ಉಡುಪಿ | ಪ್ರಜಾಸೇವಾ ಆಂದೋಲನ ಸಭೆ; ಜನರ ಅಹವಾಲುಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ : ಜಿಲ್ಲಾಧಿಕಾರಿ

Date:

ಉಡುಪಿ ಜಿಲ್ಲೆಯ ಜನಸಾಮಾನ್ಯರ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ಸೆಪ್ಟೆಂಬರ್ 5ರಿಂದ ಪ್ರತೀ ಶನಿವಾರ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.

- Advertisement -

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಭೆಗಳನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ರಾಜ್ಯ ಸರ್ಕಾರದ ನಿರ್ಧಾರದಂತೆ ಸೆಪ್ಟೆಂಬರ್ 5ರಿಂದ 1ನೇ ಮತ್ತು 3ನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಸ್ಥಳೀಯ ಶಾಸಕರ ಉಪಸ್ಥಿತಿಯಲ್ಲಿ ತಾಲೂಕು ಮಟ್ಟದ ಸಭೆಗಳು ನಡೆಯಲಿವೆ. 2ನೇ ಮತ್ತು 4ನೇ ಶನಿವಾರ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗುವುದು ಎಂದರು.

ಸರ್ಕಾರದ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಮತ್ತು ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಪದೇ ಪದೇ ಅಲೆದಾಡುವುದನ್ನು ತಪ್ಪಿಸುವುದು ಈ ಸಭೆಗಳ ಪ್ರಮುಖ ಉದ್ದೇಶವಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಿಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಸಭೆ ನಡೆಯುವ ದಿನಾಂಕಕ್ಕೆ 15 ದಿನಗಳ ಮುಂಚಿತವಾಗಿ ಕ್ಷೇತ್ರ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ, ಸಾರ್ವಜನಿಕರ ಅಹವಾಲುಗಳಿಗೆ ಸಂಬಂಧಿಸಿದ ಪೂರ್ವ ಮುದ್ರಿತ ಅರ್ಜಿ ನಮೂನೆಗಳನ್ನು ವಿತರಿಸಬೇಕು ಎಂದು ಸೂಚಿಸಿದರು.

ಸಭೆ ನಡೆಯುವ ಸ್ಥಳಗಳಲ್ಲಿ ಗಣಕಯಂತ್ರ, ಇಂಟರ್‌ನೆಟ್, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ವಿವಿಧ ಇಲಾಖೆಗಳ ಪ್ರತ್ಯೇಕ ಕೌಂಟರ್‌ಗಳನ್ನು ಸ್ಥಾಪಿಸಿ ಸಾರ್ವಜನಿಕರಿಗೆ ಸ್ಥಳದಲ್ಲಿಯೇ ಸೇವೆ ಒದಗಿಸಬೇಕು. ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಸಭೆಯಲ್ಲಿ ಹಾಜರಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಸಭೆಯ ದಿನದಂದು ಸಂಬಂಧಪಟ್ಟ ಇಲಾಖೆಗಳು ಬೇರೆ ಯಾವುದೇ ಸಭೆಗಳನ್ನು ನಿಗದಿಪಡಿಸಬಾರದು ಎಂದು ನಿರ್ದೇಶನ ನೀಡಿದರು.

ಇದೇ ವೇಳೆ, ಜಿಲ್ಲೆಯ ಪ್ರಮುಖ ಇಲಾಖೆಗಳು ತಮ್ಮ ಸೇವೆ, ಸೌಲಭ್ಯ ಹಾಗೂ ಯೋಜನೆಗಳ ಕುರಿತು ಮಾಹಿತಿ ನೀಡಲು ವಸ್ತು ಪ್ರದರ್ಶನ ಮಳಿಗೆಗಳನ್ನು ಸ್ಥಾಪಿಸಬೇಕು. ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳ ವಿತರಣೆ ಇದ್ದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ತಾಲೂಕು ಮಟ್ಟದ ಸಭೆಗಳಲ್ಲಿ ವಿತರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...