ಉಡುಪಿ | ವ್ಯಕ್ತಿ ವಿಶಿಷ್ಟತೆ–ಕಾರಂತರ ಚಿಂತನೆಯ ಮೂಲ : ಪ್ರೊ ನಿತ್ಯಾನಂದ ಬಿ. ಶೆಟ್ಟಿ

Date:

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಯಕ್ಷಗಾನ ಕೇಂದ್ರ ಹಾಗೂ ಎಂಜಿಎಂ ಸಂಧ್ಯಾ ಕಾಲೇಜುಗಳ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಇಂದು ‘ಯಕ್ಷಗಾನ ಮತ್ತು ಕಾರಂತರು’ ಕುರಿತು ವಿಚಾರಗೋಷ್ಠಿ ಮತ್ತು ‘ಅಳವು ಅರಿಯದ ಭಾಷೆ’ ಕೃತಿ ಬಿಡುಗಡೆ ಸಮಾರಂಭ ಜರುಗಿತು. ಈ ಸಂದರ್ಭದಲ್ಲಿ ‘ಯಕ್ಷಗಾನ ಕಲಾಮೀಮಾಂಸೆ ಮತ್ತು ಅಧ್ಯಯನ: ಕಾರಂತರ ದೃಷ್ಟಿಕೋನ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

- Advertisement -

ಯಕ್ಷಗಾನ ಕಲಾವಿದ ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ. ಎಂ.ಎಲ್. ಸಾಮಗ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಡಾ. ಕಾರಂತರು ಯಕ್ಷಗಾನಕ್ಕೆ ಅಪಾರ ಕೊಡುಗೆ ನೀಡಿ ಅದಕ್ಕೆ ಹೊಸ ದಿಕ್ಕನ್ನು ತೋರಿಸಿದ್ದಾರೆ ಎಂದರು. ಆದರೆ ಇಂದಿನ ಸಾಮಾಜಿಕ ಬದಲಾವಣೆಗಳು ಯಕ್ಷಗಾನದಲ್ಲಿ ಅತಿಯಾಗಿ ಅಳವಡಿಕೆಯಾಗುತ್ತಿರುವುದನ್ನು ಅವರು ವಿಷಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...
1010383135

ಉದ್ಯಮಿ ಹಾಗೂ ಶಿಕ್ಷಣ ತಜ್ಞ ಹರಿ ಪ್ರಸಾದ್ ರೈ ಅವರು ಡಾ. ನಿತ್ಯಾನಂದ ಶೆಟ್ಟಿ ಅವರ ‘ಅಳವು ಅರಿಯದ ಭಾಷೆ’ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು.

ತುಮಕೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹಾಗೂ ಖ್ಯಾತ ಚಿಂತಕ ಪ್ರೊ. ನಿತ್ಯಾನಂದ ಬಿ. ಶೆಟ್ಟಿ ವಿಶೇಷ ಉಪನ್ಯಾಸ ನೀಡುತ್ತ, ವ್ಯಕ್ತಿಗೆ ವಿಶಿಷ್ಟವಾದ ಸಾಮರ್ಥ್ಯವಿದೆ — ಇದು ಕಾರಂತರ ಲೋಕದೃಷ್ಟಿ. ಈ ದೃಷ್ಟಿಕೋನದ ಭಾಗವಾಗಿಯೇ ನಾವು ಕಾರಂತರನ್ನು ನೋಡಬೇಕು. ಹಾಗಾಗಿ, ಕಾರಂತರ ವಿಚಾರಗಳನ್ನು ರೂಪಿಸುವಲ್ಲಿ ಹೋಸಾಹತುಷಾಹಿ ಮತ್ತು ರಾಷ್ಟ್ರೀಯವಾದಿ ವಿದ್ಯಾಮಾನಗಳ ಪಾಲು ಎಷ್ಟು ಇದೆಯೋ, ಅದರ ಜೊತೆಯಲ್ಲಿಯೇ ಕಾರಂತರ ವ್ಯಕ್ತಿ ವಿಶಿಷ್ಟತೆಯ ಪಾಲೂ ಅಷ್ಟೇ ಇದೆ. ಇಂತಹ ಸಂಗಮದಲ್ಲೇ ಕಾರಂತರ ವ್ಯಕ್ತಿತ್ವ ಅರಳಿದೆ. ಈ ವಿಶಿಷ್ಟ ಸಾಂಸ್ಕೃತಿಕ ಸನ್ನಿವೇಶದ ಅರಿವು ಇಲ್ಲದೆ, ಕಾರಂತರ ಕಲಾಮೀಮಾಂಸೆಯನ್ನು ಸಮಗ್ರವಾಗಿ ಪರಿಶೀಲಿಸುವುದು ಸಾಧ್ಯವಿಲ್ಲ ಎಂದು ಅವರು ಹೇಳಿದರು.

1010383141

ಆಧುನಿಕ ಕಾಲದಲ್ಲಿ ಪಶ್ಚಿಮದ ಓದಿಗೆ ತೆರೆದುಕೊಂಡ ಕನ್ನಡದಲ್ಲಿ ಡಾ. ಎಂ. ಗೋವಿಂದ ಪೈ, ಡಿ.ವಿ.ಜಿ., ಮಾಸ್ತಿ, ಕುವೆಂಪು ಹಾಗೂ ಕಾರಂತರಂತಹ ಮಹನೀಯರು ಮಹತ್ತರ ಪಾತ್ರ ವಹಿಸಿದ್ದಾರೆ. ಪ್ಲೇಟೋವನ್ನು ಪರಿಚಯಿಸಿದ ಡಿ.ವಿ.ಜಿ., ಜೀಸಸ್‌ರನ್ನು ಪರಿಚಯಿಸಿದ ಗೋವಿಂದ ಪೈ, ಮತ್ತು ತಮ್ಮ ಕಲಾ ಜಿಜ್ಞಾಸೆಯ ಮೂಲಕ ಅನೇಕ ಕಲಾ ಮೀಮಾಂಸೆಗಳನ್ನು ಪರಿಚಯಿಸಿದ ಕಾರಂತರು—ಇವರ ಪ್ರಯತ್ನಗಳಿಂದ ಕನ್ನಡ ಸಾಹಿತ್ಯದ ಜಗತ್ತು ಅಪಾರವಾಗಿ ಶ್ರೀಮಂತಗೊಂಡಿದೆ ಎಂದು ಹೇಳಿದರು.

1010383139

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಮಾತನಾಡಿ, ಇಂದಿನ ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಕ್ಷೇತ್ರದ ಬಗ್ಗೆ ಆಸಕ್ತಿ ಮೂಡಿಸುವುದು ಶಿಕ್ಷಣ ಕ್ಷೇತ್ರದ ದೊಡ್ಡ ಸವಾಲಾಗಿದೆ ಎಂದರು. ಈ ಹಿನ್ನೆಲೆ, ಕಾರಂತರ ಸಮಕಾಲೀನ ವೈಜ್ಞಾನಿಕ ಚಿಂತನೆಗಳ ಅರಿವು ಮೂಡಿಸಲು ಟ್ರಸ್ಟ್ ಕಳೆದ ಒಂದು ವರ್ಷದಿಂದ ಕಾಲೇಜುಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ತಿಳಿಸಿದರು.

ಯಕ್ಷಗಾನ ಕೇಂದ್ರದ ಸಲಹಾ ಸಮಿತಿ ಅಧ್ಯಕ್ಷ ಪಳ್ಳಿ ಕಿಶನ್ ಹೆಗ್ಡೆ, ಎಂಜಿಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ನಾಯಕ್, ಎಂಜಿಎಂ ಪದವಿ ಕಾಲೇಜಿನ ಪ್ರಾಂಶುಪಾಲೆ ಪ್ರೊ. ವನಿತಾ ಮಯ್ಯ, ಉಪಪ್ರಾಂಶುಪಾಲ ಡಾ. ಎಂ. ವಿಶ್ವನಾಥ ಪೈ ಉಪಸ್ಥಿತರಿದ್ದರು. ಡಾ. ಶಿವರಾಮ ಕಾರಂತ ಟ್ರಸ್ಟ್‌ನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಅತಿಥಿಗಳನ್ನು ಸ್ವಾಗತಿಸಿದರೆ, ಸದಸ್ಯ ಸಂಚಾಲಕ ಜಿ.ಎಂ. ಶರೀಫ್ ಹೂಡೆ ವಂದಿಸಿದರು. ಸತೀಶ್ ಕೊಡವೂರು ಕಾರ್ಯಕ್ರಮ ನಿರೂಪಿಸಿದರು.

1010383137

ಬಳಿಕ ‘ಅಳವು ಅರಿಯದ ಭಾಷೆ’ ಕೃತಿಯ ವಿವಿಧ ಅಂಶಗಳ ಕುರಿತು ಮಂಗಳೂರು ವಿಶ್ವವಿದ್ಯಾಲಯದ ಡಾ. ರಾಜಾರಾಮ ತೋಳ್ಪಾಡಿ, ಚಿಂತಕ ಹಾಗೂ ನಿವೃತ್ತ ಪ್ರಾಧ್ಯಾಪಕ ಪ್ರೊ. ಕೆ. ಫಣಿರಾಜ್ ಮತ್ತು ಮಂಗಳೂರು ಬಲ್ಮಠ ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕ ಪ್ರೊ. ರಾಮದಾಸ ಪ್ರಭು ಉಪನ್ಯಾಸ ನೀಡಿ ಸಂವಾದದಲ್ಲಿ ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...