ಉಡುಪಿ | ಜನಪರ ಯೋಜನೆಗಳ ಬಗ್ಗೆ ಬಿಜೆಪಿಗೆ ಹೊಟ್ಟೆಕಿಚ್ಚು: ರಮೇಶ್ ಕಾಂಚನ್

Date:

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಚುನಾವಣಾಪೂರ್ವದಲ್ಲಿ ಜನರಿಗೆ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಜನಾಭಿಪ್ರಾಯವನ್ನು ಪಡೆದಿದ್ದು ಕರ್ನಾಟಕದ ರಾಜ್ಯದ ಜನಸಾಮಾನ್ಯರು ಈ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿ ತಮ್ಮ ಜೀವನವನ್ನು ನಡೆಸುತ್ತಿದ್ದಾರೆ. ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳನ್ನು ದೇಶದ ಇತರ ರಾಜ್ಯಗಳು ಕೂಡ ಮಾದರಿಯಾಗಿ ಪಡೆದು, ಅದನ್ನು ಅನುಕರಣೆ ಮಾಡುತ್ತಿರುವುದು ಬಿಜೆಪಿ ಪಕ್ಷಕ್ಕೆ ಮುಜುಗರವನ್ನುಂಟು ಮಾಡಿದೆ. ಇತರ ರಾಜ್ಯಗಳಲ್ಲಿ ಗ್ಯಾರಂಟಿ ಹೆಸರಿನಲ್ಲಿ ಯೋಜನೆಗಳನ್ನು ನೀಡುತ್ತಿರುವ ಬಿಜೆಪಿ ಪಕ್ಷಕ್ಕೆ ಕರ್ನಾಟಕದ ಕಾಂಗ್ರೆಸ್‌ ಪಕ್ಷ ನೀಡುತ್ತಿರುವ ಜನಪರ ಯೋಜನೆಗಳ ಬಗ್ಗೆ ಹೊಟ್ಟೆಉರಿ ತಡೆಯಲಾಗದೆ ಟೀಕೆ ಹಾಗೂ ವಿರೋಧ ಮಾಡುತ್ತಾ ಬಂದಿದ್ದು ಇದಕ್ಕೆ ಬಿಜೆಪಿ ಪಕ್ಷ ಹಾಗೂ ಬಿಜೆಪಿ ಶಾಸಕರ ಗ್ಯಾರಂಟಿ ಸಮಾವೇಶದ ಕುರಿತು ಜನವಿರೋಧಿ ಹೇಳಿಕೆಯೇ ಸಾಕ್ಷಿ ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಉಡುಪಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶವನ್ನು ಹಮ್ಮಿಕೊಂಡಿದ್ದು ಇದಕ್ಕೆ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ಅಪಸ್ವರ ಪ್ರಾಂಭವಾಗಿರುವುದು ಖಂಡನೀಯ. ರಾಜ್ಯ ಸರ್ಕಾರದ ನೇತೃತ್ವದಲ್ಲಿ ಆಯೋಜಿಸಿರುವ ಗ್ಯಾರಂಟಿ ಯೋಜನೆಗಳ ಸಮಾವೇಶ ಕಾರ್ಯಕ್ರಮವು ಕೇವಲ ಸರಕಾರಿ ಕಾರ್ಯಕ್ರಮವಾಗಿರುತ್ತದೆ ಎಂದು ಬಿಜೆಪಿ ಶಾಸಕರಿಗೆ ತಿಳಿಸಲು ಬಯಸುತ್ತೇನೆ. ಸರಕಾರಿ ಹಣದಲ್ಲಿ ತಮ್ಮ ರಾಜಕೀಯ ಪ್ರೇರಿತ ಕಾರ್ಯಕ್ರಮ ಮಾಡುತ್ತಾ ಬಂದ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರಿಗೆ ತಮ್ಮ ರಾಜಕೀಯ ಪ್ರಚಾರಕ್ಕೆ ನಡೆಸಿದ ಕಾರ್ಕಳ ಉತ್ಸವ, ಬೈಂದೂರು ಉತ್ಸವ, ಕಾಪು ಬೀಚ್ ಉತ್ಸವ, ಪರಶುರಾಮನ ಥೀಮ್ ಪಾರ್ಕ್ ಉದ್ಘಾಟನಾ ಸಮಾರಂಭಕ್ಕೆ ‌ಎಲ್ಲಿಂದ ಹಣ ಸಂಗ್ರಹವಾಗಿತ್ತು ಎಂದು ಆತ್ಮಾವಲೋಕನ ಮಾಡಿಕೊಳ್ಳಲಿ. ಶಾಸಕರಾಗಿ, ಸಚಿವರಾಗಿ ಅನೇಕ ಸರಕಾರಿ ಕಾರ್ಯಕ್ರಮಗಳನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಂಡು ಅನೇಕ ರಾಜಕೀಯ ಪ್ರೇರಿತ ಕಾರ್ಯಕ್ರಮವನ್ನು ನಡೆಸಿದ್ದ ತಮಗೆ ರಾಜ್ಯ ಸರ್ಕಾರದಿಂದ ನಡೆಯಲಿರುವ ಗ್ಯಾರಂಟಿ ಸಮಾವೇಶವು ರಾಜಕೀಯ ಕಾರ್ಯಕ್ರಮದಂತೆ ಕಾಣುವುದರಲ್ಲಿ ಯಾವುದೇ ಸಂಶಯವಿಲ್ಲ. ಜನಸಾಮಾನ್ಯರ ಬದುಕಿಗೆ ದಾರಿದೀಪದಂತಿರುವ ಪಂಚ ಗ್ಯಾರಂಟಿ ಯೋಜನೆಗಳು ಅವರ ಬದುಕಿಗೆ ಆಧಾರವಾಗಿದೆ. ಇಂತಹ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಈಗಾಗಲೇ ರಾಜ್ಯ ಮಟ್ಟದ, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಸಮಿತಿಯು ರಚನೆಗೊಂಡಿದ್ದು ಈ ಯೋಜನೆಗಳು ಇನ್ನಷ್ಟು ಆಳವಾಗಿ ಅನುಷ್ಠಾನಗೊಳಿಸಲು ಗ್ರಾಮ ಹಾಗೂ ವಾರ್ಡ್ ಮಟ್ಟದಲ್ಲಿ ವಾರ್ಡ್ ಸಮಿತಿ ಹಾಗೂ ಗ್ರಾಮ ಪಂಚಾಯತ್ ಗ್ಯಾರಂಟಿ ಸಮಿತಿಗಳು ರಚನೆಗೊಂಡಿದ್ದು ಕಾಂಗ್ರೆಸ್ ಪಕ್ಷವು ಸದಾ ದೀನ ದಲಿತರ, ನಿರ್ಗತಿಕರ ಹಾಗೂ ಬಡ ಜನರ ಪರವಾಗಿ ಕೆಲಸ ಮಾಡಲು ಸದಾ ಬದ್ಧವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

ಜನಸಾಮಾನ್ಯರ ಪರವಾಗಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಪಕ್ಷ ಹಾಗೂ ಬಿಜೆಪಿ ಶಾಸಕರು ಇನ್ನಾದರೂ ತಮ್ಮ ಸಹಮತ ತೋರಲು ಭಗವಂತನು ಬುದ್ಧಿ ಶಕ್ತಿಯನ್ನು ಕರುಣಿಸಲಿ ಹಾಗೂ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿರುವ ಬಿಜೆಪಿ ಶಾಸಕರಿಗೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಮುಂದಿನ ಎಲ್ಲಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಯೋಜನೆಗಳ ಲಾಭ ಅರ್ಹರಿಗೆ ತಲುಪಲಿ: ಡಾ. ಯತೀಂದ್ರ

ಸರ್ಕಾರದ ವಿವಿಧ ಇಲಾಖೆಗಳ ಸೇವೆ ಮತ್ತು ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ...

ಮಂಗಳೂರು | ಶಿಲ್ಪಿ ಉಳ್ಳಾಲ ಶ್ರೀನಿವಾಸ ಮಲ್ಯ ಜನ್ಮ ದಿನಾಚರಣೆ

ಆಧುನಿಕ ಮಂಗಳೂರಿನ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ ಶಿಲ್ಪಿ ದಿವಂಗತ ಉಳ್ಳಾಲ...

ಮಂಗಳೂರು | ಕನ್ನಡ-ಬ್ಯಾರಿ ನಿಘಂಟು: ಮುದ್ರಣ ಪೂರ್ವ ಪ್ರತಿ ಹಸ್ತಾಂತರ

ಕಳೆದ ಒಂದು ವರ್ಷದಿಂದ ಬ್ಯಾರಿ ಸಮುದಾಯದ ಸುಮಾರು 20ಕ್ಕೂ ಹೆಚ್ಚು ಬರಹಗಾರರ...

ಕನ್ನಡ ಭಾಷೆ, ಸಂಸ್ಕೃತಿ ಉಳಿಸುವುದು ಎಲ್ಲರ ಹೊಣೆ: ಎ.ಎಸ್. ಪೊನ್ನಣ್ಣ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮರಗೋಡು ಸರ್ಕಾರಿ ಹಿರಿಯ ಪ್ರಾಥಮಿಕ...