ಉಡುಪಿ | ನಂಬಿಕೆ, ವಿಶ್ವಾಸದಿಂದ ಸಹಕಾರ ರಂಗ ಸುದೃಢ: ಕಾರ್ತಿಕ್ ಕುಮಾರ್

Date:

ರಾಷ್ಟ್ರೀಕೃತ ಬ್ಯಾಂಕುಗಳೊಂದಿಗೆ ಸ್ಪರ್ಧೆ ನೀಡುತ್ತಿರುವ ಸಹಕಾರಿ ರಂಗವು ಜನರ ನಂಬಿಕೆ ಮತ್ತು ವಿಶ್ವಾಸವನ್ನು ಗಳಿಸುವ ಮೂಲಕ ಸುದೃಢವಾಗಿ ಮುನ್ನಡೆಯುತ್ತಿದೆ. ಸ್ಥಳೀಯ ಭಾಷೆಯಲ್ಲಿನ ಸಂವಹನ ಹಾಗೂ ಸಿಬ್ಬಂದಿಯ ಆತ್ಮೀಯ ಸೇವೆ ಸಹಕಾರ ಕ್ಷೇತ್ರದ ಬೆಳವಣಿಗೆಗೆ ಪ್ರಮುಖ ಪೂರಕವಾಗಿದೆ ಎಂದು ನಾದಶ್ರೀ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಉಡುಪಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾರ್ತಿಕ್ ಕುಮಾರ್ ಅಭಿಪ್ರಾಯಪಟ್ಟರು.

- Advertisement -

ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯು ಇದೇ ಹಾದಿಯಲ್ಲಿ ಮುನ್ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಸಾಧಿಸಲಿ ಎಂದು ಅವರು ಆಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಿಪಿಡಿಪಿ ಕಾಯ್ದೆ: ನಾಗರಿಕರ ಖಾಸಗಿತನದ ರಕ್ಷಣೆಯೋ, ಪತ್ರಿಕಾ ಸ್ವಾತಂತ್ರ್ಯದ...

ಡಿಪಿಡಿಪಿ ಕಾಯ್ದೆ ನಾಗರಿಕರ ಗೌಪ್ಯತೆಯನ್ನು ಕಾಪಾಡುವ ಭರವಸೆ ನೀಡುತ್ತಿದೆ. ಆದರೆ, ಇದೇ ಕಾಯ್ದೆಯು ಪತ್ರಕರ್ತರ ಮೂಲಭೂತ ಹಕ್ಕು ಮತ್ತು ತನಿಖಾ ಪತ್ರಿಕೋದ್ಯಮದ ಮೇಲೆ ಕರಿನೆರಳು ಬೀರಲಿದೆಯೇ? ಆರ್‌ಟಿಐ ದುರ್ಬಲಗೊಳ್ಳುತ್ತಿದೆಯೇ? ಒಂದೆಡೆ ವ್ಯಕ್ತಿಯ ಖಾಸಗಿತನದ...

ಉಳಿತಾಯದ ಪಾಠ ಹೇಳಿದ ಮೋದಿ: ಬೆಲೆ ಏರಿಕೆ, ನಿರುದ್ಯೋಗ;...

ಮಕ್ಕಳ ಶಿಕ್ಷಣ, ಮದುವೆ ಮತ್ತು ಮುಪ್ಪಿನ ಕಾಲಕ್ಕಾಗಿ ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡುವುದು ಭಾರತೀಯರ ಸಂಸ್ಕೃತಿಯಲ್ಲೇ ಬಂದಿದೆ. ಅವರಿಗೆ ಉಳಿತಾಯದ ಪಾಠ ಕಲಿಸುವ ಅಗತ್ಯವಿಲ್ಲ; ಬದಲಾಗಿ ಬಡತನದಿಂದ ಹೊರಬಂದ ಕುಟುಂಬಗಳು ಮತ್ತೆ ಸಂಕಷ್ಟಕ್ಕೆ...

ಆರ್‌ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?

ಶಿಕ್ಷಣದ ಸಮಾನ ಅವಕಾಶದ ಆಶಯಕ್ಕೆ ಸವಾಲಾಗುತ್ತಿರುವ ನಿಯಮಗಳು, ಖಾಸಗೀಕರಣ ಮತ್ತು ಸರ್ಕಾರಿ ಶಾಲೆಗಳ ದುಸ್ಥಿತಿ ಒಂದೇ ಶಾಲೆಯ ಆವರಣ, ಒಂದೇ ತರಗತಿಯ ಕೊಠಡಿ, ಒಂದೇ ಪಠ್ಯಪುಸ್ತಕ, ಒಂದೇ ಶಿಕ್ಷಕರು. ಆದರೆ ಆ ಮಕ್ಕಳ ಹಿನ್ನೆಲೆ...

ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಉಡುಪಿ ಶಾಖೆಯಲ್ಲಿ ಸಹಕಾರ ಸಪ್ತಾಹ 2026ರ ಅಂಗವಾಗಿ ಆಯೋಜಿಸಿದ್ದ ಹಿರಿಯ ಸಹಕಾರಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುನೈಟೆಡ್ ಸರ್ಜಿಕಲ್ಸ್, ಉಡುಪಿಯ ಮಾಲಕಿ ಪ್ರಿಯಾಂಕ ಶೆಟ್ಟಿ ಮಾತನಾಡಿ, ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯು ಜನಸ್ನೇಹಿ ಸಂಸ್ಥೆಯಾಗಿ ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುವ ಮೂಲಕ ಸಹಕಾರ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಹಕಾರ ಕ್ಷೇತ್ರದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಇನ್ನಂಜೆ ಸಹಕಾರಿ ವ್ಯವಸಾಯಿಕ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಧಾಕೃಷ್ಣ ರಾವ್, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿವೃತ್ತ ಶಾಖಾ ವ್ಯವಸ್ಥಾಪಕಿ ನಯನ ಆಶಾಮಣಿ ಹಾಗೂ ಉಡುಪಿ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರುಕಟ್ಟೆ ಸಂಘದ ನಿವೃತ್ತ ಸಿಬ್ಬಂದಿ ಸುಧಾಕರ್ ಡಿ. ಅಮೀನ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸೊಸೈಟಿಯ ಅಧ್ಯಕ್ಷ ಸಹಕಾರ ರತ್ನ ಎಚ್. ವಸಂತ್ ಬೆರ್ನಾರ್ಡ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಖಾ ಪ್ರಬಂಧಕಿ ನಿಶಾ ಸುಹೈಲ್ ಡೇನಿಯಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಪೂಜಾರಿ ವಂದಿಸಿದರು. ಸಿಬ್ಬಂದಿಗಳಾದ ರಕ್ಷಿತಾ ಹಾಗೂ ಅಪೇಕ್ಷಾ ಸನ್ಮಾನ ಪತ್ರ ವಾಚಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶೃಂಗೇರಿ | ಪೋಕ್ಸೋ: ಬಾಲಕಿಗೆ ಕಾರಿನಲ್ಲೇ ದೌರ್ಜನ್ಯ; ಆರೋಪಿ ಬಂಧನ 

ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಗ್ಗಾ–ಶೃಂಗೇರಿ ಮಾರ್ಗದಲ್ಲಿ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ಲೈಂಗಿಕ...

ಚಿಕ್ಕಮಗಳೂರು | ರಸ್ತೆ ತಡೆದು ಪ್ರತಿಭಟನೆ: ಶೃಂಗೇರಿ ಕ್ಷೇತ್ರ ಒಕ್ಕೂಟ 

ಮಲೆನಾಡಿನಲ್ಲಿ ಕಾಡುಪ್ರಾಣಿಗಳ ದಾಳಿಯನ್ನು ತಡೆಗಟ್ಟಲು ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ನರಸಿಂಹರಾಜಪುರ...

ರಾಯಚೂರು | ಮೂಲಸೌಕರ್ಯ ಕಲ್ಪಿಸಲು ವಿಫಲ: ಮಹಾನಗರ ಪಾಲಿಕೆ ವಿರುದ್ಧ ನ.25ರಂದು ಪಾದಯಾತ್ರೆ

ನಗರದ ವಾರ್ಡ 28 ಆಶ್ರಯ ಕಾಲೋನಿ ನಿವಾಸಿಗಳಿಗೆ ಕನಿಷ್ಟ ಮೂಲಭೂತ ಸೌಕರ್ಯ...