವಜಸ್ತಂಭದ ಬಳಿ ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು.

- Advertisement -

ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, “ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಅನೇಕ ಭಾಷೆ, ಸಂಸ್ಕೃತಿ ಹಾಗೂ ಧರ್ಮಗಳ ಸುಂದರ ಸಂಗಮವಾಗಿದೆ. ಭಾರತ ಜಾತ್ಯತೀತ ರಾಷ್ಟ್ರವಾಗಿದ್ದು, ಪ್ರತಿಯೊಬ್ಬರೂ ಪರಸ್ಪರ ಗೌರವದಿಂದ ಬದುಕುವುದು ನಮ್ಮ ದೇಶದ ಶಕ್ತಿ. ದೇಶವನ್ನು ಗೌರವಿಸಿ, ಸಂವಿಧಾನದ ಆದರ್ಶಗಳನ್ನು ಎತ್ತಿಹಿಡಿಯುವ ಪ್ರತಿಯೊಬ್ಬರೂ ನಿಜವಾದ ಭಾರತೀಯರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಸೇನಾಧಿಕಾರಿ ಪಿ.ಕೆ. ಮುಯ್ಯಿದ್ದೀನ್ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸಾರ್ವಜನಿಕ ನಿಯಮಗಳನ್ನು ಗೌರವಿಸಿ, ಜವಾಬ್ದಾರಿಯುತ ನಾಗರಿಕರಾಗಿ ನಡೆದುಕೊಂಡು ದೇಶದ ಪ್ರಗತಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವೈ. ಸುಕುಮಾರ್ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗವನ್ನು ಸ್ಮರಿಸುವುದರ ಜೊತೆಗೆ ಸಂವಿಧಾನದ ಮೌಲ್ಯಗಳನ್ನು ರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ. ಯುವಜನತೆ ದೇಶದ ಭವಿಷ್ಯವಾಗಿದ್ದು, ಪ್ರಜಾಪ್ರಭುತ್ವದ ಆಶಯಗಳನ್ನು ಬಲಪಡಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಶಾಂತಲತಾ ಶೆಟ್ಟಿ, ನವೀನ್ ಎನ್ ಶೆಟ್ಟಿ, ಗಣೇಶ್ ಕೋಟ್ಯಾನ್, ಮಹಮ್ಮದ್ ನಿಯಾಜ್, ಅಶೋಕ್ ಸಾಲ್ಯಾನ್, ಕರುಣಾಕರ್ ಪೂಜಾರಿ, ಅಶ್ವಿನ್ ಕೋಟ್ಯಾನ್, ಕೀರ್ತಿ ಕುಮಾರ್,ಎಮ್ ಎಸ್ , ಶಾಫಿ ಸುನಂದ ದೇವಾಡಿಗ, ಜ್ಯೋತಿ ಮೆನನ್, ಸುಚರಿತಾ ಅಮೀನ್, ಮುಬೀನಾ ಬೇಗಮ್, ತಸ್ನೀನ್ ಆರಾ, ನ್ಯಮಾ, ಉಷಾ, ರಾಜೇಶ್ ಶೇರಿಗಾರ್, ಲಿಯಾಖತ್ ಮುನ್ನ ಅಬ್ದುಲ್ ರಜಾಕ್, ರಿಫಾನ್, ಸದಾಶಿವ ಪೂಜಾರಿ, ಶಬಾನ್, ವಾಮನ್ ಪೂಜಾರಿ, ಅಬ್ದುಲ್ ಖಾದರ್ , ಸುಬ್ಬಯ್ಯ ಮೂಲ್ಯ, ಅರ್ಫಾಜ್ ಹಾಗೂ ನಾರಾಯಣ್ ಕಲ್ಲಟೆ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೀಜ್ ಹುಸೇನ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸಂತೋಷ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ದೇಶಭಕ್ತಿ, ಸಂವಿಧಾನದ ಮೌಲ್ಯಗಳು ಹಾಗೂ ಸರ್ವಧರ್ಮ ಸಮಾನತೆಯ ಸಂದೇಶದೊಂದಿಗೆ ನಡೆದ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರದಿಂದ ಕಂಗೆಟ್ಟ ರೈತರಿಗೆ ನೆರವಾಗಿ: ಕೇಂದ್ರಕ್ಕೆ ಕಾಶಪ್ಪನವರ ಒತ್ತಾಯ

ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿರುವ ಸಂದರ್ಭದಲ್ಲಿ ರೈತರಿಗೆ ಅಗತ್ಯ...

ಚಾಮರಾಜನಗರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

ಚಾಮರಾಜನಗರ ಜಿಲ್ಲೆಯ ಜನರಿಗೆ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಶಕ್ತಿ ತುಂಬುವ...

ಕಾರವಾರ | 80 ಪ್ರಕರಣಗಳ ಪೈಕಿ 63ಕ್ಕೆ ಒಂದೇ ದಿನದಲ್ಲಿ ಪರಿಹಾರ

ಕಾರವಾರ: ವಿವಿಧ ಇಲಾಖೆಗಳು ಹಾಗೂ ಕಾನೂನು ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ಬಾಕಿ ಉಳಿದಿದ್ದ...

SIR: ಮತದಾನದ ಹಕ್ಕು ಕಸಿಯುವ ಯಾವುದೇ ವ್ಯವಸ್ಥೆ ಒಪ್ಪಲಾಗದು-ಪ್ರಕಾಶ್ ರಾಜ್

ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಮೂಲಭೂತ ಪ್ರಜಾಸತ್ತಾತ್ಮಕ ಹಕ್ಕಾಗಿದ್ದು, ಆ ಹಕ್ಕಿಗೆ...