ಉಡುಪಿಯಲ್ಲಿ ಅ.25ರಂದು ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ 5ನೇ ಶಾಖೆ ಉದ್ಘಾಟನೆ

Date:

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಐದನೇ ಶಾಖೆಯು ಅಕ್ಟೋಬರ್ 25ರಂದು ಉಡುಪಿಯ ತಾಲೂಕು ಕಚೇರಿ ಸಮೀಪದ ಸನಿಲ್ ಪ್ಲಾಜಾ ಕಟ್ಟಡದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಸೊಸೈಟಿಯ ಅಧ್ಯಕ್ಷ ಎಚ್. ವಸಂತ್ ಬೆರ್ನಾರ್ಡ್ ತಿಳಿಸಿದ್ದಾರೆ.

- Advertisement -

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರಿ ಕ್ಷೇತ್ರದ ದಿಗ್ಗಜರಾದ ದಿವಂಗತ ಎಚ್. ನಾರಾಯಣ ಸನಿಲ್ ಹಾಗೂ ದಿವಂಗತ ಪಂಜದ ಗುತ್ತು ಶಾಂತರಾಮ ಶೆಟ್ಟಿ ಅವರ ಪ್ರೇರಣೆಯಿಂದ 2021ರಲ್ಲಿ ಆರಂಭಗೊಂಡ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಅಲ್ಪಾವಧಿಯಲ್ಲೇ ಗಮನಾರ್ಹ ಪ್ರಗತಿ ಸಾಧಿಸಿದೆ. ಪ್ರಸ್ತುತ 45 ಕೋಟಿ ರೂ. ಠೇವಣಿ, 484.78 ಕೋಟಿ ರೂ. ವಹಿವಾಟು ಹಾಗೂ 3,843 ಸದಸ್ಯರನ್ನು ಹೊಂದಿರುವ ಸಂಸ್ಥೆ ವಾರ್ಷಿಕ 54 ಲಕ್ಷ ರೂ. ಲಾಭ ಗಳಿಸುತ್ತಿದೆ. ನಾಲ್ಕು ಶಾಖೆಗಳನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಸಂಸ್ಥೆಯು ಇದೀಗ ಉಡುಪಿಯಲ್ಲಿ ಐದನೇ ಶಾಖೆಯನ್ನು ಆರಂಭಿಸುವ ಮೂಲಕ ತನ್ನ ಸೇವಾ ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಗಣ್ಯರಿಂದ ವಿವಿಧ ವಿಭಾಗಗಳ ಉದ್ಘಾಟನೆ

ಉಡುಪಿಯ ನೂತನ ಶಾಖೆಯನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಉದ್ಘಾಟಿಸಲಿದ್ದಾರೆ. ಮುಲ್ಕಿ ಸೀಮೆಯ ಅರಸ ಎಂ. ದುಗ್ಗಣ್ಣ ಸಾವಂತ್ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ಸರ್ಕಾರದ ಮಾಜಿ ಸಚಿವ ಕೆ. ಅಭಯಚಂದ್ರ ಅವರು ದೀಪ ಪ್ರಜ್ವಲನೆ ನೆರವೇರಿಸಲಿದ್ದಾರೆ.

ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ ಅವರು ಭದ್ರತಾ ಕೊಠಡಿಯನ್ನು ಉದ್ಘಾಟಿಸಲಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ. ರೈ ಅವರು ಕಂಪ್ಯೂಟರ್ ವ್ಯವಸ್ಥೆಗೆ ಚಾಲನೆ ನೀಡಲಿದ್ದಾರೆ. ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಡಾ. ಐಕಳಬಾವ ದೇವಿಪ್ರಸಾದ್ ಶೆಟ್ಟಿ ಅವರು ಪ್ರಿಯದರ್ಶಿನಿ ಸ್ವಸಹಾಯ ಗುಂಪಿಗೆ ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆರ್., ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಬಡಗಬೆಟ್ಟು ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಶ್ರೀ ಸರಸ್ವತಿ ಕೋ-ಆಪರೇಟಿವ್ ಸೊಸೈಟಿ ಪಡುಕುತ್ಯಾರ್‌ನ ಅಧ್ಯಕ್ಷ ಬಿ. ಸೂರಕುಮಾರ್, ಬೊಂಬಾರ್ಡ್ ಮೆಮೋರಿಯಲ್ ಆಸ್ಪತ್ರೆಯ ನಿರ್ದೇಶಕ ಡಾ. ಸುಶೀಲ್ ಜತ್ತನ್ನ, ಹೈಟೆಕ್ ಮೆಡಿಕೇರ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಟಿ.ಎಸ್. ರಾವ್, ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಶ್ರೀಧರ್ ದೇವಾಡಿಗ, ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿಯ ಹೋಮಿಯೋಪಥಿಕ್ ವೈದ್ಯ ಡಾ. ಬೆರಿಲ್ ಎ. ಬೆರ್ನಾರ್ಡ್ ಹಾಗೂ ಕಟ್ಟಡದ ಮಾಲೀಕ ಶಂಭು ಎ. ಸನಿಲ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

1013271375

ಸಹಕಾರಿ ಬ್ಯಾಂಕಿಂಗ್ ಸೇವೆಯಲ್ಲಿ ಗುಣಮಟ್ಟಕ್ಕೆ ಆದ್ಯತೆ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಂಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. 2025-26ನೇ ಸಾಲಿನಲ್ಲಿ ಶೇ.97ರಷ್ಟು ಸಾಲ ವಸೂಲಾತಿ ಸಾಧಿಸಿರುವ ಸೊಸೈಟಿಯು ಲೆಕ್ಕಪರಿಶೋಧನೆಯಲ್ಲಿ ‘ಎ’ ಶ್ರೇಣಿಯನ್ನು ಪಡೆದಿದೆ.

ಗ್ರಾಹಕರಿಗೆ ಗುಣಮಟ್ಟದ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಧಾನ ಕಚೇರಿಯಲ್ಲಿ ಚಿನ್ನಾಭರಣಗಳ ನೈಜತೆ ಮತ್ತು ಪರಿಶುದ್ಧತೆಯನ್ನು ಪರಿಶೀಲಿಸುವ ಗೋಲ್ಡ್ ಪ್ಯೂರಿಟಿ ಟೆಸ್ಟಿಂಗ್ ಯಂತ್ರವನ್ನು ಅಳವಡಿಸಲಾಗಿದೆ. ಸಂಸ್ಥೆಯ ನಾಲ್ಕೂ ಶಾಖೆಗಳಲ್ಲಿ ಇ-ಮುದ್ರಾಂಕ ವ್ಯವಸ್ಥೆ, ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯ ಹಾಗೂ ಹವಾನಿಯಂತ್ರಿತ ಬ್ಯಾಂಕಿಂಗ್ ವಿಭಾಗಗಳಿವೆ. ಪ್ರಸ್ತುತ 27 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, 15 ನಿರ್ದೇಶಕರ ತಂಡ ಸಂಸ್ಥೆಯ ಆಡಳಿತವನ್ನು ನಿರ್ವಹಿಸುತ್ತಿದೆ.

ಸತತ ಪ್ರಶಸ್ತಿಗಳ ಗೌರವ

ಸಂಸ್ಥೆಯ ಸಾಧನೆಗೆ ಮನ್ನಣೆಯಾಗಿ 2023-24, 2024-25 ಹಾಗೂ 2025-26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ‘ವಿಶಿಷ್ಟ ಸಾಧನ ಪ್ರಶಸ್ತಿ’ ಲಭಿಸಿದೆ. ಅಲ್ಲದೆ, 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ 2025ರಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ‘ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ.

ಸಹಕಾರಿ ಕ್ಷೇತ್ರದಲ್ಲಿ ವಿಶ್ವಾಸಾರ್ಹತೆ, ಪಾರದರ್ಶಕತೆ ಮತ್ತು ಉತ್ತಮ ಗ್ರಾಹಕ ಸೇವೆಗೆ ಆದ್ಯತೆ ನೀಡುವ ಮೂಲಕ ಸಂಸ್ಥೆ ತನ್ನ ಬೆಳವಣಿಗೆಯ ಪಯಣವನ್ನು ಮುಂದುವರಿಸುತ್ತಿದೆ. ಉಡುಪಿಯಲ್ಲಿ ನೂತನ ಶಾಖೆಯ ಆರಂಭವು ಜಿಲ್ಲೆಯ ಗ್ರಾಹಕರಿಗೆ ಮತ್ತಷ್ಟು ಸಹಕಾರಿ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುವ ನಿರೀಕ್ಷೆ ಮೂಡಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಸೊಸೈಟಿಯ ಉಪಾಧ್ಯಕ್ಷ ವಿಜಯ ಕುಮಾರ್ ಸನಿಲ್, ನಿರ್ದೇಶಕರಾದ ಉಮಾನಾಥ್ ಜೆ. ಶೆಟ್ಟಿಗಾರ್, ಧನಂಜಯ ಮಟ್ಟು, ಗಣೇಶ್ ಪ್ರಸಾದ್ ದೇವಾಡಿಗ, ಅನಿಲ್ ಪೂಜಾರಿ ಸಸಿಹಿತ್ತು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಪೂಜಾರಿ ಹಾಗೂ ಉಡುಪಿ ಶಾಖೆಯ ಪ್ರಬಂಧಕಿ ನಿಶಾ ಸುಹೈಲ್ ಡೇನಿಯಲ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಗಾಂಜಾ ಸೇವನೆ ಆರೋಪ: 19 ವರ್ಷದ ಯುವಕನ ಬಂಧನ

ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯ ಪಾಕೀಜಾ ಸಮೀಪದ ಸಾರ್ವಜನಿಕ ಸ್ಥಳದಲ್ಲಿ...

ಕಲಬುರಗಿ | 20 ಪ್ರಕರಣಗಳ ಆರೋಪಿಗೆ ಗುಂಡಾ ಕಾಯ್ದೆ ಅಡಿ ಬಂಧನ

ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ಹಲ್ಲೆ ಸೇರಿದಂತೆ...

ವಿಜಯಪುರ |ಆಲಮಟ್ಟಿಯಿಂದ ನೀರು ಹರಿಸುವುದನ್ನು ನಿಲ್ಲಿಸಿ; ಇಲ್ಲದಿದ್ದರೆ ಜಲಾಶಯಕ್ಕೆ ಇಳಿದು ಪ್ರತಿಭಟನೆ:ಅರವಿಂದ ಕುಲಕರ್ಣಿ ಎಚ್ಚರಿಕೆ

ಆಲಮಟ್ಟಿ ಲಾಲಬಹದ್ದೂರ ಶಾಸ್ತ್ರಿ ಜಲಾಶಯದಿಂದ ಕೆಪಿಸಿಎಲ್ ಮೂಲಕ ನಾರಾಯಣಪುರ ಜಲಾಶಯಕ್ಕೆ ಪ್ರತಿದಿನ...

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...