ಉಡುಪಿ | ಚುನಾವಣೆ ಬಳಿಕ ಗ್ಯಾಸ್ ಸಿಲಿಂಡರ್ ಶಾಕ್: ರಮೇಶ್ ಕಾಂಚನ್

Date:

ಪಂಚ ರಾಜ್ಯಗಳ ಚುನಾವಣೆ ಮುಗಿಯುವ ತನಕ ಕಾದು ಏಕಾಏಕಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ರೂ.993/- ಭಾರೀ ಏರಿಕೆ ಮಾಡುವ ಮೂಲಕ ಕೇಂದ್ರದ ಮೋದಿ ಸರಕಾರವು ದೇಶದ ಜನತೆಗೆ ಶಾಕ್ ನೀಡಿದ್ದು ಇದಕ್ಕೆ ಬಿಜೆಪಿ ನಾಯಕರು ಸ್ಪಷ್ಟನೆ ನೀಡಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಯುದ್ದವನ್ನು ನೆಪವಾಗಿರಿಸಿಕೊಂಡ ಕೇಂದ್ರದ ಬಿಜೆಪಿ ಸರಕಾರವು ಗ್ಯಾಸ್ ಪೊರೈಕೆಯಲ್ಲಿ ಸಮಸ್ಯೆ ಮಾಡಿದ್ದಲ್ಲದೆ ಮಾರ್ಚ್ ತಿಂಗಳಲ್ಲಿ ರೂ.114ಕ್ಕೆ ಏರಿಸಿದರೆ ಏಪ್ರಿಲ್‌ನಲ್ಲಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ರೂ.195ಕ್ಕೆ ಏರಿಸಿ ಈಗ ಪುನಃ ಮೇ ತಿಂಗಳಿಗೆ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಮತ್ತೆ ರೂ.993ಕ್ಕೆ ಏರಿಸಿರುವುದರ ಮೂಲಕ ನರೇಂದ್ರ ಮೋದಿಯವರು ಬೆಲೆ ಏರಿಕೆಯಲ್ಲಿ ನೂತನ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ವಾಣಿಜ್ಯ ಬಳಕೆಯ ಎಲ್.ಪಿ.ಜಿ ಸಿಲಿಂಡರ್ ಬೆಲೆಯಲ್ಲಿ ರೂ.993ಗಳಷ್ಟು ಭಾರಿ ಏರಿಕೆ ಕಂಡಿದ್ದು ಇದರಿಂದ ಹೋಟೆಲ್ ಮಾಲೀಕರಿಗೆ ಮತ್ತು ಜನಸಾಮಾನ್ಯರಿಗೆ ಮತ್ತೊಂದು ಆಘಾತ ನೀಡಿದೆ. ಈ ಬೆಲೆ ಏರಿಕೆಯು ಹೋಟೆಲ್ ಉದ್ಯಮದ ಮೇಲೆ ತೀವ್ರ ಪರಿಣಾಮ ಬೀರಲಿದ್ದು ಊಟ, ತಿಂಡಿ ಮತ್ತು ಪಾನೀಯಗಳ ಬೆಲೆಗಳು ಹೆಚ್ಚಾಗುವ ಅನಿವಾರ್ಯತೆ ಸೃಷ್ಟಿಯಾಗಿದೆ. ಇದರಿಂದ ಸಾಮಾನ್ಯ ಜನರು ಪರಿಸ್ಥಿತಿ ಇನ್ನಷ್ಟು ಕೆಟ್ಟ ಹಂತಕ್ಕೆ ತಲುಪಲಿದ್ದು ಬಿಜೆಪಿಗರ ನಾಟಕಕ್ಕೆ ಜನರು ಬೀದಿಗೆ ಬಂದು ಪ್ರತಿಭಟಿಸುವ ದಿನ ದೂರವಿಲ್ಲ.

ಹಿಂದೆಲ್ಲಾ ಕಾಂಗ್ರೆಸ್ ಸರಕಾರ ಬೆಲೆ ಏರಿಕೆ ಮಾಡಿದಾಗ ಶೋಭಾ ಕರಂದ್ಲಾಜೆ, ಸ್ಮೃತಿ ಇರಾನಿ ಸಹಿತ ಬಿಜೆಪಿ ಮಹಿಳಾ ಮಣಿಗಳು ರಸ್ತೆ ಮಧ್ಯ ಮಲಗಿ ಉರುಳು ಸೇವೆ ಮಾಡುತ್ತಿದ್ದವರು ಈಗ ಮೌನವಾಗಿದ್ದಾರೆ. ವಾಣಿಜ್ಯ ಸಿಲಿಂಡರ್ ಬೆಲೆ ಏರಿಸಿದಂತೆ ಗುಟ್ಟಲ್ಲಿ ಮನೆ ಬಳಕೆ ಸಿಲಿಂಡರ್ ಬೆಲೆಯನ್ನು ಕೂಡ ಸದ್ಯದಲ್ಲಿಯೇ ಏರಿಸಲಿದ್ದು ಜನರಿಗೆ ಇವರ ನಾಟಕಗಳು ಅರ್ಥವಾಗಿದ್ದು ಸೂಕ್ತ ಸಮಯದಲ್ಲಿ ಸೂಕ್ತ ಉತ್ತರ ನೀಡಲಿದ್ದಾರೆ. ಬಿಜೆಪಿಗರಿಗೆ ಮಾನ ಮರ್ಯದೆ ಎನ್ನುವುದು ಸ್ವಲ್ಪವಾದರೂ ಇದ್ದಲ್ಲಿ ಏರಿಸಿರುವ ಸಿಲಿಂಡರ್ ಬೆಲೆಯನ್ನು ಕೂಡಲೇ ಇಳಿಸಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...