ಉಡುಪಿ | ರೈತರು ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

Date:

ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ (ಪಿಎಂ ಕಿಸಾನ್‌) ಯೋಜನೆಯಡಿ ಕೇಂದ್ರ ಸರ್ಕಾರದಿಂದ ನೀಡಲಾಗುವ ಆರ್ಥಿಕ ನೆರವು ಪಡೆಯಲು ಫಲಾನುಭವಿಗಳು ಇ-ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಇ-ಕೆವೈಸಿ ಪೂರ್ಣಗೊಳಿಸದ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತಿನ ಆರ್ಥಿಕ ನೆರವು ಬಿಡುಗಡೆಯಾಗುವುದಿಲ್ಲ ಎಂದು ಕೃಷಿ ಇಲಾಖೆ ತಿಳಿಸಿದೆ.

- Advertisement -

ಉಡುಪಿ ಜಿಲ್ಲೆಯಲ್ಲಿ ಪಿಎಂ ಕಿಸಾನ್‌ ಯೋಜನೆಯಡಿ ಒಟ್ಟು 1,82,174 ಮಂದಿ ರೈತರು ನೋಂದಾಯಿಸಿಕೊಂಡಿದ್ದಾರೆ. ಇವರ ಪೈಕಿ ಉಡುಪಿ ತಾಲೂಕಿನಲ್ಲಿ 55,466, ಕುಂದಾಪುರ ತಾಲೂಕಿನಲ್ಲಿ 73,985 ಹಾಗೂ ಕಾರ್ಕಳ ತಾಲೂಕಿನಲ್ಲಿ 35,821 ಮಂದಿ ಸೇರಿದಂತೆ ಒಟ್ಟು 1,65,272 ರೈತ ಫಲಾನುಭವಿಗಳು ಇದುವರೆಗೆ ಯೋಜನೆಯಡಿ ಆರ್ಥಿಕ ನೆರವು ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಇ-ಕೆವೈಸಿ ಪೂರ್ಣಗೊಳಿಸುವಂತೆ ಜಿಲ್ಲೆಯ ರೈತ ಫಲಾನುಭವಿಗಳಿಗೆ ಕೃಷಿ ಇಲಾಖೆ ಈಗಾಗಲೇ ಮಾಹಿತಿ ಹಾಗೂ ಸೂಚನೆ ನೀಡಿದ್ದರೂ, ಇನ್ನೂ ಕೆಲವು ರೈತರು ಇ-ಕೆವೈಸಿ ಮಾಡಿಸಿಕೊಳ್ಳದೆ ಇರುವುದಾಗಿ ಗಮನಕ್ಕೆ ಬಂದಿದೆ.

ಇ-ಕೆವೈಸಿ ಮಾಡಿಸಿಕೊಳ್ಳಲು ಇದೇ ಕೊನೆಯ ಅವಕಾಶವಾಗಿದ್ದು, ಬಾಕಿ ಇರುವ ರೈತರು ಯಾವುದೇ ವಿಳಂಬ ಮಾಡದೆ ತಮ್ಮ ಆಧಾರ್‌ ಕಾರ್ಡ್‌ ಹಾಗೂ ಆಧಾರ್‌ಗೆ ಜೋಡಣೆಯಾಗಿರುವ ಮೊಬೈಲ್‌ ಸಂಖ್ಯೆಯೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್‌ ಕೇಂದ್ರ ಅಥವಾ ಸಾಮಾನ್ಯ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳುವಂತೆ ಸೂಚಿಸಲಾಗಿದೆ.

ನಿಗದಿತ ಅವಧಿಯೊಳಗೆ ಇ-ಕೆವೈಸಿ ಪೂರ್ಣಗೊಳಿಸದ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತಿನ ಆರ್ಥಿಕ ನೆರವು ದೊರೆಯದಿರುವ ಸಾಧ್ಯತೆ ಇದೆ. ಆದ್ದರಿಂದ ಅರ್ಹ ರೈತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕೂಡಲೇ ಇ-ಕೆವೈಸಿ ಪೂರ್ಣಗೊಳಿಸುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಕೋಮು ಸಂಘರ್ಷ; 14 ಜನರ ಬಂಧನ

ಕಾರಟಗಿ ತಾಲ್ಲೂಕಿನ ಹಾಲಸಮುದ್ರ ಗ್ರಾಮದಲ್ಲಿ ಗೌರಿ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆ ಸಂದರ್ಭದಲ್ಲಿ,...

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆಂಧ್ರಪ್ರದೇಶ ರಾಜ್ಯಪಾಲರಿಗೆ ಮನವಿ

ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ...

ಯಾದಗಿರಿ | ಬಂಡೋಳ್ಳಿಯಲ್ಲಿ ವಾಲ್ಮೀಕಿ ಶಾಖಾ ಮಠಕ್ಕೆ ಅಡಿಗಲ್ಲು; ಶಿಕ್ಷಣಕ್ಕೆ ₹25 ಕೋಟಿ ಅನುದಾನ

ಸುರಪುರ ಸಂವಿಧಾನ ಒದಗಿಸಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣ ಹಾಗೂ ಸರ್ಕಾರದ ವಿವಿಧ...