ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಅ.17ರಂದು ಬ್ರಹ್ಮಾವರದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

Date:

ಉಡುಪಿ ಜಿಲ್ಲೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಗೆ ಬ್ರಹ್ಮಾವರ ತಾಲೂಕು ಹೋರಾಟ ಸಮಿತಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರ ಬೆಂಬಲ ಕ್ರೋಡೀಕರಿಸಲು ಅಕ್ಟೋಬರ್ 17ರಂದು ಬ್ರಹ್ಮಾವರದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ ಆಯೋಜಿಸಲಾಗಿದೆ.

- Advertisement -

ಈ ಕುರಿತು ಉಡುಪಿಯಲ್ಲಿ ಇಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಉಡುಪಿ ಜಿಲ್ಲಾ ಸಂಚಾಲಕ, ವಕೀಲ ಪ್ರೇಮ್ ಪ್ರಸಾದ್ ಶೆಟ್ಟಿ, ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾದರೆ ಕರಾವಳಿ ಭಾಗದ ಜನರಿಗೆ ನ್ಯಾಯ ಪಡೆಯುವ ಪ್ರಕ್ರಿಯೆಯಲ್ಲಿ ಮಹತ್ವದ ಅನುಕೂಲವಾಗಲಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಪ್ರಸ್ತುತ ನ್ಯಾಯಕ್ಕಾಗಿ ಬೆಂಗಳೂರಿಗೆ ಪ್ರಯಾಣಿಸಬೇಕಾಗಿರುವ ಸಾವಿರಾರು ಕಕ್ಷಿದಾರರಿಗೆ ಉಡುಪಿಯಲ್ಲೇ ಹೈಕೋರ್ಟ್ ಪೀಠದ ಸೌಲಭ್ಯ ದೊರೆತರೆ ಸಮಯ, ಶ್ರಮ ಹಾಗೂ ಹಣದ ಉಳಿತಾಯವಾಗಲಿದೆ. ವಿಶೇಷವಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಇದು ದೊಡ್ಡ ನೆರವಾಗಲಿದೆ. ಪ್ರಾದೇಶಿಕವಾಗಿ ಹೈಕೋರ್ಟ್ ಪೀಠ ಕಾರ್ಯನಿರ್ವಹಿಸುವುದರಿಂದ ಸ್ಥಳೀಯ ಆಡಳಿತ ವ್ಯವಸ್ಥೆಯೂ ಹೆಚ್ಚು ಜವಾಬ್ದಾರಿಯುತವಾಗಿ ಹಾಗೂ ಚುರುಕಾಗಿ ಕಾರ್ಯನಿರ್ವಹಿಸಲು ಸಹಕಾರಿಯಾಗಲಿದೆ ಎಂದರು.

1013162328

ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯು ಯಾವುದೇ ರಾಜಕೀಯ ಪಕ್ಷದ ಪರವಾಗಿರದೆ, ಸಾರ್ವಜನಿಕ ಹಿತಾಸಕ್ತಿಯನ್ನು ಮಾತ್ರ ಮುಂದಿಟ್ಟುಕೊಂಡು ವಿವಿಧ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರನ್ನು ಒಗ್ಗೂಡಿಸಿ ಪಕ್ಷಾತೀತವಾಗಿ ಹೋರಾಟ ನಡೆಸುತ್ತಿದೆ. ಜಿಲ್ಲೆಯ ಹಾಗೂ ಕರಾವಳಿ ಭಾಗದ ದೀರ್ಘಕಾಲೀನ ಹಿತದೃಷ್ಟಿಯಿಂದ ಎಲ್ಲ ರಾಜಕೀಯ ಪಕ್ಷಗಳು, ಸಂಘಟನೆಗಳು, ವಿವಿಧ ಕ್ಷೇತ್ರಗಳ ಪ್ರಮುಖರು ಹಾಗೂ ಸಾರ್ವಜನಿಕರು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಪರಿಶೀಲಿಸುವ ಉದ್ದೇಶದಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸೆಪ್ಟೆಂಬರ್ 29, 2026ರಂದು ನ್ಯಾಯಮೂರ್ತಿ ಅನು ಶಿವರಾಮನ್, ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಹಾಗೂ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರನ್ನು ಒಳಗೊಂಡ ತ್ರಿಸದಸ್ಯ ನ್ಯಾಯಾಧೀಶರ ಸಮಿತಿಯನ್ನು ರಚಿಸಿರುವುದನ್ನು ಹೋರಾಟ ಸಮಿತಿ ಸ್ವಾಗತಿಸಿದೆ.

ಉಡುಪಿ ಜಿಲ್ಲೆಯು ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ನಡುವೆ ಕೇಂದ್ರ ಸ್ಥಾನದಲ್ಲಿದ್ದು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವು ತಾಲೂಕುಗಳಿಗೂ ಸಮೀಪದಲ್ಲಿದೆ. ಹೀಗಾಗಿ ಕರಾವಳಿ ಭಾಗದ ಜನರಿಗೆ ಅನುಕೂಲವಾಗುವಂತೆ ಸಂಚಾರಿ ಅಥವಾ ಶಾಶ್ವತ ಹೈಕೋರ್ಟ್ ಪೀಠವನ್ನು ಉಡುಪಿ ಜಿಲ್ಲೆಯಲ್ಲೇ ಸ್ಥಾಪಿಸಬೇಕು ಎಂದು ಸಮಿತಿ ಆಗ್ರಹಿಸಿದೆ.

ಈ ಬೇಡಿಕೆಗೆ ಸಾರ್ವಜನಿಕ ಬೆಂಬಲ ಹೆಚ್ಚಿಸುವುದು ಹಾಗೂ ಮುಂದಿನ ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸುವ ಉದ್ದೇಶದಿಂದ ಅಕ್ಟೋಬರ್ 17ರ ಶನಿವಾರ ಬೆಳಿಗ್ಗೆ 10.30ಕ್ಕೆ ಬ್ರಹ್ಮಾವರದ ಬಂಟರ ಭವನ ಸಭಾಂಗಣದಲ್ಲಿ ಹಕ್ಕೊತ್ತಾಯ ಸಭೆ ನಡೆಯಲಿದೆ. ವಕೀಲರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾಮಾಜಿಕ ಕಾರ್ಯಕರ್ತರು, ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಪ್ರೇಮ್ ಪ್ರಸಾದ್ ಶೆಟ್ಟಿ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ. ಭುಜಂಗ ಶೆಟ್ಟಿ, ಬ್ರಹ್ಮಾವರ ವಕೀಲರ ಸಂಘದ ಅಧ್ಯಕ್ಷ ಕಾಡೂರು ಪ್ರವೀಣ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಶೇಖರ್ ಹಾವಂಜೆ, ರೋಟೇರಿಯನ್ ಆಲ್ವಿನ್ ಅಂದ್ರಾದೆ ಹಾಗೂ ಸಾಮಾಜಿಕ ಕಾರ್ಯಕರ್ತ ಮಹೇಶ್ ತಡೆಕಲ್ಲು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪೋತ್ನಾಳ ಹಳ್ಳಕ್ಕೆ ನೀರು ಹರಿಸಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ: ಅಮೀನ್ ಪಾಷಾ ದಿದ್ದಗಿ

ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಜನರು ಹಾಗೂ ಜಾನುವಾರುಗಳಿಗೆ...

ರಾಯಚೂರು | ಕಸದ ರಾಶಿಯಲ್ಲಿ ಆರೋಗ್ಯ ಇಲಾಖೆಯ ಔಷಧಿಗಳು ಪತ್ತೆ

ನಗರದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಕೋಟೆಯ ಕಂದಕದ ಬಳಿ ಆರೋಗ್ಯ ಇಲಾಖೆಗೆ...

ಹಾವೇರಿ | ರೈತರ ಪ್ರತಿಭಟನೆ ಅಂತ್ಯ: ಬಂದ್ ಆಗಿದ್ದ ವಾಹನಗಳ ಸಂಚಾರ ಪುನಃ ಆರಂಭ

ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಬಂಕಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ...

ಗದಗ | ಚುನಾವಣೆ ಕರ್ತವ್ಯ ಜವಾಬ್ದಾರಿಯಿಂದ ನಿರ್ವಹಿಸಿ : ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ

"ಕರ್ನಾಟಕ ಪಶ್ಚಿಮ ಪಧವಿದರ ದೈವಾರ್ಷಿಕ ಚುನಾವಣಾ2026 ರ ಪ್ರಕ್ರಿಯೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ,...