ಉಡುಪಿ | ಪೆರಂಪಳ್ಳಿ ಚರ್ಚ್ ವೃತ್ತದಲ್ಲಿ ಅಪಘಾತ ತಡೆಗೆ 6 ಬ್ಯಾರಿಕೇಡ್ ಅಳವಡಿಕೆ

Date:

ಪೆರಂಪಳ್ಳಿ ಚರ್ಚ್ ವೃತ್ತದ ಬಳಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪವರ್ ಫ್ರೆಂಡ್ಸ್, ಪೆರಂಪಳ್ಳಿ ಸಂಘಟನೆಯ ನೇತೃತ್ವದಲ್ಲಿ ಆರು ಬ್ಯಾರಿಕೇಡ್‌ಗಳನ್ನು ಹಸ್ತಾಂತರಿಸುವ ಕಾರ್ಯಕ್ರಮ ನಡೆಯಿತು.

- Advertisement -

ಅನಿಶ್ ಜನರಲ್ ಸ್ಟೋರ್ಸ್, ಪೆರಂಪಳ್ಳಿ, ಯೂನಿಯನ್ ಬ್ಯಾಂಕ್, ಪೆರಂಪಳ್ಳಿ ಹಾಗೂ ಟ್ರಿನಿಟಿ ಸೆಂಟ್ರಲ್ ಸ್ಕೂಲ್, ಪೆರಂಪಳ್ಳಿ ಇವರ ದೇಣಿಗೆ ಹಾಗೂ ಸಹಕಾರದಿಂದ ಬ್ಯಾರಿಕೇಡ್‌ಗಳನ್ನು ಒದಗಿಸಲಾಯಿತು. ಪವರ್ ಫ್ರೆಂಡ್ಸ್ ಸಂಘಟನೆಯ ಅಧ್ಯಕ್ಷ ಅನಿಲ್ ಗೊನ್ಸಲ್ವಿಸ್ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು...

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ, ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಮಹಿಳೆಯೊಬ್ಬರು ತಮ್ಮ ಕುಟುಂಬದ ಕುಲಕಸುಬನ್ನೇ ಆದಾಯದ ಪ್ರಮುಖ ಮೂಲವನ್ನಾಗಿಸಿಕೊಂಡು ಸ್ವಾವಲಂಬಿ ಬದುಕಿನತ್ತ ಹೆಜ್ಜೆಯಿಟ್ಟಿದ್ದಾರೆ. ಸಂಜೀವಿನಿ...

ಬೆಳಕಿನ ಹಬ್ಬಕ್ಕೆ ಮಾಲಿನ್ಯದ ಕತ್ತಲು; ದೆಹಲಿ ಜನ ಪಾಠ...

ವರ್ಷಕ್ಕೊಮ್ಮೆ ಬರುವ ದೀಪಾವಳಿ ಹಬ್ಬವನ್ನು ಕೇವಲ ದೀಪಗಳ ಹಬ್ಬವೆಂದು ನೋಡದೆ, ಬೆಳಕಿನ ಸಂಭ್ರಮದ ಪ್ರತೀಕವಾಗಿಯೂ ಪರಿಗಣಿಸಲಾಗಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಹಬ್ಬ ಪ್ರತಿವರ್ಷವೂ 'ಉಸಿರುಗಟ್ಟಿಸುವ ನರಕಯಾತನೆ'ಯಾಗಿ ಬದಲಾಗುತ್ತಿರುವುದು ಕಟು ಸತ್ಯ....

NCPಯನ್ನು ಒಡೆದಿದ್ದ ಬಿಜೆಪಿಯೇ ಅದನ್ನು ಕೂಡಿಸಲು ಹೊರಟಿದೆ; ರಾಜಕೀಯ...

ವಿರೋಧ ಪಕ್ಷಗಳ ಸಾಲಿನಲ್ಲಿದ್ದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್ ನಡುವಿನ ಸೌಹಾರ್ದ ಸಂಬಂಧ ಮುಂದುವರಿದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವಾರ್ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ ಮತ್ತು ದೆಹಲಿಯಲ್ಲಿ...

ಕಾರ್ಯಕ್ರಮದಲ್ಲಿ ಫಾತಿಮಾ ಮಾತೆ ಚರ್ಚ್‌ನ ಧರ್ಮಗುರು ರೆಜಿನೋಲ್ಡ್ ಪಿಂಟೋ, ಮಣಿಪಾಲ ಪೊಲೀಸ್ ಠಾಣೆಯ ಮುಖ್ಯ ಪೊಲೀಸ್ ಅಧಿಕಾರಿ ಮಹೇಶ್ ಪ್ರಸಾದ್ ಹಾಗೂ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

1013526644

ಫಾತಿಮಾ ಮಾತೆ ಚರ್ಚ್‌ನ ಧರ್ಮಗುರು ರೆಜಿನೋಲ್ಡ್ ಪಿಂಟೋ ಅವರು ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು. ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪವರ್ ಫ್ರೆಂಡ್ಸ್ ಸಂಘಟನೆಯ ಸದಸ್ಯರನ್ನು ಅಭಿನಂದಿಸಿದ ಅವರು, ದೇವರ ಕೃಪೆ ಎಲ್ಲರ ಮೇಲಿರಲಿ ಎಂದು ಹಾರೈಸಿದರು.

ಮಣಿಪಾಲ ಪೊಲೀಸ್ ಠಾಣೆಯ ಮುಖ್ಯ ಪೊಲೀಸ್ ಅಧಿಕಾರಿ ಮಹೇಶ್ ಪ್ರಸಾದ್ ಮಾತನಾಡಿ, ಊರಿನ ಒಳಿತಿಗಾಗಿ ದಾನಿಗಳ ನೆರವಿನಿಂದ ಅಪಘಾತ ನಿಯಂತ್ರಣಕ್ಕೆ ಬ್ಯಾರಿಕೇಡ್‌ಗಳನ್ನು ಅಳವಡಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ. ಇದರಿಂದ ವಾಹನ ಸವಾರರು ವೇಗ ನಿಯಂತ್ರಿಸುವುದರ ಜೊತೆಗೆ ಸಾರ್ವಜನಿಕರು ರಸ್ತೆ ದಾಟುವಾಗ ಹೆಚ್ಚಿನ ಎಚ್ಚರಿಕೆ ವಹಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ರಮೇಶ್ ಕಾಂಚನ್ ಮಾತನಾಡಿ, ಪವರ್ ಫ್ರೆಂಡ್ಸ್ ತಂಡದ ಸದಸ್ಯರು ಹಾಗೂ ಸಹಕಾರ ನೀಡಿದ ದಾನಿಗಳನ್ನು ಅಭಿನಂದಿಸಿದರು. ಊರಿನಲ್ಲಿ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ಯುವಕರು ಒಗ್ಗೂಡಿ ಇಂತಹ ಕಾರ್ಯಕ್ಕೆ ಮುಂದಾಗಿರುವುದು ಇತರ ಊರುಗಳಿಗೂ ಮಾದರಿಯಾಗಿದೆ. ಬ್ಯಾರಿಕೇಡ್‌ಗಳ ಅಳವಡಿಕೆಯಿಂದ ವಾಹನಗಳ ವೇಗ ನಿಯಂತ್ರಿಸಲು ಸಾಧ್ಯವಾಗುವುದರ ಜೊತೆಗೆ ವೃತ್ತದ ಬಳಿ ರಸ್ತೆ ದಾಟುವ ಸಾರ್ವಜನಿಕರ ಸುರಕ್ಷತೆಗೂ ಅನುಕೂಲವಾಗಲಿದೆ. ಇಂತಹ ಸಮಾಜಮುಖಿ ಚಟುವಟಿಕೆಗಳಿಗೆ ನಮ್ಮೆಲ್ಲರ ಬೆಂಬಲವಿದೆ ಎಂದು ತಿಳಿಸಿ, ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಪೆರಂಪಳ್ಳಿ ರಿಕ್ಷಾ ಚಾಲಕ-ಮಾಲಕ ಸಂಘದ ಸದಸ್ಯರು, ಸ್ಥಳೀಯ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಊರಿನ ನಾಗರಿಕರು ಉಪಸ್ಥಿತರಿದ್ದರು.

ಕೃಷಿಕ ಸಂಘದ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಶ್ರೀಯಾನ್ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ಕರಾವಳಿ ಉತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಜಿಲ್ಲಾ ಕರಾವಳಿ ಉತ್ಸವವನ್ನು ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗುತ್ತಿದ್ದು, ಕರಾವಳಿ...

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು ಜೀವವಿತ್ತ ದೀಪಾವಳಿ!

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ,...

ಮಂಡ್ಯ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಹಾಗೂ ರೈತರ...

ದಕ್ಷಿಣ ಕನ್ನಡ | ಶತಮಾನದಷ್ಟು ಹಳೆಯ ಹಾಸ್ಟೆಲ್ ಕಟ್ಟಡ ನೆಲಸಮ

ಶತಮಾನ ಕಂಡ ಪಾರಂಪರಿಕ ಕಟ್ಟಡವೊಂದು ಇದೀಗ ಕಲ್ಲು-ಮಣ್ಣಿನ ರಾಶಿಯಾಗಿ ಮಾರ್ಪಟ್ಟಿದೆ. ನಗರದ...