ಉಡುಪಿ | ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡುವ ಗುರಿಯೊಂದಿಗೆ ಕಾರ್ಯಕರ್ತರು ಮುನ್ನಡೆಯಲಿ : ಪ್ರಸಾದ್ ರಾಜ್ ಕಾಂಚನ್

Date:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜನ್ಮದಿನಾಚರಣೆಯ ಅಂಗವಾಗಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ವಿವಿಧ ಸೇವಾ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

- Advertisement -
1011361825

ಬ್ರಹ್ಮಾವರದ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಸಂಘಟನೆಗಾಗಿ ದೀರ್ಘಕಾಲ ಸೇವೆ ಸಲ್ಲಿಸಿರುವ ಹಿರಿಯ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು. ಅಲ್ಲದೆ, ಸಾರ್ವಜನಿಕ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಸ್ವಚ್ಛತಾ ಕಾರ್ಮಿಕರಿಗೆ ಅಗತ್ಯ ವಸ್ತುಗಳ ಕಿಟ್‌ಗಳನ್ನು ವಿತರಿಸಲಾಯಿತು. ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಕಾರ್ಯಕ್ರಮವೂ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಕಾರ್ಯಕ್ರಮದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ಮಾತನಾಡಿ, ದೇಶವನ್ನು ಸಮರ್ಥವಾಗಿ ಮುನ್ನಡೆಸಲು ಸಮರ್ಥ ನಾಯಕತ್ವದ ಅಗತ್ಯವಿದೆ ಎಂದು ಹೇಳಿದರು. ದೇಶದ ಆಡಳಿತವನ್ನು ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿಗೆ ನೀಡುವ ಮೊದಲು ಉದ್ಯೋಗ, ವ್ಯಾಪಾರ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಇಂದಿನಷ್ಟು ಸಮಸ್ಯೆಗಳು ಇರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

1011361827

ಒಂದು ಕಾಲದಲ್ಲಿ ಬಡತನ ರೇಖೆಗಿಂತ ಕೆಳಗಿದ್ದ ಕೋಟ್ಯಂತರ ಜನರನ್ನು ಮೇಲಕ್ಕೆತ್ತಲು ಕಾಂಗ್ರೆಸ್ ಸರ್ಕಾರಗಳು ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದವು. ಆದರೆ, ಬಿಜೆಪಿ ಸರ್ಕಾರವು ದೇಶದ ಉದ್ಯಮಿಗಳ ಸುಮಾರು ₹19 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದ್ದು, ಇದು ಜನರ ಹಣವಾಗಿದ್ದು, ಉದ್ಯಮಿಗಳು ಮತ್ತು ಬಡವರ ನಡುವಿನ ಅಂತರವನ್ನು ಹೆಚ್ಚಿಸಿದೆ ಎಂದು ಆರೋಪಿಸಿದರು.

ಬಡವರ ಬಗ್ಗೆ ಕಾಳಜಿ ಇರುವ ಕಾರಣದಿಂದಲೇ ರಾಹುಲ್‌ ಗಾಂಧಿ ಜನ್ಮದಿನಾಚರಣೆಯ ಪ್ರಯುಕ್ತ ಇಂತಹ ಕಾರ್ಯಕ್ರಮವನ್ನು ಕಾಂಗ್ರೆಸ್ ಕೈಗೊಂಡಿದ್ದು, ಬಿಜೆಪಿಗೆ ಬಡವರ ಬಗ್ಗೆ ನಿಜವಾದ ಕಾಳಜಿ ಇಲ್ಲದ ಕಾರಣ ಇಂತಹ ಕಾರ್ಯಕ್ರಮಗಳನ್ನು ಅವರು ನಡೆಸುವುದಿಲ್ಲ ಎಂದು ಟೀಕಿಸಿದರು.

ಎಸ್‌ಐಆರ್ (SIR) ವಿಷಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಾಗೃತರಾಗಬೇಕು. ಪ್ರತಿ ಬೂತ್ ಮಟ್ಟದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿ, ಮತದಾನದ ಹಕ್ಕು ಕಳೆದುಕೊಳದಂತೆ ಬೂತ್‌ ಮಟ್ಟದಲ್ಲಿ ಕೆಲಸ ಮಾಡಬೇಕಿದೆ ಇದಕ್ಕೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಹೇಳಿದರು.

1011361824

ರಾಹುಲ್‌ ಗಾಂಧಿಯವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು 4,000 ಕಿ.ಮೀ. ದೂರದ ಭಾರತ್ ಜೋಡೋ ಯಾತ್ರೆ ನಡೆಸಿ ಜನರ ಸಮಸ್ಯೆಗಳು ಮತ್ತು ಸಂಕಷ್ಟಗಳನ್ನು ನೇರವಾಗಿ ಅರಿತುಕೊಂಡಿದ್ದಾರೆ. ಅವರನ್ನು ದೇಶದ ಪ್ರಧಾನಮಂತ್ರಿಯನ್ನಾಗಿ ಮಾಡುವ ಗುರಿಯೊಂದಿಗೆ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಮುನ್ನಡೆಯಬೇಕು ಎಂದು ಕರೆ ನೀಡಿದರು. ಇದೇ ವೇಳೆ ಜನ್ಮದಿನದ ಶುಭಾಶಯಗಳನ್ನು ಅರ್ಪಿಸಿದರು.

ಕಾಂಗ್ರೆಸ್‌ ಮುಖಂಡ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಮಾತನಾಡಿ, ಬಡವರಿಗೆ ನಿವೇಶನ, ಭೂಮಿ ಹಾಗೂ ವಿವಿಧ ಸೌಲಭ್ಯಗಳನ್ನು ನೀಡುವ ಮೂಲಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದ ಏಕೈಕ ಪಕ್ಷ ಕಾಂಗ್ರೆಸ್ ಆಗಿದೆ. ಕಾಂಗ್ರೆಸ್ ಸರ್ಕಾರ ಭಾಗ್ಯ ಯೋಜನೆಗಳನ್ನು ನೀಡಿದರೆ, ಕಾರ್ಕಳ ಶಾಸಕ ಸಿಮೆಂಟ್ ಭಾಗ್ಯ ನೀಡಿದ್ದಾರೆ ಎಂದು” ಲೇವಡಿ ಮಾಡಿದರು.

“ಬಿಜೆಪಿ ಹಿಂದು-ಮುಸ್ಲಿಮ್, ಹಿಜಾಬ್ ಮುಂತಾದ ವಿಚಾರಗಳನ್ನೇ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದೆ. ಆದರೆ ಬಡವರ ಅಭಿವೃದ್ಧಿಗಾಗಿ ಯಾವುದೇ ಜನಪರ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಕಾಂಗ್ರೆಸ್ ಪಕ್ಷ ಕೋಮುವಾದವನ್ನು ಬೆಂಬಲಿಸುವುದಿಲ್ಲ. ಭಾರತೀಯ ಜನತಾ ಪಕ್ಷವು ಸಮಾಜಕ್ಕೆ ಕೋಮುವಾದವನ್ನಷ್ಟೇ ನೀಡಿದ್ದು, ಅದನ್ನು ಎದುರಿಸುತ್ತಾ ಜನಪರ ಕೆಲಸಗಳಲ್ಲಿ ತೊಡಗಿಕೊಂಡಿರುವುದು ಕಾಂಗ್ರೆಸ್ ಪಕ್ಷ ಮಾತ್ರ” ಎಂದು ಅವರು ಹೇಳಿದರು.

1011361826

ಕಾಂಗ್ರೆಸ್ ಮುಖಂಡ ನಿತ್ಯಾನಂದ ಶೆಟ್ಟಿ ಹಾರಾಡಿ ಮಾತನಾಡಿ, ಕಾಂಗ್ರೆಸ್ ಪಕ್ಷದ ಇತಿಹಾಸ ಹಾಗೂ ರಾಹುಲ್‌ ಗಾಂಧಿಯವರೆಗೆ ಪಕ್ಷ ನಡೆದು ಬಂದ ಹಾದಿಯ ಕುರಿತು ವಿವರಿಸಿದರು. ಭಾರತದ ಅಭಿವೃದ್ಧಿಗೆ ನೆಹರು ಕುಟುಂಬ ನೀಡಿರುವ ಕೊಡುಗೆಗಳನ್ನು ಅವರು ಸ್ಮರಿಸಿದರು.

ಕಾರ್ಯಕ್ರಮವನ್ನುದ್ದೇಶಿಸಿ ಹಿರಿಯ ಕಾಂಗ್ರೆಸ್‌ ಮುಖಂಡರಾದ ಭುಜಂಗ ಶೆಟ್ಟಿ ಮಾತನಾಡಿದರು. ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಕರಾವಳಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಪ್ರಖ್ಯಾತ್ ಶೆಟ್ಟಿ, ವಿರೋನಿಕ ಕರ್ನೇಲಿಯೋ, ರೋಶನ್ ಶೆಟ್ಟಿ, ಗೋಪಿ ನಾಯಕ್ ಹಾಗೂ ಲವೀನಾ ಲೂಯಿಸ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ರಾಯಚೂರು | ಕೆವೈಸಿಗಾಗಿ ರಾತ್ರಿ ಸರತಿ ಸಾಲು: ಜನರ ಪರದಾಟ

ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಜನರು ಇಡೀ ರಾತ್ರಿ ನ್ಯಾಯಬೆಲೆ ಅಂಗಡಿ...

ಚಿಕ್ಕಮಗಳೂರು | ಮಲೆನಾಡು-ಕರಾವಳಿ ಕೃಷಿ ವಲಯವಾಗಿ ಘೋಷಿಸಬೇಕು; ಸುಧೀರ್ ಕುಮಾರ್ ಮುರೊಳ್ಳಿ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಉಡುಪಿ | ಅನುಚಿತ ವರ್ತನೆಗೆ ಸಂತ್ರಸ್ತರನ್ನು ಹೊಣೆ ಮಾಡಲಾಗದು : ಡಾ. ದಿವ್ಯಾ ರಾಣಿ

ಉಡುಪು, ಸ್ನೇಹ ಅಥವಾ ಸಾಮಾಜಿಕ ಜಾಲತಾಣಗಳ ಬಳಕೆಯಂತಹ ವೈಯಕ್ತಿಕ ಆಯ್ಕೆಗಳು ಯಾವುದೇ...