ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಉಡುಪಿ ನಗರಸಭಾ ವ್ಯಾಪ್ತಿಯ ಇಂದ್ರಾಳಿಯ ಮಂಚಿ ಕುಮೇರಿ ಹಾಗೂ ಆದಿ ಉಡುಪಿ ಮೀನು ಮಾರುಕಟ್ಟೆ ಸಮೀಪದ ಎರಡು ಅಂಗನವಾಡಿ ಕೇಂದ್ರಗಳ ನೂತನ ಕಟ್ಟಡ ಕಾಮಗಾರಿಗೆ ಇಂದು ಬೆಳಿಗ್ಗೆ ಶಿಲಾನ್ಯಾಸ ನೆರವೇರಿಸಲಾಯಿತು.
ಸ್ಥಳೀಯ ಶಾಸಕ ಯಶ್ ಪಾಲ್ ಸುವರ್ಣ, ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಸದಸ್ಯರಾದ ಸತೀಶ್ ಮಂಚಿ, ದಿಲೀಪ್ ಹೆಗ್ಡೆ, ಮಾಜಿ ನಗರಸಭಾ ಸದಸ್ಯರು, ಇಲಾಖಾ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಈ ಎರಡು ಅಂಗನವಾಡಿ ಕೇಂದ್ರಗಳ ನೂತನ ಕಟ್ಟಡ ನಿರ್ಮಾಣಕ್ಕಾಗಿ ರೂ. 40 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದೆ. ಅನುದಾನ ಬಿಡುಗಡೆಗೆ ಸಹಕಾರ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಕೃತಜ್ಞತೆ ಸಲ್ಲಿಸಿದರು.






