ಉಡುಪಿ‌ | ಬೈಲೂರು ವಾರ್ಡಿನ ರಸ್ತೆಗೆ ಶೀಘ್ರ ಡಾಮರೀಕರಣಕ್ಕೆ ಆಗ್ರಹಿಸಿ ಪೌರಾಯುಕ್ತರಿಗೆ ಮನವಿ

Date:

31ನೇ ಬೈಲೂರು ವಾರ್ಡಿನ ಶ್ರೀನಿವಾಸ ದೇವಸ್ಥಾನದ ಮುಖ್ಯರಸ್ತೆಯಿಂದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದವರೆಗೆ ರಸ್ತೆಯನ್ನು ಸಂಪೂರ್ಣ ಡಾಮರೀಕರಣಗೊಳಿಸುವಂತೆ ಆಗ್ರಹಿಸಿ, ವಾರ್ಡಿನ ಮಾಜಿ ನಗರಸಭಾ ಸದಸ್ಯ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ನಗರಸಭೆಯ ಪೌರಾಯುಕ್ತ ಮಹಾಂತೇಶ್ ಹಂಗರಗಿ ಅವರಿಗೆ ಮನವಿ ಸಲ್ಲಿಸಲಾಯಿತು.

- Advertisement -

31ನೇ ಬೈಲೂರು ವಾರ್ಡಿನ ಶ್ರೀನಿವಾಸ ದೇವಸ್ಥಾನದಿಂದ ಪಿ.ಪಿ.ಸಿ. ಕಾಲೇಜಿನ ಕಡೆಗೆ ಸಾಗುವ ಮುಖ್ಯರಸ್ತೆಯ ಒಳಚರಂಡಿ ಪೈಪ್‌ಲೈನ್ ಸಣ್ಣ ಗಾತ್ರದಲ್ಲಿದ್ದ ಕಾರಣ ಕಳೆದ 13 ವರ್ಷಗಳಿಂದ ನಿರಂತರವಾಗಿ ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತಿತ್ತು. ಇದರಿಂದ ಸ್ಥಳೀಯ ನಾಗರಿಕರು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನಗರಸಭೆಯಿಂದ ಸುಮಾರು 97 ಲಕ್ಷ ರೂ. ಅನುದಾನ ಮೀಸಲಿಡಲಾಗಿದ್ದು, ದೊಡ್ಡ ಗಾತ್ರದ ಒಳಚರಂಡಿ ಪೈಪ್‌ಲೈನ್ ಅಳವಡಿಕೆ ಹಾಗೂ ರಸ್ತೆಯನ್ನು ಪೇವರ್ ಫಿನಿಷ್ ಮಾದರಿಯಲ್ಲಿ ಸಂಪೂರ್ಣ ಡಾಮರೀಕರಣಗೊಳಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಒಳಚರಂಡಿ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ.

ಆದರೆ, ಪಿ.ಪಿ.ಸಿ. ಕಾಲೇಜಿನ ಕಡೆಗೆ ಸಾಗುವ ರಸ್ತೆಯಲ್ಲಿ ಕಾಮಗಾರಿ ನಡೆಸುವ ಸಂದರ್ಭದಲ್ಲಿ ಬಂಡೆ ಎದುರಾದ ಕಾರಣ ಕಾಮಗಾರಿ ವಿಳಂಬವಾಗಿತ್ತು. ಈ ಪ್ರದೇಶದಲ್ಲಿ ವಸತಿ ಕಟ್ಟಡಗಳಿರುವುದರಿಂದ ಬ್ಲಾಸ್ಟಿಂಗ್ ಮಾಡಲು ಸಾಧ್ಯವಾಗದೆ, ಮೆಷಿನ್ ಕಟಿಂಗ್ ಮೂಲಕ ಬಂಡೆಗಳನ್ನು ಕೊರೆಯಬೇಕಾಗಿತ್ತು. ಮಳೆಗಾಲದ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಲು ಹೆಚ್ಚಿನ ಸಮಯ ಬೇಕಾಗಿತ್ತು.

ಇದೀಗ ಶ್ರೀನಿವಾಸ ದೇವಸ್ಥಾನದ ಮುಖ್ಯರಸ್ತೆಯಿಂದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದವರೆಗಿನ ಒಳಚರಂಡಿ ಕಾಮಗಾರಿ ಪೂರ್ಣಗೊಂಡಿದ್ದು, ಡಾಮರ್ ಪ್ಲಾಂಟ್ ಆರಂಭವಾದ ತಕ್ಷಣ ರಸ್ತೆ ಡಾಮರೀಕರಣ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ಪೌರಾಯುಕ್ತರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ ಎಂದು ರಮೇಶ್ ಕಾಂಚನ್ ತಿಳಿಸಿದರು.

ಈಗಾಗಲೇ ಡಾಮರ್ ಪ್ಲಾಂಟ್‌ಗಳು ಪುನರಾರಂಭಗೊಂಡಿರುವುದರಿಂದ ನಗರಸಭೆಯ ಪೌರಾಯುಕ್ತರು ತಕ್ಷಣ ಮುತುವರ್ಜಿ ವಹಿಸಿ ಡಾಮರೀಕರಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಕಾಮಗಾರಿ ವಿಳಂಬದಿಂದ ಸ್ಥಳೀಯರು ಹಾಗೂ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಆದಷ್ಟು ಶೀಘ್ರ ರಸ್ತೆ ಸಂಚಾರಕ್ಕೆ ಮುಕ್ತವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ಮಾಜಿ ಸದಸ್ಯ ವಿಜಯ ಪೂಜಾರಿ, ನಾಮನಿರ್ದೇಶಿತ ಸದಸ್ಯ ಮೊಹಮ್ಮದ್, ಪ್ರಮುಖರಾದ ಗಣೇಶ್ ನೆರ್ಗಿ, ಚಂದ್ರಮೋಹನ್ ಚಿಟ್ಪಾಡಿ, ಸತೀಶ್ ಕುಮಾರ್ ಮಂಚಿ, ಸತೀಶ್ ಕೊಡವೂರು, ಮೊಹಮ್ಮದ್ ಶೀಶ್, ಸ್ಥಳೀಯರಾದ ಮ್ಯಾಕ್ಸಿಮ್ ಡಿ’ಸೋಜಾ, ಅನಂತಕೃಷ್ಣ ಪ್ರಭು, ಕೃಷ್ಣಾನಂದ ಪೈ, ಪ್ರೀತಿ ಸಾಲಿನ್ಸ್, ಶಹನವಾಜ್, ಕ್ರಿಸ್ಟಿನಾ ಬಂಗೇರ, ಗೀತಾ ರವಿ, ಶೋಭಾ ಭಂಡಾರಿ, ಯಶಸ್ವಿನಿ, ಸಂಜಯ್ ಆಚಾರ್ಯ, ಪ್ರಜ್ವಲ್ ಸೇರಿದಂತೆ ಸ್ಥಳೀಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನ.12ರಂದು ಜಿಲ್ಲಾಮಟ್ಟದ ಯುವಜನೋತ್ಸವ

ಯುವಜನರಲ್ಲಿ ಅಡಗಿರುವ ಸೃಜನಶೀಲ ಪ್ರತಿಭೆ ಹಾಗೂ ಕಲಾತ್ಮಕ ಅಭಿವ್ಯಕ್ತಿಯನ್ನು ಗುರುತಿಸಿ ಪ್ರೋತ್ಸಾಹಿಸುವ...

ಚಿಕ್ಕಮಗಳೂರು | SIR ಪ್ರಕ್ರಿಯೆ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡಿದಂತೆ; ಸೈಯದ್ ಹನೀಫ್

ಕೇಂದ್ರದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ SIR ಪ್ರಕ್ರಿಯೆ ಆರಂಭಿಸಿದ ನಂತರ...

ವಿಜಯಪುರ | ಜನಗಣತಿ-2027 ನಿಖರವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

ಮುಂದಿನ ಹತ್ತು ವರ್ಷಗಳ ಅಭಿವೃದ್ಧಿ ಯೋಜನೆ, ಬಜೆಟ್ ಹಂಚಿಕೆ, ಎಸ್‌ಸಿಪಿ-ಟಿಎಸ್‌ಪಿ ಅನುದಾನ...

ಗೆಲುವಿಗಿಂತ ಕ್ರೀಡಾಸ್ಫೂರ್ತಿ ಮುಖ್ಯ: ಪತ್ರಕರ್ತರಿಗೆ ಸಚಿವ ನರೇಂದ್ರಸ್ವಾಮಿ ಕಿವಿಮಾತು

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ...