ಉಡುಪಿ | ವಿದ್ಯಾರ್ಥಿಗಳ ಧ್ವನಿಯನ್ನು ಲಾಠಿಯಿಂದ ಹತ್ತಿಕ್ಕಲು ಸಾಧ್ಯವಿಲ್ಲ : ರಮೇಶ್ ಕಾಂಚನ್

Date:

ನೀಟ್ ಪರೀಕ್ಷೆಯಲ್ಲಿ ನಡೆಯಲಾದ ಅಕ್ರಮವನ್ನು ಖಂಡಿಸಿ ಸಂಸತ್ತಿನತ್ತ ಮೆರವಣಿಗೆ ಹೊರಟಿದ್ದ ಭಾರಿ ಸಂಖ್ಯೆಯ ವಿದ್ಯಾರ್ಥಿಗಳ ಮೇಲೆ ಸಂಸತ್ ಭವನದ ಬಳಿ ಭದ್ರತಾ ಪಡೆಗಳು ಅಶ್ರುವಾಯು ಮತ್ತು ಲಾಠಿಚಾರ್ಜ್ ಪ್ರಯೋಗಿಸುವಂತೆ ಪ್ರೇರೆಪಿಸಿದ ಕೇಂದ್ರ ಸರಕಾರದ ನಡೆ ಖಂಡನೀಯ, ಅಸಾಂವಿಧಾನಿಕ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ನೀಟ್ ಪರೀಕ್ಷೆಯ ಪ್ರಶ್ನಾಪತ್ರಿಕೆ ಸೋರಿಕೆ ಮಾಡಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿರುವುದು ಹಾಗೂ ಹಲವಾರು ವಿದ್ಯಾರ್ಥಿಗಳು ಇದಕ್ಕಾಗಿ ತಮ್ಮ ಪ್ರಾಣವನ್ನೇ ಕಳೆದುಕೊಂಡಿರುವುದನ್ನು ಖಂಡಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಮಾಡಿದ ಕೇಂದ್ರ ಸರಕಾರದ ನಡೆ ಕಳವಳಕಾರಿಯಾಗಿದೆ.
ನೀಟ್ ಪರೀಕ್ಷೆ ಸೋರಿಕೆಯಾಗಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಿದ್ದಲ್ಲದೆ ಹಲವಾರು ವಿದ್ಯಾರ್ಥಿಗಳು ಇದಕ್ಕಾಗಿ ತಮ್ಮ ಪ್ರಾಣವನ್ನೇ ಕಳೆದುಕೊಂಡರೂ ಕೇಂದ್ರದ ಶಿಕ್ಷಣ ಸಚಿವ ಇದೊಂದು ಸಣ್ಣ ವಿಚಾರ ಎನ್ನುವಂತೆ ವರ್ತಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಅವರ ರಾಜೀನಾಮೆಯನ್ನು ಕೇಳಿದ ಮುಗ್ದ ವಿದ್ಯಾರ್ಥಿಗಳ ಮೇಲೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕುಮ್ಮಕ್ಕಿನಿಂದ ನಡೆದ ಲಾಠಿಚಾರ್ಚ್ ನಿಜಕ್ಕೂ ಬಿಜೆಪಿಗರಿಗೆ ವಿದ್ಯಾರ್ಥಿಗಳ ಭವಿಷ್ಯ ಮೇಲೆ ಇರುವ ಕಾಳಜಿ ಏನು ಎನ್ನುವುದು ಜಗಜ್ಜಾಹೀರು ಆಗಿದೆ. ಕೇಂದ್ರ ಸರಕಾರ ಪ್ರತಿಭಟನಾಕಾರರನ್ನು ಬಲಪ್ರಯೋಗದಿಂದ ಹತ್ತಿಕ್ಕಲು ಹಾಗೂ ಭಿನ್ನಾಭಿಪ್ರಾಯದ ಧ್ವನಿಯನ್ನು ಅಡಗಿಸಲು ಪ್ರಯತ್ನಿಸುತ್ತಿದೆ.
ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಶಾಂತಿಯುತವಾಗಿ ಆತಂಕ ವ್ಯಕ್ತಪಡಿಸುತ್ತಿದ್ದರೆ , ಅವರ ಬೇಡಿಕೆಗಳಿಗೆ ಸ್ಪಂದಿಸುವ ಬದಲು ಕೇಂದ್ರ ಸರ್ಕಾರ ಲಾಠಿ ಚಾರ್ಜ್ ಮೂಲಕ ಬಲಪ್ರಯೋಗಕ್ಕೆ ಮುಂದಾಗಿದೆ.

ನೀಟ್ (NEET) ಪರೀಕ್ಷೆಯಲ್ಲಿನ ಅಕ್ರಮಗಳಿಂದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಕೇಂದ್ರ ಶಿಕ್ಷಣ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು, ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೌನ ಕೂಡ ಸಂಶಯವನ್ನು ಮೂಡಿಸುತ್ತಿದೆ.

ಜಿಲ್ಲೆಯಲ್ಲಿ ಕೂಡ ಸಾವಿರಾರು ಮಂದಿ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯ ಅಕ್ರಮದಿಂದ ನೊಂದಿದ್ದಾರೆ. ನಮ್ಮ ಸಂಸದರು ಸದಾ ಕಾಲ ಪ್ರತಿ ವಿಚಾರದಲ್ಲೂ ಮಾತನಾಡುವವರು ನೀಟ್ ಗೊಂದಲದ ಬಗ್ಗೆ ಮೌನವಾಗಿರುವುದರ ಉದ್ದೇಶವೇನು? ಬೇರೆ ವಿಚಾರಗಳಿಗೆ ಸದಾ ರಾಜ್ಯದ ಮಂತ್ರಿಗಳ ರಾಜೀನಾಮೆ ಕೇಳುವು ಸಂಸದರು ನೀಟ್ ವಿಚಾರದಲ್ಲಿ ಯಾಕೆ ಮೌನವಾಗಿದ್ದಾರೆ. ಬಿಜೆಪಿ ಶಾಸಕರು ಸಂಸದರು ತಮ್ಮ ಅನುಕೂಲಕ್ಕೆ ತಕ್ಕಂತೆ ವರ್ತನೆ ಮಾಡುವುದರಲ್ಲಿ ನಿಸ್ಸೀಮರು ಎನ್ನುವುದು ಪದೇ ಪದೇ ಸಾಬೀತಾಗುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವುದು ಬಿಜೆಪಿಗರಿಗೆ ಒಂದು ರೀತಿ ಚಟವಾಗಿದ್ದು ನೀಟ್ ವಿಚಾರದಲ್ಲಿ ಕೂಡ ಅವರ ನಿರ್ಲಕ್ಷ್ಯ ಧೋರಣೆ ಮುಂದುವರೆದಿದೆ.

ವಿದ್ಯಾರ್ಥಿಗಳ ಭವಿಷ್ಯದ ವಿಚಾರದಲ್ಲಿ ಕೇಂದ್ರ ಸರಕಾರ, ಬಿಜೆಪಿ ಇಂತಹ ನಿರ್ಲಕ್ಷ್ಯ ಧೋರಣೆ ತಾಳಿದರೆ ಮುಂದೆ ಇದಕ್ಕೆ ಸೂಕ್ತ ಬೆಲೆ ತೆರುವುದು ಖಂಡಿತ. ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಯನ್ನು ಮನ್ನಿಸಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಪಡೆಯದೆ ಹೋದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿ ಸಮುದಾಯವೇ ಬಿಜೆಪಿ ಸರಕಾರವನ್ನು ಕಿತ್ತೆಸೆಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...