ಉಡುಪಿ | ಸರ್ವಿಸ್ ಬಸ್ ನಿಲ್ದಾಣದಲ್ಲಿ ಸಮಸ್ಯೆಗಳಿಗೆ ಉಡುಪಿ ಶಾಸಕರ ನಿರ್ಲಕ್ಷ್ಯತೆ ಕಾರಣ : ಪ್ರಸಾದ್ ರಾಜ್ ಕಾಂಚನ್

Date:

ಮಳೆಗಾಲದಲ್ಲಿ ನಗರದ ಸರ್ವಿಸ್ ಬಸ್ ಸ್ಟ್ಯಾಂಡ್ ನಲ್ಲಿ ನೀರು ಸೋರಿಕೆಯಾಗಿ ಪ್ರಯಾಣಿಕರು ಸಮಸ್ಯೆ ಅನುಭವಿಸುತ್ತಿರುವ ಕುರಿತು ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ಈ ಸಂದರ್ಭದಲ್ಲಿ ಪ್ರಯಾಣಿಕರು ಮಳೆಯ ಸಂದರ್ಭದಲ್ಲಿ ಕೂರಲು ಸಾಧ್ಯವಾಗದೆ ಸಮಸ್ಯೆ ಅನುಭವಿಸುತ್ತಿರುವ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆದರು ಮತ್ತು ಸರಕಾರದ ಹಂತದಲ್ಲಿ ಸಮಸ್ಯೆ ಪರಿಹಾರದ ನಿಟ್ಟಿನಲ್ಲಿ ತನ್ನಿಂದ ಸಾಧ್ಯವಾಗುವ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...
1011206310

ಈ ವೇಳೆ ಮಾತನಾಡಿದ ಅವರು ನಾನು ನಗರದ ಬಸ್ ಸ್ಟ್ಯಾಂಡಿಗೆ ಭೇಟಿ ನೀಡಿದ ವೇಳೆ ಇಲ್ಲಿನ ಅಂಗಡಿ ಮ್ಹಾಲಿಕರು ಸಾವರ್ಜನಿಕರು ಇಲ್ಲಿನ ಸಮಸ್ಯೆಗಳ ಕುರಿತು ತಮ್ಮ ದೂರುಗಳನ್ನು ನೀಡಿದ್ದಾರೆ. ಈಗಾಗಲೇ ನಗರಸಭೆಯ ಆಯುಕ್ತರನ್ನು ಸಂಪರ್ಕಿಸಿ ಇಲ್ಲಿನ ಸಮಸ್ಯೆಗಳನ್ನು ಕೂಡಲೇ ಪರಿಹಾರ ಮಾಡುವಂತೆ ಕೋರಿದ್ದೇನೆ. ಬಸ್ ನಿಲ್ದಾಣದಲ್ಲಿ ಬಸ್ಸುಗಳನ್ನು ಅನಗತ್ಯವಾಗಿ ಪಾರ್ಕ್ ಮಾಡಿ ಗ್ರಾಹಕರು ಅಂಗಡಿಗಳಿಗೆ ಬರದಂತೆ ತೊಂದರೆ ಉಂಟು ಮಾಡುತ್ತಿರುವ ಕುರಿತು ಕೂಡ ಅಂಗಡಿ ಮ್ಹಾಲಿಕರು ದೂರು ನೀಡಿದ್ದಾರೆ ಈ ಕುರಿತು ಕೂಡ ಪೋಲೀಸ್ ವರಿಷ್ಠಾಧಿಕಾರಿ ಅವರಿಗೆ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ್ಧೇವೆ.

ಬಸ್ ಸ್ಟ್ಯಾಂಡ್ ಅವ್ಯವಸ್ಥೆ ಕಂಡಾಗ ಉಡುಪಿ ಶಾಸಕರ ವೈಫಲ್ಯ ಎದ್ದುಕಾಣುತ್ತಿದೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ಅವರು ಸಮಸ್ಯೆ ಪರಿಹಾರದ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಸರಿಯಲ್ಲ. ಶಾಸಕರು ಇನ್ನಾದರೂ ಈ ಬಗ್ಗೆ ನಿಗಾವಹಿಸಿ ಸಮಸ್ಯೆ ಪರಿಹರಿಸುವಂತೆ ಅವರ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನವೆಂಬರ್ 26ರಿಂದ ರಾಜ್ಯಾದ್ಯಂತ ‘ಜನರ ದನಿ, ಸಂವಿಧಾನದ ದನಿ’ ಜಾಗೃತಿ ಅಭಿಯಾನ

ನವೆಂಬರ್ 26ರ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ, ದಲಿತ ಸಂಘರ್ಷ ಸಮಿತಿಗಳ...

ಉಡುಪಿ | ಮತದಾರರ ಹಕ್ಕು ರಕ್ಷಣೆಗೆ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ–ದೇಶ್ ಬಚಾವೋ’ ಆಂದೋಲನ

ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಹಕ್ಕುಗಳ ರಕ್ಷಣೆಗೆ ಅಖಿಲ ಭಾರತ...

ಯಾದಗಿರಿ | ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ದಮನದ ಆರೋಪ: ಎಐಬಿಎಸ್‌ಪಿ ತೀವ್ರ ಖಂಡನೆ

ಆಂಧ್ರಪ್ರದೇಶದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಲಾಗಿದೆ ಎಂಬ ಆರೋಪಗಳನ್ನು...

ಯಾದಗಿರಿ | ಮಲ್ಹಾರ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರ...