ಉಡುಪಿ | ಮತೀಯ ದ್ವೇಷದ ರಾಜಕೀಯಕ್ಕೆ ಜನರು ಎಚ್ಚರವಾಗಬೇಕು: ಕೆ ಫಣಿರಾಜ್

Date:

ಶಾಲಾ-ಕಾಲೇಜುಗಳಲ್ಲಿ ಸೀಮಿತ ಮತೀಯ ತೊಡುಗೆಗಳಿಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸಹಬಾಳ್ವೆ ಉಡುಪಿ ವೇದಿಕೆ ಸ್ವಾಗತಿಸಿದ್ದು, ತಡವಾಗಿಯಾದರೂ ಸರ್ಕಾರ ಸಮತೋಲನದ ಕ್ರಮ ಕೈಗೊಂಡಿದೆ ಎಂದು ಅಭಿಪ್ರಾಯಪಟ್ಟಿದೆ.

- Advertisement -

ಈ ಕುರಿತು ಸಹಬಾಳ್ವೆ ವೇದಿಕೆಯ ಪ್ರಧಾನ ಸಂಚಾಲಕ ಕೆ. ಫಣಿರಾಜ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 2022ರಲ್ಲಿ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಆರಂಭವಾದ ಹಿಜಾಬ್ ವಿವಾದವನ್ನು ಅನಾವಶ್ಯಕವಾಗಿ ರಾಜ್ಯವ್ಯಾಪಿ ಮಟ್ಟಕ್ಕೆ ಕೊಂಡೊಯ್ಯಲಾಯಿತು. ಅಲ್ಪಸಂಖ್ಯಾತ ವಿದ್ಯಾರ್ಥಿನಿಯರ ಸಹಜ ಜೀವನ ಕ್ರಮವನ್ನು ಗುರಿಯಾಗಿಸಿಕೊಂಡ ರಾಜಕೀಯ ಯೋಜನೆಯ ಭಾಗವಾಗಿ ಈ ವಿವಾದವನ್ನು ಬೆಳೆಸಲಾಯಿತು ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಅಂದಿನ ಬಿಜೆಪಿ ಸರ್ಕಾರವು ಸಮಾನತೆಯ ಹೆಸರಿನಲ್ಲಿ ಹಿಜಾಬ್ ಸೇರಿದಂತೆ ಅಲ್ಪಸಂಖ್ಯಾತರ ಮತೀಯ ಸಾಂಕೇತಿಕ ಉಡುಗೆಗಳ ಮೇಲೆ ನಿರ್ಬಂಧ ಹೇರಿದ್ದು, ಅದರ ದುರುದ್ದೇಶ ನಂತರದ ಬೆಳವಣಿಗೆಗಳಿಂದ ಬಹಿರಂಗವಾಯಿತು ಎಂದು ಪ್ರಕಟಣೆ ತಿಳಿಸಿದೆ. ನಂತರದ ವರ್ಷಗಳಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಜನಿವಾರ ಧಾರಣೆಗೆ ಸಂಬಂಧಿಸಿದ ವಿವಾದಗಳ ಸಂದರ್ಭದಲ್ಲಿ ಇದೇ ಸಂಘಟನೆಗಳು ಧಾರ್ಮಿಕ ಹಕ್ಕುಗಳ ಪರವಾಗಿ ಮಾತನಾಡಿದ್ದವು ಎಂಬುದನ್ನೂ ಉಲ್ಲೇಖಿಸಲಾಗಿದೆ.

2026ರ ಪರೀಕ್ಷೆಗಳ ವೇಳೆ ಮತ್ತೆ ಇದೇ ರೀತಿಯ ವಿವಾದ ಉಂಟಾದ ಹಿನ್ನೆಲೆಯಲ್ಲಿ ಸರ್ಕಾರವು 2022ರ ಆದೇಶವನ್ನು ಹಿಂಪಡೆದಿರುವುದು ಸರಿಯಾದ ಕ್ರಮ ಎಂದು ಸಹಬಾಳ್ವೆ ಉಡುಪಿ ಅಭಿಪ್ರಾಯಪಟ್ಟಿದೆ.

ಇದೇ ವೇಳೆ, ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಉಡುಪಿ ಶಾಸಕರು ನೀಡಿರುವ ಹೇಳಿಕೆಗಳನ್ನು ವೇದಿಕೆ ಖಂಡಿಸಿದ್ದು, ಇಂತಹ ಉಗ್ರ ಮತೀಯ ದ್ವೇಷದ ಹೇಳಿಕೆಗಳು ಸಮಾಜದ ಸಹಬಾಳ್ವೆ ಚೇತನಕ್ಕೆ ಧಕ್ಕೆ ತರುತ್ತವೆ ಎಂದು ಹೇಳಿದೆ.

ರಾಜ್ಯದ ಜನರು ಬಹುಸಂಖ್ಯಾತ ಮತೀಯವಾದಿ ರಾಜಕೀಯದ ಅಪಾಯವನ್ನು ಅರಿತು ಶಾಂತಿ, ಸೌಹಾರ್ದ ಮತ್ತು ಸಹಬಾಳ್ವೆಗೆ ಪೂರಕವಾದ ನಡೆಗಳನ್ನು ಬೆಂಬಲಿಸಬೇಕು ಎಂದು ಸಹಬಾಳ್ವೆ ಉಡುಪಿ ಮನವಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಹೊಲಗಳಿಗೆ ಸರ್ವಿಸ್ ರಸ್ತೆ ನಿರ್ಮಿಸದಿದ್ದರೆ ಹೆದ್ದಾರಿ ಕಾಮಗಾರಿ ಬಂದ್: ಅಮರೇಗೌಡ ಪಾಟೀಲ ಬಯ್ಯಾಪುರ

ರಾಷ್ಟ್ರೀಯ ಹೆದ್ದಾರಿ(748 ಎ) ನಿರ್ಮಾಣದಿಂದ ರೈತರಿಗೆ ತಮ್ಮ ಹೊಲಗಳಿಗೆ ತೆರಳಲು ಸರ್ವಿಸ್...

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...