ಬಡವರು, ಮೀನುಗಾರರಿಗೆ ತ್ವರಿತ ನ್ಯಾಯಕ್ಕಾಗಿ ಕರಾವಳಿಯಲ್ಲಿ ಹೈಕೋರ್ಟ್ ಪೀಠ ಅಗತ್ಯ : ಪ್ರೇಮ್ ಪ್ರಸಾದ್ ಶೆಟ್ಟಿ

Date:

ಕರಾವಳಿ ಭಾಗದ ಜನರಿಗೆ ತ್ವರಿತ ಹಾಗೂ ಸುಲಭವಾಗಿ ನ್ಯಾಯ ದೊರೆಯುವ ನಿಟ್ಟಿನಲ್ಲಿ ಕರಾವಳಿ ಕರ್ನಾಟಕದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂದು ಒತ್ತಾಯಿಸಿ, ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ಬ್ರಹ್ಮಾವರ ತಾಲೂಕು ಘಟಕದ ನೇತೃತ್ವದಲ್ಲಿ ವಿವಿಧ ಸಂಘ-ಸಂಸ್ಥೆಗಳ ಹಕ್ಕೊತ್ತಾಯ ಸಭೆ ಶನಿವಾರ ಬ್ರಹ್ಮಾವರ ಬಂಟರ ಭವನದ ಮೀನಾಕ್ಷಿ ನಾರಾಯಣ ಶೆಟ್ಟಿ ಸಭಾಂಗಣದಲ್ಲಿ ನಡೆಯಿತು. ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ಉಡುಪಿ ಜಿಲ್ಲೆ ಹಾಗೂ ಯು-ಆಕ್ಟ್ ಸಹಯೋಗದಲ್ಲಿ ಸಭೆ ಆಯೋಜಿಸಲಾಗಿತ್ತು.

- Advertisement -

ಕರಾವಳಿ ಕರ್ನಾಟಕ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕ ಹಾಗೂ ಯು-ಆಕ್ಟ್ ಸಂಸ್ಥಾಪಕ, ನ್ಯಾಯವಾದಿ ಪ್ರೇಮ್ ಪ್ರಸಾದ್ ಶೆಟ್ಟಿ ಮಾತನಾಡಿ, ಕಳೆದ ಎರಡು ದಶಕಗಳಿಂದ ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ಹೋರಾಟ ನಡೆಸಲಾಗುತ್ತಿದೆ. ಸಾಮಾನ್ಯ ಜನರಿಗೆ ನ್ಯಾಯದಾನದ ಹಕ್ಕು ಕ್ಷಿಪ್ರವಾಗಿ ಹಾಗೂ ಸುಲಲಿತವಾಗಿ ದೊರೆಯಬೇಕು ಎಂಬುದು ಈ ಬೇಡಿಕೆಯ ಮೂಲ ಆಶಯವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಭೂ ವ್ಯಾಜ್ಯಗಳು, ಶೈಕ್ಷಣಿಕ ಹಾಗೂ ಆರ್ಥಿಕ ಸಮಸ್ಯೆಗಳು, ಮೀನುಗಾರಿಕೆ, ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ಮತ್ತು ಕೌಟುಂಬಿಕ ವಿವಾದಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕರಾವಳಿಯ ಲಕ್ಷಾಂತರ ಜನರು ಮೇಲ್ಮನವಿ ಸಲ್ಲಿಸಲು ಬೆಂಗಳೂರಿನ ಹೈಕೋರ್ಟ್ ಪ್ರಧಾನ ಪೀಠವನ್ನು ಅವಲಂಬಿಸಬೇಕಾಗಿದೆ. 400ರಿಂದ 500 ಕಿ.ಮೀ.ಗೂ ಅಧಿಕ ದೂರ ಪ್ರಯಾಣಿಸುವುದು ಕಕ್ಷಿದಾರರಿಗೆ ಆರ್ಥಿಕ ಹೊರೆಯಾಗುವುದರ ಜತೆಗೆ ದೈಹಿಕ ಹಾಗೂ ಮಾನಸಿಕ ಒತ್ತಡವನ್ನೂ ಉಂಟುಮಾಡುತ್ತದೆ ಎಂದು ಹೇಳಿದರು.

ಜಸ್ಟಿಸ್ ಜಸ್ವಂತ್ ಸಿಂಗ್ ಸಮಿತಿಯ ವರದಿಯ ಹಿನ್ನೆಲೆಯಲ್ಲಿ ರಾಜ್ಯದ ಧಾರವಾಡ ಮತ್ತು ಕಲಬುರಗಿಯಲ್ಲಿ ಹೈಕೋರ್ಟ್ ಪೀಠಗಳು ಸ್ಥಾಪನೆಯಾಗಿವೆ. ಅದೇ ಮಾದರಿಯಲ್ಲಿ ಕರಾವಳಿಯ ಜನರ ನ್ಯಾಯಾಂಗ ಅಗತ್ಯಗಳನ್ನೂ ಪರಿಗಣಿಸಬೇಕು. ಹೈಕೋರ್ಟ್ ಹಾಗೂ ಕೆಳ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಒತ್ತಡವನ್ನು ಗಮನದಲ್ಲಿಟ್ಟುಕೊಂಡು, ಬಡವರು, ಮೀನುಗಾರರು, ಮಧ್ಯಮ ವರ್ಗದವರು ಮತ್ತು ಹಿಂದುಳಿದ ಸಮುದಾಯಗಳಿಗೆ ಅನುಕೂಲವಾಗುವಂತೆ ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್ಟಿನ ಹೋರಾಟ ಅಗತ್ಯವಾಗಿದೆ ಎಂದು ಪ್ರತಿಪಾದಿಸಿದರು.

WhatsApp Image 2026 10 18 at 9.56.04 AM

ದಲಿತ ಸಂಘರ್ಷ ಸಮಿತಿ ಮುಖಂಡ ಶೇಖರ ಹಾವಂಜೆ ಮಾತನಾಡಿ, ಕರಾವಳಿ ಭಾಗದಿಂದ ಸರಕಾರಕ್ಕೆ ತೆರಿಗೆ ಆದಾಯ ದೊರೆಯುವಂತೆಯೇ ಇಲ್ಲಿನ ಜನರ ನ್ಯಾಯಯುತ ಬೇಡಿಕೆಗಳಿಗೂ ಸೂಕ್ತ ಸ್ಪಂದನೆ ಸಿಗಬೇಕು. ಭೂಮಿ ಮಂಜೂರಾತಿ, ಒತ್ತುವರಿ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳಿಗೆ ನ್ಯಾಯಾಂಗದ ಮೂಲಕ ಪರಿಹಾರ ಕಂಡುಕೊಳ್ಳಲು ಕರಾವಳಿಯಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು. ಅದರಲ್ಲೂ ಬ್ರಹ್ಮಾವರದಲ್ಲಿ ಪೀಠ ಸ್ಥಾಪನೆಯಾದರೆ ಉತ್ತಮ ಎಂದು ಅಭಿಪ್ರಾಯಪಟ್ಟರು.

ರಾಜಕೀಯ ಮುಖಂಡ ಪ್ರಸಾದ್‌ರಾಜ್ ಕಾಂಚನ್ ಮಾತನಾಡಿ, ಕರಾವಳಿ ಭಾಗದ ವಿವಿಧ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸಲು ಹೈಕೋರ್ಟ್ ಪೀಠದ ಅಗತ್ಯವಿದೆ. ಇದರಿಂದ ನ್ಯಾಯಾಂಗ ವ್ಯವಸ್ಥೆ ಮತ್ತಷ್ಟು ಬಲಗೊಳ್ಳಲಿದೆ. ಈ ನಿಟ್ಟಿನಲ್ಲಿ ಈಗಾಗಲೇ ಮೂವರು ನ್ಯಾಯಾಧೀಶರ ಸಮಿತಿ ರಚನೆಯಾಗಿರುವುದು ಹೋರಾಟಗಾರರಲ್ಲಿ ಆಶಾಭಾವನೆ ಮೂಡಿಸಿದೆ. ಅಗತ್ಯಬಿದ್ದರೆ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಬೇಡಿಕೆಯನ್ನು ಮಂಡಿಸಲಾಗುವುದು ಎಂದರು.

ಸಾಮಾಜಿಕ ಹೋರಾಟಗಾರ ಜ್ಞಾನವಸಂತ ಶೆಟ್ಟಿ, ನಮ್ಮ ಭೂಮಿಯ ರಾಮಾಂಜಿ, ನ್ಯಾಯವಾದಿಗಳಾದ ಕಾಡೂರು ಪ್ರವೀಣ ಶೆಟ್ಟಿ, ಅಖಿಲ್ ಹೆಗ್ಡೆ ಹಾಗೂ ಆರ್‌ಟಿಐ ಕಾರ್ಯಕರ್ತ ಸದಾಶಿವ ಶೆಟ್ಟಿ ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಭುಜಂಗ ಶೆಟ್ಟಿ, ಶೇಡಿಕೊಡ್ಲು ವಿಠಲ ಶೆಟ್ಟಿ, ಬಾರ್ಕೂರು ಶಾಂತಾರಾಮ ಶೆಟ್ಟಿ, ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಮಾಜಿ ಅಧ್ಯಕ್ಷ ಚಂದ್ರಶೇಖರ ಹೆಗ್ಡೆ, ಸಮತಾ ಸೈನಿಕ ದಳದ ಮಹಿಳಾ ಅಧ್ಯಕ್ಷೆ ಜ್ಯೋತಿ ಶಿರಿಯಾರ, ಹಿರಿಯ ನಾಗರಿಕರ ವೇದಿಕೆಯ ಮಾಜಿ ಅಧ್ಯಕ್ಷ ಉದಯಕುಮಾರ ಶೆಟ್ಟಿ, ಕಾರ್ಯದರ್ಶಿ ಸಂಕಯ್ಯ ಶೆಟ್ಟಿ, ಲಯನ್ಸ್ ಅಧ್ಯಕ್ಷ ಸುದೇಶ್ ಹೆಗ್ಡೆ, ಮಾಜಿ ಅಧ್ಯಕ್ಷ ಜಿ. ಬಾಲಕೃಷ್ಣ ಶೆಟ್ಟಿ, ರೋಟರಿ ಅಧ್ಯಕ್ಷ ಪ್ರಮೋದ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಮಹೇಶ್ ತಡೆಕಲ್ಲು, ವಕೀಲರ ಸಂಘದ ಸದಸ್ಯರು, ವಿವಿಧ ಸಂಘಟನೆಗಳ ಪ್ರಮುಖರು, ಹಿರಿಯ ನಾಗರಿಕರ ವೇದಿಕೆಯ ಸದಸ್ಯರು ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಾಮಾಜಿಕ ಹೋರಾಟಗಾರ ಆಲ್ವಿನ್ ಅಂದ್ರಾದೆ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...