ಉಡುಪಿ | ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಜಾತಿ ನಿಂದನೆ, ಜೀವ ಬೆದರಿಕೆ ಆರೋಪ; ವ್ಯಕ್ತಿ ಬಂಧನ

Date:

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ, ಜಾತಿನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಿರುವ ಆರೋಪದಲ್ಲಿ ಓರ್ವ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.

- Advertisement -

ಕಾರ್ಕಳ ಕೇರ್ವಾಶೆ ನಲೆದಬೆಟ್ಟು ನಿವಾಸಿ ಸುಧೀರ ಬಂಗೇರ(48) ಬಂಧಿತ ಆರೋಪಿ. ‘ನಮ್ಮ ಕಾರ್ಲ’ ಎಂಬ ಫೇಸ್‌ಬುಕ್ ಖಾತೆಯಲ್ಲಿ ಕರ್ನಾಟಕ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಪೋಟೊ ಹಾಕಿ ಅದರಲ್ಲಿ ‘ಆರೆಸ್ಸೆಸ್ ಇನ್ನು ಎರಡು ವರ್ಷಗಳ ಅವಧಿ ಕೋಮು ವಾದವನ್ನು ಉಸಿರಾಡುವುದಿಲ್ಲ. ಕಾರಣ ಗೃಹಮಂತ್ರಿ ಸ್ಥಾನದಲ್ಲಿ ಸೌಮ್ಯ ಸ್ವಭಾವದ ಸಚಿವರಿಲ್ಲ’ ಎಂಬ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಫೋಸ್ಟ್ ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಈ ಪೋಸ್ಟ್‌ಗೆ ಸುಧೀರ್ ಬಂಗೇರ ಎಂಬಾತ ಜೂ.6ರಂದು ಕಮೆಂಟ್ ಹಾಕಿದ್ದು, ಅದರಲ್ಲಿ ಅವಹೇಳನಕಾರಿಯಾಗಿ ಓರ್ವ ದಲಿತ ಸಚಿವರ ವಿರುದ್ಧ ಕಮೆಂಟ್ ಹಾಕಿರುವುದಾಗಿ ದೂರಲಾಗಿದೆ. ಸುಧೀರ ಬಂಗೇರ ಸಾಮಾಜಿಕ ಜಾಲತಾಣದಲ್ಲಿ ಸಾಮಾಜಿಕ ಶಾಂತಿ ಮತ್ತು ಸಾಮರಸ್ಯಕ್ಕೆ ಹಾನಿ ಮಾಡುವ ಚಟುವಟಿಕೆಯಲ್ಲಿ ತೊಡಗಿ ದಲಿತ ಸಚಿವರಿಗೆ ಜಾತಿ ನಿಂದನೇ ಮಾಡಿ ಜೀವ ಬೆದರಿಕೆ ಹಾಕಿರುವುದಾಗಿ ಕಾರ್ಕಳ ನಿಟ್ಟೆ ಅತ್ತೂರಿನ ಸುರೇಶ ಚೇತನಹಳ್ಳಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಪ್ರಕರಣದ ಆರೋಪಿ ಸುಧೀರ ಬಂಗೇರನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಕೊಲೆ ಪ್ರಕರಣ: ಎಸ್‌ಐಟಿ ತನಿಖೆ ಚುರುಕು, ತಾಯಿ ಕುಸುಮಾವತಿ ರಕ್ತದ ಮಾದರಿ ಸಂಗ್ರಹ

ಧರ್ಮಸ್ಥಳದಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ...

ಚಿಕ್ಕಮಗಳೂರು | ಹಬ್ಬಕ್ಕೆ ಹೊಸ ಬಟ್ಟೆ ಖರೀದಿಸಲು ಹೋಗಿ ಯುವಕ ಸಾವು 

ಜಿಲ್ಲೆಯ ಅಜ್ಜಂಪುರ ತಾಲೂಕಿನ ನವರಾತ್ರಿ ಸಡಗರದಲ್ಲಿದ್ದ ವೇಳೆ ಬಟ್ಟೆ ಖರೀದಿಸಲು ಹೋಗಿದ್ದ...

ವಿಜಯಪುರ | ಮತದಾರರ ಹಕ್ಕು ಕಸಿಯುವ ಪ್ರಯತ್ನ: ಎಸ್‌ಐಆರ್ ವಿರುದ್ಧ ವಿಜಯಪುರದಲ್ಲಿ ತಿರಂಗ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ...

ಉತ್ತರ ಕನ್ನಡ | ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.76.52ರಷ್ಟು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಉತ್ತರ ಕನ್ನಡ...